ರೇಷನ್ ಪಡೆಯಲು ಇನ್ಮುಂದೆ OTP ಸಾಕು…ಪಡಿತರ ಫಲಾನುಭವಿಗಳಿಗೆ ಸರ್ಕಾರದಿಂದ ಗುಡ್ನ್ಯೂಸ್!

ನ್ಯಾಯಬೆಲೆ ಅಂಗಡಿ ಮಾಲೀಕರು ಪ್ರತಿ ತಿಂಗಳು 01 ರಿಂದ 05 ರೊಳಗಾಗಿ ಪಡಿತರ ಚೀಟಿದಾರರ ಸಮ್ಮತಿಯನ್ನು ಓ.ಟಿ.ಪಿ ಮುಖಾಂತರ ಪಡೆಯಬೇಕು. ನಂತರ ದಿನಾಂಕ 06 ರಿಂದ 15 ರೊಳಗೆ ದಿನಾಂಕವನ್ನು ನಿಗಧಿಪಡಿಸಿ, ನಿಗಧಿಪಡಿಸಿದ ದಿನದಂತೆ ಓ.ಟಿ.ಪಿ ಮತ್ತು ಬಯೋಮೆಟ್ರಿಕ್ ಪಡೆದು, ನ್ಯಾಯಬೆಲೆ ಅಂಗಡಿ ಮಾಲೀಕರು 75ಕ್ಕಿಂತ ಹೆಚ್ಚಿನ ವಯಸ್ಸಿನ ಹಿರಿಯ ನಾಗರಿಕರು ಮನೆಯ ಬಾಗಿಲಿಗೆ ಪಡಿತರವನ್ನು ವಿತರಿಸುತ್ತಿರುತ್ತಾರೆ.
ಅನ್ನಸುವಿಧ ಯೋಜನೆ ಜಾರಿ
75 ವರ್ಷಕ್ಕಿಂತ ಹೆಚ್ಚಿನ ವಯಸ್ಸಿನ ಏಕ ಸದಸ್ಯ ಹಿರಿಯ ನಾಗರಿಕ ಪಡಿತರ ಚೀಟಿದಾರರಿಗೆ ಮನೆಬಾಗಿಲಿಗೆ ಆಹಾರಧಾನ್ಯ ವಿತರಿಸುವ ಉದ್ದೇಶದಿಂದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ‘ಅನ್ನಸುವಿಧ’ ಯೋಜನೆಯನ್ನು ಜಾರಿಗೆ ತಂದಿದೆ.

ಪಡಿತರ ಫಲಾನುಭವಿಗಳಿಗೆ ಸರ್ಕಾರದಿಂದ ಗುಡ್ನ್ಯೂಸ್!
ಮುಖ್ಯಮಂತ್ರಿಯವರು ಕಳೆದ ಬಜೆಟ್ನಲ್ಲಿ ಘೋಷಿಸಿದಂತೆ, 75 ವರ್ಷ ಮೇಲ್ಪಟ್ಟ ಏಕ ಸದಸ್ಯ ಹಿರಿಯ ನಾಗರಿಕರಿಗೆ ನ್ಯಾಯಬೆಲೆ ಅಂಗಡಿಗಳ ಮೂಲಕ ಮನೆಬಾಗಿಲಿಗೆ ಪಡಿತರ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ.
ಅದರನ್ವಯ ಚಿತ್ರದುರ್ಗ ಜಿಲ್ಲೆಯಲ್ಲಿ ಜನವರಿ–2026ರ ಅನ್ನಸುವಿಧ ಮಾಡ್ಯೂಲ್ನಲ್ಲಿ ಇ–ಕೆವೈಸಿ ಪೂರ್ಣಗೊಂಡ ಒಟ್ಟು 6,336 ಏಕ ಸದಸ್ಯ ಪಡಿತರ ಚೀಟಿದಾರರಿಗೆ ಈ ಸೌಲಭ್ಯ ಕಲ್ಪಿಸಲಾಗಿದೆ.
ತಾಲ್ಲೂಕುವಾರು ವಿವರ
ಚಳ್ಳಕೆರೆ ತಾಲ್ಲೂಕಿನಲ್ಲಿ 123 ನ್ಯಾಯಬೆಲೆ ಅಂಗಡಿಗಳ ವ್ಯಾಪ್ತಿಯಲ್ಲಿ 1,517 ಪಡಿತರ ಚೀಟಿದಾರರು, ಚಿತ್ರದುರ್ಗ ತಾಲ್ಲೂಕಿನಲ್ಲಿ 151 ಅಂಗಡಿಗಳಲ್ಲಿ 1,127 ಮಂದಿ, ಹಿರಿಯೂರು ತಾಲ್ಲೂಕಿನಲ್ಲಿ 92 ಅಂಗಡಿಗಳಲ್ಲಿ 1,467 ಮಂದಿ, ಹೊಳಲ್ಕೆರೆ ತಾಲ್ಲೂಕಿನಲ್ಲಿ 96 ಅಂಗಡಿಗಳಲ್ಲಿ 869 ಮಂದಿ, ಹೊಸದುರ್ಗ ತಾಲ್ಲೂಕಿನಲ್ಲಿ 110 ಅಂಗಡಿಗಳಲ್ಲಿ 921 ಮಂದಿ ಹಾಗೂ ಮೊಳಕಾಲ್ಮುರು ತಾಲ್ಲೂಕಿನಲ್ಲಿ 50 ಅಂಗಡಿಗಳಲ್ಲಿ 435 ಪಡಿತರ ಚೀಟಿದಾರರು ಈ ಯೋಜನೆಗೆ ಅರ್ಹರಾಗಿದ್ದಾರೆ.
ಇದನ್ನು ಓದಿ : `ದೊಡ್ಮನೆ’ ದೊರೆಯಾದ ದಡದಪುರದ ಹೈದ – ಗಿಲ್ಲಿ ಗೆಲುವಿಗೆ ಸಂಭ್ರಮಿಸಿದ ಕರುನಾಡು

ಪಡಿತರ ವಿತರಣೆ ಪ್ರಕ್ರಿಯೆ
ನ್ಯಾಯಬೆಲೆ ಅಂಗಡಿ ಮಾಲೀಕರು ಪ್ರತಿ ತಿಂಗಳು ಪಡಿತರ ಚೀಟಿದಾರರ ಸಮ್ಮತಿಯನ್ನು OTP ಮುಖಾಂತರ ಪಡೆಯಬೇಕು.
ನಂತರ ನಿಗದಿತ ದಿನಾಂಕವನ್ನು ಸೂಚಿಸಿ, ಆ ದಿನದಂದು ಓಟಿಪಿ ಹಾಗೂ ಬಯೋಮೆಟ್ರಿಕ್ ಪರಿಶೀಲನೆ ಮೂಲಕ 75 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರ ಮನೆಬಾಗಿಲಿಗೆ ಆಹಾರಧಾನ್ಯ ವಿತರಿಸಲಾಗುತ್ತದೆ.
ಪ್ರಸ್ತುತ ಪಡಿತರ ಚೀಟಿದಾರರ ಅನುಕೂಲಕ್ಕಾಗಿ, ತಿಂಗಳ ಮೊದಲ ದಿನಾಂಕದಿಂದ ಕೊನೆಯ ದಿನಾಂಕದವರೆಗೆ ಓಟಿಪಿ ಮೂಲಕ ಸಮ್ಮತಿ ಪಡೆದು, ದಿನಾಂಕ ನಿಗದಿಪಡಿಸಿ ಪಡಿತರ ವಿತರಿಸಲು ಅವಕಾಶ ಕಲ್ಪಿಸಲಾಗಿದೆ.
ಸದುಪಯೋಗಕ್ಕೆ ಕರೆ
75 ವರ್ಷ ಮೇಲ್ಪಟ್ಟ ಏಕ (ಒಬ್ಬ) ಸದಸ್ಯ ಹಿರಿಯ ನಾಗರಿಕರು ಈ ‘ಅನ್ನಸುವಿಧ’ ಯೋಜನೆಯಡಿ ಮನೆಬಾಗಿಲಿಗೆ ಪಡಿತರ ಪಡೆದು ಸದುಪಯೋಗಪಡಿಸಿಕೊಳ್ಳಬೇಕು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕ ಶಿದ್ರಾಮ ಮಾರಿಹಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನು ನೋಡಿ : ಕೌಟುಂಬಿಕ ಕಲಹಕ್ಕೆ ಬೇಸತ್ತು ನೇಣಿಗೆ ಶರಣಾದ ಗೃಹಿಣಿ | MADHUGIRI NEWS




