Tumkuru : ಸಿದ್ದಗಂಗಾ ಮಠದ ಶಿವೈಕ್ಯ ಶಿವಕುಮಾರ ಮಹಾಯೋಗಿಗಳು ಲಿಂಗೈಕ್ಯರಾಗಿ ನಾಳೆಗೆ 7 ವರ್ಷ ಪೂರ್ಣಗೊಳ್ಳಲಿದೆ.

Tumkuru : ಈ ಹಿನ್ನೆಲೆಯಲ್ಲಿ ತುಮಕೂರಿನ ಸಿದ್ದಗಂಗಾ ಮಠದಲ್ಲಿ 7ನೇ ವರ್ಷದ ಪುಣ್ಯ ಸಂಸ್ಮರಣೋತ್ಸವವನ್ನು ಭಕ್ತಿಭಾವದಿಂದ ಆಚರಿಸಲಾಗುತ್ತಿದೆ.
ಉಪರಾಷ್ಟ್ರಪತಿ ಭಾಗವಹಿಸುವುದು ವಿಶೇಷ
ಈ ಮಹತ್ವದ ಕಾರ್ಯಕ್ರಮದಲ್ಲಿ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಭಾಗಿಯಾಗುತ್ತಿರುವುದು ವಿಶೇಷ ಆಕರ್ಷಣೆಯಾಗಿದೆ. ಕಾರ್ಯಕ್ರಮದ ನಿಮಿತ್ತ ಸಿದ್ದಗಂಗಾ ಮಠದಲ್ಲಿ ಸಕಲ ಸಿದ್ಧತೆಗಳು ಭರದಿಂದ ಸಾಗಿವೆ.

ಉಪರಾಷ್ಟ್ರಪತಿಗಳ ಕಾರ್ಯಕ್ರಮ ವೇಳಾಪಟ್ಟಿ: ಬೆಳಗ್ಗೆ 10:50ಕ್ಕೆ ಸಿದ್ದಗಂಗಾ ಮಠಕ್ಕೆ ಆಗಮಿಸಿ ಶಿವಕುಮಾರ ಶ್ರೀಗಳ ಗದ್ದಿಗೆ ಪೂಜೆ ಸಲ್ಲಿಸುವ ಉಪರಾಷ್ಟ್ರಪತಿಗಳು 11 ಗಂಟೆಗೆ ಗೋಸಲ ಸಿದ್ದೇಶ್ವರ ವೇದಿಕೆಯಲ್ಲಿ 1 ಗಂಟೆಯ ಸಭಾ ಕಾರ್ಯಕ್ರಮದಲ್ಲಿ ಭಾಗಿಯಾಗುವರು. ಮಧ್ಯಾಹ್ನ 12 ಗಂಟೆಗೆ ಅವರು ಮಠದಿಂದ ವಾಪಸ್ ಪ್ರಯಾಣ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮತ್ತು ಕೇಂದ್ರ ಸಚಿವ ವಿ. ಸೋಮಣ್ಣ ಅವರ ಸಾಥ್ ನೀಡಲಾಗುತ್ತದೆ.
ಇದನ್ನು ನೋಡಿ : TUMAKURU | ಹೆತ್ತನಹಳ್ಳಿಯನ್ನ ಟೂರಿಸ್ಟ್ ಪ್ಲೇಸ್ ಮಾಡ್ತೀನಿ ಎಂದ ಶಾಸಕ ಸುರೇಶ್ ಗೌಡ

ಭದ್ರತೆ ಮತ್ತು ಪೊಲೀಸ್ ಬಂದೋಬಸ್ತ್
ಉಪರಾಷ್ಟ್ರಪತಿಗಳ ಆಗಮನದ ಹಿನ್ನೆಲೆ, ಸಿದ್ದಗಂಗಾ ಮಠದ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಭದ್ರತಾ ಕ್ರಮಗಳನ್ನು ಕಟ್ಟು ನಿಟ್ಟಾಗಿ ಜಾರಿಗೆ ತರಲಾಗಿದೆ.
ಬೆಳಿಗ್ಗೆ ಪೂಜಾ ಕಾರ್ಯಕ್ರಮಗಳು: ನಾಳೆ ಬೆಳಗ್ಗೆ 5 ಗಂಟೆಯಿಂದ ಮಠದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಆರಂಭವಾಗಿದ್ದು, ಶಿವಕುಮಾರ ಶ್ರೀಗಳ ಗದ್ದಿಗೆ ಮಂತ್ರಘೋಷಗಳೊಂದಿಗೆ ವಿಶೇಷ ಪೂಜೆ ನಡೆಯಲಿದೆ. ಬೆಳಗ್ಗೆ 8 ಗಂಟೆಗೆ ರುದ್ರಾಕ್ಷಿ ಮಂಟಪದಲ್ಲಿ ಶಿವಕುಮಾರ ಶ್ರೀಗಳ ಪುತ್ಥಳಿ ಮೆರವಣಿಗೆ ನಡೆಯಲಿದೆ.

ದಿವ್ಯ ಸಾನ್ನಿಧ್ಯ ವಹಿಸುವ ಮಹನೀಯರು: ಈ ಪುಣ್ಯ ಸಂಸ್ಮರಣೋತ್ಸವದಲ್ಲಿ ಸಿದ್ದಗಂಗಾ ಮಠಾಧ್ಯಕ್ಷ ಸಿದ್ದಲಿಂಗಸ್ವಾಮಿಜಿ, ಸದ್ಗುರು ಶ್ರೀ ಮಧುಸೂದನ ಸಾಯಿ ಮತ್ತು ಮಠದ ಉತ್ತರಾಧಿಕಾರಿ ಶಿವಸಿದ್ದೇಶ್ವರ ಸ್ವಾಮಿಗಳು ದಿವ್ಯ ಸಾನ್ನಿಧ್ಯ ವಹಿಸಲಿದ್ದಾರೆ.
ಇದನ್ನು ಓದಿ : ಶಬರಿಮಲೆ ಚಿನ್ನ ಕಳವು ಕೇಸ್ – 3 ರಾಜ್ಯದಲ್ಲಿ ED ಶೋಧ




