Belagavi : 2 ತಿಂಗಳ ಗೃಹಲಕ್ಷ್ಮಿ ಹಣ ಬಿಡುಗಡೆ!

Belagavi : ರಾಜ್ಯದ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ಗುಡ್ ನ್ಯೂಸ್ವೊಂದು ಸಿಕ್ಕಿದೆ. ಬಾಕಿ ಇದ್ದ ಎರಡು ತಿಂಗಳ ಹಣವನ್ನು ಸರ್ಕಾರ ಬಿಡುಗಡೆ ಮಾಡಿದೆ.
ಗೃಹಲಕ್ಷ್ಮೀ ಯೋಜನೆ ಹಣವನ್ನು ಬಿಡುಗಡೆ ಮಾಡಿದ್ದಾರೆ
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಎರಡು ತಿಂಗಳ ಗೃಹಲಕ್ಷ್ಮೀ ಯೋಜನೆ ಹಣವನ್ನು ಬಿಡುಗಡೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.
ಇದನ್ನು ಓದಿ : Kitchen Recipe|ಆರೋಗ್ಯಕರ ಮೆಕ್ಕೆ ಜೋಳದ ಇಡ್ಲಿ ಮಾಡಿ ಸವಿಯಿರಿ..!!

Belagavi – ಎಲ್ಲರಿಗೂ ಸಮಾನವಾಗಿ ತಲುಪುತ್ತಿವೆ
ರಾಜಕೀಯದಲ್ಲಿ ಜಾತಿ ಹಾಗೂ ಧರ್ಮದ ಹೆಸರಿನಲ್ಲಿ ಜನರನ್ನು ಒಡೆಯುವ ಪ್ರಯತ್ನಗಳು ನಡೆಯುತ್ತಿವೆ ಎಂದು ಟೀಕಿಸಿದ ಅವರು, ರಾಜ್ಯದಲ್ಲಿ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ಎಲ್ಲರಿಗೂ ಸಮಾನವಾಗಿ ತಲುಪುತ್ತಿವೆ ಎಂದರು.
ಎಷ್ಟೋ ಜನರಿಗೆ ಗೃಹಲಕ್ಷ್ಮೀ ಹಣ ಬಂದಿದೆ
ಎಷ್ಟೋ ಜನರಿಗೆ ಗೃಹಲಕ್ಷ್ಮೀ ಹಣ ಬಂದಿದೆ. ಇದರಿಂದ ಮಹಿಳೆಯರ ಜೀವನ ಉತ್ತಮಗೊಂಡಿದೆ. ಗ್ಯಾರಂಟಿ ಯೋಜನೆಗಳಿಂದ ರಾಜ್ಯದಲ್ಲಿ ಜನರ ಜೀವನ ಉತ್ತಮಗೊಂಡಿದೆ ಎಂಬುದಾಗಿ ತಿಳಿಸಿದರು.

ಇದನ್ನು ನೋಡಿ : ಅಧಿಕಾರಿಗಳಿಂದ ಒತ್ತುವರಿ ತೆರವು ತಿಪಟೂರಲ್ಲಿ ರೊಚ್ಚಿಗೆದ್ದ ಜನರು




