ಮಾಜಿ ಸಚಿವ ಬಿ.ಶ್ರೀರಾಮುಲು ವಿರುದ್ಧ Pocso ಕಾಯ್ದೆ ಅಡಿ ‘FIR’ ದಾಖಲು

ಫೋಕ್ಸೋ ಕಾಯ್ದೆ ಉಲ್ಲಂಘನೆ ಆರೋಪದಡಿ ಮಾಜಿ ಸಚಿವ ಹಾಗೂ ಬಿಜೆಪಿ ನಾಯಕ ಬಿ. ಶ್ರೀರಾಮುಲು ವಿರುದ್ಧ FIR ದಾಖಲಾಗಿದೆ. ಬಳ್ಳಾರಿ ಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ದೂರಿನ ಆಧಾರದಲ್ಲಿ ಈ ಪ್ರಕರಣ ದಾಖಲಿಸಲಾಗಿದೆ.
ಮಹಿಳಾ ಪೊಲೀಸ್ ಠಾಣೆಯಲ್ಲಿ FIR ದಾಖಲು
ಬಳ್ಳಾರಿಯ ಎಪಿಎಂಸಿ ಠಾಣೆಯ ಸಿಪಿಐ ಮೊಹಮ್ಮದ್ ರಫಿಕ್ ಎಂಬುವವರು ನೀಡಿದ ದೂರಿನ ಮೇರೆಗೆ, ಬಳ್ಳಾರಿ ಮಹಿಳಾ ಪೊಲೀಸ್ ಠಾಣೆ ಪೊಲೀಸರು ಶ್ರೀರಾಮುಲು ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಇದನ್ನು ಓದಿ : ಸಚಿನ್ ತೆಂಡೂಲ್ಕರ್ ವಿಶ್ವ ದಾಖಲೆ ಮುರಿದ ವಿರಾಟ್ ಕೊಹ್ಲಿ

ಬಳ್ಳಾರಿ ಗಾಂಜಾ, ಡ್ರಗ್ಸ್ ಹಬ್ ಆಗಿದೆ
ಬ್ಯಾನರ್ ಗಲಾಟೆ ಖಂಡಿಸಿ ಬಿಜೆಪಿ, ಜ.17ರಂದು ಬಳ್ಳಾರಿಯ ಎಪಿಎಂಸಿ ಆವರಣದಲ್ಲಿ ಬೃಹತ್ ಪ್ರತಿಭಟನಾ ಸಮಾವೇಶ ಆಯೋಜಿಸಿತ್ತು. ಈ ಸಮಾವೇಶದಲ್ಲಿ ಬಳ್ಳಾರಿ ಗಾಂಜಾ, ಡ್ರಗ್ಸ್ ಹಬ್ ಆಗಿದೆ ಎಂದು ಭಾಷಣ ಮಾಡುತ್ತಿದ್ದ ಸಂದರ್ಭದಲ್ಲಿ ಶ್ರೀರಾಮುಲು, ಫೋಕ್ಸೋ ಪ್ರಕರಣದಲ್ಲಿ ಬಾಲಕಿಯ ಹೆಸರು, ಶಾಲೆ ಮತ್ತು ವಿವರ ಬಹಿರಂಗಪಡಿಸಿದ್ದರು.
6 ತಿಂಗಳು ಜೈಲುವಾಸ
ಫೋಕ್ಸೋ ಆ್ಯಕ್ಟ್ ಪ್ರಕಾರ ಯಾವುದೇ ಕಾರಣಕ್ಕೂ ನೊಂದ ಬಾಲಕಿ ಹೆಸರು, ವಿವರ ಬಹಿರಂಗಪಡಿಸುವಂತಿಲ್ಲ. ಹಾಗಾಗಿ, ಒಂದು ವೇಳೆ ಸಂತ್ರಸ್ತೆ ಹೆಸರು ಬಹಿರಂಗಪಡಿಸಿದರೆ ಇಂತಹ ಪ್ರಕರಣದಲ್ಲಿ 6 ತಿಂಗಳು ಜೈಲುವಾಸ ಮತ್ತು 2 ಲಕ್ಷ ರೂ.ವರೆಗೆ ದಂಡ ಹಾಕುವ ಸಾಧ್ಯತೆ ಇರುತ್ತದೆ.

ಈ ಹಿನ್ನೆಲೆಯಲ್ಲಿ, ಫೋಕ್ಸೋ ಕಾಯ್ದೆ ಉಲ್ಲಂಘಿಸಿದ ಆರೋಪದಡಿ ಮಾಜಿ ಸಚಿವ ಬಿ. ಶ್ರೀರಾಮುಲು ವಿರುದ್ಧ ಎಫ್ಐಆರ್ ದಾಖಲಾಗಿದೆ.
ಇದನ್ನು ನೋಡಿ : ಗಾಡಿ ಟಚ್ ಆಗಿದ್ದಕ್ಕೆ ಮಾರಣಾಂತಿಕ ಹಲ್ಲೆ ಗ್ಯಾರೇಜ್ ಮಾಲೀಕನ ಬುರುಡೆ ಬಿಚ್ಚಿದ್ರು




