Traffic Jam : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಂಜನಗೂಡು ತಾಲೂಕಿನ ಸುತ್ತೂರು ಜಾತ್ರಾ ಮಹೋತ್ಸವಕ್ಕೆ ತೆರಳುತ್ತಿದ್ದ ವೇಳೆ ಭಾರೀ ಟ್ರಾಫಿಕ್ ಜಾಮ್ ಉಂಟಾದ ಘಟನೆ ವರದಿಯಾಗಿದೆ.

Traffic Jam : ಸಿಎಂ ಅವರ ವಾಹನ ಸಂಚರಿಸುತ್ತಿದ್ದ ಮಾರ್ಗದಲ್ಲಿ ಸುಮಾರು ಮೂರು ಕಿಲೋಮೀಟರ್ಗಳಷ್ಟು ಟ್ರಾಫಿಕ್ ಜಾಮ್ ಉಂಟಾಗಿ, ಕೆಲಕಾಲ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸಿದರು.
ಸಿಎಂ ವಾಹನಕ್ಕೆ ದಾರಿ ಮಾಡಿಕೊಡುವ ಉದ್ದೇಶದಿಂದ ಮೈಸೂರು ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರು ಸ್ವತಃ ರಸ್ತೆಗಿಳಿದು ಟ್ರಾಫಿಕ್ ನಿಯಂತ್ರಣಕ್ಕೆ ಮುಂದಾದರು. ಈ ವೇಳೆ ವಾಹನಗಳನ್ನು ವೇಗವಾಗಿ ತೆರವುಗೊಳಿಸಲು ಯತ್ನಿಸುವ ಸಂದರ್ಭದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಯಿತು.
ಬೈಕ್ ಸವಾರನ ಮೇಲೆ ಹಲ್ಲೆಗೆ ಯತ್ನ?
ಟ್ರಾಫಿಕ್ ಕ್ಲಿಯರ್ ಮಾಡುವ ವೇಳೆ, ದಾರಿ ಬಿಡದಿದ್ದ ಬೈಕ್ ಸವಾರನ ಮೇಲೆ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಅವರು ತೀವ್ರ ಕೋಪಗೊಂಡು ಕಾಲಿನಿಂದ ಒದೆಯಲು ಮುಂದಾದ ದೃಶ್ಯ ಕಂಡುಬಂದಿದೆ. ಆದರೆ ಕ್ಷಣಕಾಲದಲ್ಲೇ ತಮ್ಮನ್ನು ತಾವೇ ಸಮಾಧಾನಪಡಿಸಿಕೊಂಡ ಅವರು, ಯಾವುದೇ ಹಲ್ಲೆ ಮಾಡದೆ ಅಲ್ಲಿಂದ ವಾಪಸ್ ಹೋಗಿದ್ದಾರೆ.
ಇದನ್ನು ಓದಿ : Kolar|ದೇವಾಲಯ ಪೂಜಾರಿಯ ಬರ್ಬರ ಕೊಲೆ
ಮೊಬೈಲ್ ಕ್ಯಾಮರಾದಲ್ಲಿ ಸೆರೆ; ವಿಡಿಯೋ ವೈರಲ್
ಈ ಸಂಪೂರ್ಣ ಘಟನೆ ಸಾರ್ವಜನಿಕರೊಬ್ಬರ ಮೊಬೈಲ್ ಕ್ಯಾಮರಾದಲ್ಲಿ ಸೆರೆ ಆಗಿದ್ದು, ವಿಡಿಯೋ ಇದೀಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ವಿಡಿಯೋ ವೈರಲ್ ಆದ ಬೆನ್ನಲ್ಲೇ ಪೊಲೀಸ್ ಅಧಿಕಾರಿಗಳ ವರ್ತನೆ ಕುರಿತು ವ್ಯಾಪಕ ಚರ್ಚೆ ಆರಂಭವಾಗಿದೆ.
ಸೋಶಿಯಲ್ ಮೀಡಿಯಾದಲ್ಲಿ ವ್ಯಕ್ತವಾಗುತ್ತಿವೆ. ಕೆಲವರು ಶಿಸ್ತು ಮತ್ತು ಸಹನಶೀಲತೆ ಅಗತ್ಯ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಸಿಎಂ ಕಾರ್ಯಕ್ರಮದ ವೇಳೆ ಭದ್ರತೆ ಮತ್ತು ಟ್ರಾಫಿಕ್ ನಿರ್ವಹಣೆ ಅನಿವಾರ್ಯವಾದರೂ, ಸಾರ್ವಜನಿಕರೊಂದಿಗೆ ಸಂಯಮದಿಂದ ವರ್ತಿಸುವುದು ಅಗತ್ಯ ಎಂಬ ಚರ್ಚೆಗೆ ಈ ಘಟನೆ ಕಾರಣವಾಗಿದೆ. ಈ ಕುರಿತು ಪೊಲೀಸ್ ಇಲಾಖೆ ಯಾವ ರೀತಿಯ ಸ್ಪಷ್ಟನೆ ನೀಡುತ್ತದೆ ಎಂಬುದನ್ನು ಕಾದು ನೋಡಬೇಕಿದೆ.
ಇದನ್ನು ನೋಡಿ : SURESH GOWDA | ಪರಂ ಪರ ಸುರೇಶ್ ಗೌಡ ಬ್ಯಾಟ್ – ಕ್ಷೇತ್ರದ ಅಭಿವೃದ್ಧಿಯೇ ನನ್ನ ಗುರಿ




