Mysuru : ನಾನು ಜೆಡಿಎಸ್ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಿ ಜಯ ಗಳಿಸಿದ್ದು, ಜೆಡಿಎಸ್ನಲ್ಲೇ ಗಟ್ಟಿಯಾಗಿ ಇದ್ದೇನೆ, ಜೆಡಿಎಸ್ನಲ್ಲೇ ಇರುತ್ತೇನೆ ಎಂದು ಮಾಜಿ ಸಚಿವ ಹಾಗೂ ಶಾಸಕ ಜಿ.ಟಿ.ದೇವೇಗೌಡ ತಿಳಿಸಿದ್ದಾರೆ.

Mysuru : ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ನ ವಿವಿಧ ಹುದ್ದೆಗಳಲ್ಲಿ ಪಕ್ಷಕ್ಕಾಗಿ ದುಡಿದಿದ್ದೇನೆ. ಪಕ್ಷದ ವರಿಷ್ಠರ ಬಗ್ಗೆ ನಾನು ಯಾವತ್ತೂ ಟೀಕೆ ಮಾಡಿಲ್ಲ. ಆದ್ದರಿಂದ ಪಕ್ಷದ ಕಾರ್ಯಕರ್ತರಿಗೆ ಯಾವುದೇ ರೀತಿಯ ಆತಂಕ ಬೇಡ” ಎಂದು ಭರವಸೆ ನೀಡಿದ್ದಾರೆ.
ವಿಧಾನಸಭಾ ಚುನಾವಣೆಗೆ ಇನ್ನೂ ಎರಡೂವರೆ ವರ್ಷ ಕಾಲಾವಕಾಶ ಇದೆ ಎಂದು ಹೇಳಿದ ಅವರು,
“ಚುನಾವಣೆ ಬಂದಾಗ ಬೇರೆ ವಿಚಾರಗಳ ಬಗ್ಗೆ ಚರ್ಚೆ ಮಾಡೋಣ. ಸದ್ಯಕ್ಕೆ ನಾನು ಜೆಡಿಎಸ್ನಲ್ಲೇ ಇದ್ದೇನೆ. ಜೆಡಿಎಸ್ನಿಂದ ಒಂದು ಹೆಜ್ಜೆಯನ್ನೂ ಹೊರಗೆ ಇಟ್ಟಿಲ್ಲ” ಎಂದು ಸ್ಪಷ್ಟಪಡಿಸಿದರು.
ನೋವಿದ್ದರೂ ಪಕ್ಷ ತೊರೆದಿಲ್ಲ
ಕೆಲವು ವಿಚಾರಗಳಲ್ಲಿ ನನಗೆ ನೋವಾಗಿದೆ ಎಂಬುದು ಜೆಡಿಎಸ್ ನಾಯಕರಿಗೂ ಗೊತ್ತಿದೆ. ಆದರೆ ನೋವಾಯಿತು ಎಂದು ಪಕ್ಷದಿಂದ ಹೊರ ಹೋಗಿಲ್ಲ. ಜೆಡಿಎಸ್ ವಿರುದ್ಧವಾಗಿ ಯಾವತ್ತೂ ಮಾತನಾಡಿಲ್ಲ, ಮುಂದೆಯೂ ಮಾತನಾಡುವುದಿಲ್ಲ.
“ಒಳ್ಳೆಯ ಕಾಲ ಬರುತ್ತದೆ. ಕಾಲ ಕಳೆದಂತೆ ಎಲ್ಲ ಮುನಿಸು ಮತ್ತು ನೋವು ಮಾಯವಾಗುತ್ತದೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇದನ್ನು ಓದಿ : ಆನಗೋಡು ಕಿರು ಮೃಗಾಲಯದಲ್ಲಿ 4 ಚುಕ್ಕಿ ಜಿಂಕೆಗಳ ನಿಗೂಢ ಸಾವು

ದೇವೇಗೌಡರ ನೇತೃತ್ವದ ಸಭೆ ಬಳಿಕ ಪ್ರತಿಕ್ರಿಯೆ
ನಿನ್ನೆ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ನೇತೃತ್ವದಲ್ಲಿ, ಮೈಸೂರು ಜಿಲ್ಲೆಯ ಜೆಡಿಎಸ್ ಮುಖಂಡರೊಂದಿಗೆ ನಡೆದ ಸಭೆಯ ಬಳಿಕ ಅವರು ಈ ಹೇಳಿಕೆ ನೀಡಿದ್ದಾರೆ.
“ಯಾರಿಗೂ ದ್ರೋಹ ಮಾಡುವ ಬುದ್ಧಿ ನನಗಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೆಡಿಎಸ್ ತೊರೆದು ಕಾಂಗ್ರೆಸ್ಗೆ ಹೋದ ಬಳಿಕ, ಮೈಸೂರು ಭಾಗದಲ್ಲಿ ಜೆಡಿಎಸ್ ಪಕ್ಷವನ್ನು ಕಟ್ಟಿದ್ದೇನೆ.
ದೇವೇಗೌಡರು ಮತ್ತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಒಟ್ಟಾಗಿದ್ದಾರೆ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಬೇಕೆಂಬ ಆಶಯದಿಂದಲೇ ನಾನು ಪಕ್ಷವನ್ನು ಬಲಪಡಿಸಿದ್ದೇನೆ” ಎಂದು ಹೇಳಿದರು.
ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳು ಹೆಚ್ಚಾಗಿದ್ದು, ಕ್ಷೇತ್ರದ ಸೇವೆಯಲ್ಲಿ ತೊಡಗಿಸಿಕೊಂಡಿದ್ದೇನೆ ಎಂದು ಜಿ.ಟಿ. ದೇವೇಗೌಡ ತಿಳಿಸಿದ್ದಾರೆ.
ಇದನ್ನು ನೋಡಿ : KSRTC WORKERS PROTEST | ರೊಚ್ಚಿಗೆದ್ದ ಸರ್ಕಾರಿ ಸಾರಿಗೆ ನೌಕರರು




