ನಿವೃತ್ತಿ ಘೋಷಿಸಿದ ಖ್ಯಾತ ಬ್ಯಾಡಿಂಟನ್ ತಾರೆ Saina Nehwal.

ಭಾರತದ ಖ್ಯಾತ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ನಿವೃತ್ತಿ ಘೋಷಿಸಿದ್ದಾರೆ. ಕಳೆದ ಕೆಲ ತಿಂಗಳುಗಳಿಂದ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಇದೀಗ ಬ್ಯಾಡ್ಮಿಂಟನ್ ಅಂಗಳಕ್ಕೆ ವಿದಾಯ ಹೇಳಲು ನಿರ್ಧರಿಸಿದ್ದಾರೆ. ಅಲ್ಲದೆ ಇನ್ಮುಂದೆ ಸ್ಪರ್ಧಾತ್ಮಕ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಕಣಕ್ಕಿಳಿಯುವುದಿಲ್ಲ ಎಂದು ಸಹ ಸ್ಪಷ್ಟಪಡಿಸಿದ್ದಾರೆ.
ಇದನ್ನು ಓದಿ : ಬೆಳಗಾವಿಯಲ್ಲಿ ಭೀಕರ Murder – ಅಪ್ರಾಪ್ತ ಬಾಲಕ ಅರೆಸ್ಟ್

ಫಿಟ್ನೆಸ್ ಸಾಧಿಸಲು ಸಾಧ್ಯವಾಗಿರಲಿಲ್ಲ
ಸೈನಾ ನೆಹ್ವಾಲ್ ಕೊನೆಯ ಸ್ಪರ್ಧಾತ್ಮಕ ಪಂದ್ಯವಾಡಿದ್ದು 2023 ರಲ್ಲಿ. 2023ರ ಸಿಂಗಾಪುರ್ ಓಪನ್ ನಂತರ ಅವರು ಯಾವುದೇ ಅಧಿಕೃತ ಪಂದ್ಯಗಳಲ್ಲಿ ಕಾಣಿಸಿಕೊಂಡಿರಲಿಲ್ಲ. ಇದಕ್ಕೆ ಮುಖ್ಯ ಕಾರಣ ಗಾಯದ ಸಮಸ್ಯೆ. ಮೊಣಕಾಲಿನ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಕಳೆದ ಎರಡು ವರ್ಷಗಳಿಂದ ಕಂಬ್ಯಾಕ್ ಮಾಡಲು ಯತ್ನಿಸಿದ್ದರು. ಇದಾಗ್ಯೂ ಸಂಪೂರ್ಣ ಫಿಟ್ನೆಸ್ ಸಾಧಿಸಲು ಸಾಧ್ಯವಾಗಿರಲಿಲ್ಲ.

ಬ್ಯಾಡ್ಮಿಂಟನ್ಗೆ ವಿದಾಯ
ಹೀಗಾಗಿ ಈ ವರ್ಷದ ಆರಂಭದಲ್ಲೇ ಸೈನಾ ನೆಹ್ವಾಲ್ ಬ್ಯಾಡ್ಮಿಂಟನ್ಗೆ ವಿದಾಯ ಹೇಳಲು ನಿರ್ಧರಿಸಿದ್ದಾರೆ. ತನ್ನ ದೇಹವು ಇನ್ನು ಮುಂದೆ ತನ್ನ ಆಟವನ್ನು ಬೆಂಬಲಿಸುವುದಿಲ್ಲ. ಹೀಗಾಗಿ ಬ್ಯಾಡ್ಮಿಂಟನ್ನಲ್ಲಿ ಇನ್ಮುಂದೆ ಮುಂದುವರೆಯಲು ಸಾಧ್ಯವಿಲ್ಲ. ಮೊಣಕಾಲಿನ ನೋವಿನ ಸಮಸ್ಯೆಯಿರುವ ಕಾರಣ ನಿವೃತ್ತಿ ಘೋಷಿಸಲು ನಿರ್ಧರಿಸಿದ್ದೇನೆ ಎಂದಿದ್ದಾರೆ Saina Nehwal.
ಇದನ್ನು ನೋಡಿ : KN RAJANNA | ದೆಹಲಿಗೆ ಡಿ.ಕೆ ಶಿವಕುಮಾರ್ ಭೇಟಿ ವಿಚಾರ ಮಾಜಿ ಸಚಿವ ರಾಜಣ್ಣ ಸ್ಫೋಟಕ ಹೇಳಿಕೆ




