ಭೀಕರ Accident, ಮಂತ್ರಾಲಯಕ್ಕೆ ತೆರಳುತ್ತಿದ್ದ ಸ್ಲೀಪರ್ ಕೋಚ್ ಬಸ್ ಡಿಕ್ಕಿ, ಓರ್ವ ಸಾವು, 11 ಮಂದಿಗೆ ಗಾಯ.

ಮೈಸೂರಿನಿಂದ ಬೆಂಗಳೂರು ಮಾರ್ಗವಾಗಿ ಮಂತ್ರಾಲಯಕ್ಕೆ ತೆರಳುತ್ತಿದ್ದ ಸ್ಲೀಪರ್ ಕೋಚ್ ಬಸ್ ಕಂಟೇನರ್ ಲಾರಿಗೆ ಡಿಕ್ಕಿ ಹೊಡೆದಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಅಗಲಗುರ್ಕಿ ಬಳಿ ಸಂಭವಿಸಿದೆ.
ಸ್ಲೀಪರ್ ಕೋಚ್ ಬಸ್ ಭೀಕರ ಅಪಘಾತ
Accident ನಲ್ಲಿ ಒಟ್ಟು 12 ಮಂದಿ ಗಾಯಗೊಂಡಿದ್ದು, ಅವರನ್ನು ಚಿಕ್ಕಬಳ್ಳಾಪುರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇನ್ನು ಗಂಭೀರ ಸ್ಥಿತಿಯಲ್ಲಿದ್ದ ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು. ಈ ಪೈಕಿ ಬಿಹಾರ ಮೂಲದ 20 ವರ್ಷದ ಸುಹಾಸ್ ಎಂಬ ಯುವಕ ಚಿಕಿತ್ಸೆ ಫಲಕಾರಿಯಾಗದೇ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಸುಹಾಸ್ ತನ್ನ ಸ್ನೇಹಿತರೊಂದಿಗೆ ಕಂಟೇನರ್ ವಾಹನದಲ್ಲಿ ಬಿಹಾರಕ್ಕೆ ತೆರಳುತ್ತಿದ್ದ ಎನ್ನಲಾಗಿದೆ.
ಇದನ್ನು ಓದಿ : Chikkaballapura ದಲ್ಲಿ ಸವರ್ಣೀಯರು ಮತ್ತು ದಲಿತರ ನಡುವೆ ಫುಲ್ ಫೈಟ್…!!

ಪ್ರಯಾಣಿಕರ ರಕ್ಷಣೆ
ಅಪಘಾತದಲ್ಲಿ ಬಸ್ ಗುದ್ದಿದ ರಭಸಕ್ಕೆ ಬಸ್ನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಬಸ್ಸು ಕಂಟೈನರ್ನ ಒಳಗೆ ಸಿಲುಕಿಕೊಂಡಿದ್ದು, ಓರ್ವ ಪ್ರಯಾಣಿಕನ ಕಾಲು ಸಹ ಸಿಲುಕಿ ನರಳಾಡಿರೋದು ಕಂಡುಬಂದಿದೆ. ಗಂಟೆಗಟ್ಟಲೆ ಹರಸಹಾಸ ಪಟ್ಟು ಕೊನೆಗೆ ಕಟಿಂಗ್ ಮಿಷನ್ ಮೂಲಕ ರಾಡುಗಳನ್ನ ಕಟ್ ಮಾಡಿ ಪ್ರಯಾಣಿಕರನ್ನು ರಕ್ಷಣೆ ಮಾಡಲಾಗಿದೆ.
ಪ್ರಕರಣ ದಾಖಲು
ಇನ್ನು ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಚಿಕ್ಕಬಳ್ಳಾಪುರ ಎಸ್ಪಿ ಕುಶಾಲ್ ಚೌಕ್ಸಿ ಸೇರಿದಂತೆ ಸ್ಥಳೀಯ ಪೊಲೀಸರು ಹಾಗೂ ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಅಪಘಾತದ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಇದನ್ನು ನೋಡಿ : ಶಬರಿಮಲೆ ಚಿನ್ನ ಕಳ್ಳತನ ಕೇಸ್ – ಬೆಂಗಳೂರು, ಬಳ್ಳಾರಿ ಸೇರಿ ಹಲವೆಡೆ ಇಡಿ ದಾಳಿ




