Charmadi Ghat ಸಮೀಪದ ಮಲಯ ಮಾರುತ ಅರಣ್ಯ ಪ್ರದೇಶದಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡು ಅಪಾರ ಪ್ರಮಾಣದ ಸಸ್ಯ ಸಂಪತ್ತು ನಾಶವಾಗಿದೆ.

Charmadi Ghat : ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ಬಳಿ ಇರುವ ಮಲಯ ಮಾರುತ ಗುಡ್ಡಕ್ಕೆ ಬೆಂಕಿ ಬಿದ್ದಿದ್ದು, ಬೆಂಕಿ ನಿಯಂತ್ರಣಕ್ಕೆ ತರಲು ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ತೀವ್ರವಾಗಿ ಶ್ರಮಿಸುತ್ತಿದ್ದಾರೆ. ಒಣಗಿ ಬಿದ್ದ ಎಲೆಗಳು ಹೆಚ್ಚಾಗಿದ್ದರಿಂದ ಬೆಂಕಿ ವೇಗವಾಗಿ ಹರಡಿದೆ.
ಬೆಂಕಿಯ ಕೆನ್ನಾಲಿಗೆಗೆ ಸಿಲುಕಿರುವ ಪ್ರಾಣಿ ಹಾಗೂ ಪಕ್ಷಿಗಳು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಅರಣ್ಯ ಪ್ರದೇಶದಲ್ಲಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಪರಿಸರ ವ್ಯವಸ್ಥೆಗೆ ಭಾರಿ ಹಾನಿಯಾಗಿರುವ ಸಾಧ್ಯತೆ ಇದೆ.

ಇದನ್ನು ಓದಿ : Dina Bhavishya : ದಿನ ಭವಿಷ್ಯ 19 ಜನವರಿ 2026
ಅರಣ್ಯ ಪ್ರದೇಶದಲ್ಲಿ ಬೆಂಕಿ ಹೊತ್ತಲು ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಈ ಕುರಿತು ಅರಣ್ಯ ಇಲಾಖೆ ತನಿಖೆ ನಡೆಸುತ್ತಿದೆ.

ಪರಿಸರ ಸಂರಕ್ಷಣೆಯ ಅಗತ್ಯ
ಈ ಘಟನೆಯಿಂದ ಅರಣ್ಯ ಮತ್ತು ಪರಿಸರ ಸಂರಕ್ಷಣೆಯ ಅಗತ್ಯ ಮತ್ತೊಮ್ಮೆ ಸ್ಪಷ್ಟವಾಗಿದ್ದು, ಅರಣ್ಯ ಪ್ರದೇಶಗಳಲ್ಲಿ ಹೆಚ್ಚಿನ ಎಚ್ಚರಿಕೆ ಮತ್ತು ನಿಗಾವಹಿಸುವ ಅಗತ್ಯವಿದೆ.
ಇದನ್ನು ನೋಡಿ : ತುಮಕೂರಿನಲ್ಲಿ ಜಬರ್ದಸ್ತ್ BOXING- ಇಂದಿನ ಮ್ಯಾಚ್ ಹೇಗಿತ್ತು ಗೊತ್ತಾ..?




