ರಾಯರನ್ನ ಅಪಮಾನ ಮಾಡಿದವರು ಉದ್ಧಾರ ಆದ ಇತಿಹಾಸವಿಲ್ಲ – ನಟ Jaggesh.

ಅಭಿಮಾನಿಯೊಬ್ಬರು ಸಿಎಂ ಸಿದ್ದರಾಮಯ್ಯ ಅವರಿಗೆ ರಾಘವೇಂದ್ರ ಸ್ವಾಮಿಗಳ ಫೋಟೋ ನೀಡಲು ಬಂದಾಗ ಫೋಟೋ ಸ್ವೀಕಾರ ಮಾಡದೇ ಫೋಟೋವನ್ನ ತಳ್ಳಿದ ನಡೆಗೆ ರಾಜ್ಯಸಭಾ ಸದಸ್ಯರೂ ಆಗಿರುವ ನಟ ಜಗ್ಗೇಶ್ ತೀವ್ರ ಬೇಸರ ಹೊರಹಾಕಿದ್ದಾರೆ.
CM ನಡೆಗೆ ಜಗ್ಗೇಶ್ ಖಂಡನೆ
ಸಿದ್ರಾಮಯ್ಯ ಅವರು ರಾಘವೇಂದ್ರ ಸ್ವಾಮಿಯ ಫೋಟೋ ತಳ್ಳುತ್ತಿರುವ ವಿಡಿಯೋಜೊತೆಗೆ ಸಂದೇಶವೊಂದನ್ನ Jaggesh ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಇದನ್ನು ಓದಿ : ರನ್ಯಾರಾವ್ ಗ್ಲೋಲ್ಡ್ ಸ್ಮಗ್ಲಿಂಗ್ ಕೇಸ್ – ವಿಚಾರಣೆಗೆ ಹಾಜರಾಗುವಂತೆ DGP ಗೆ ನೋಟಿಸ್

ರಾಯರನ್ನ ಅಪಮಾನ ಮಾಡಿದವರು ಉದ್ಧಾರ ಆದ ಇತಿಹಾಸವಿಲ್ಲ
ರಾಯರನ್ನ ಅಪಮಾನ ಮಾಡಿದ ಯಾರು ಉದ್ಧಾರ ಆದ ಇತಿಹಾಸವಿಲ್ಲಾ! ರಾಯರ ಸಣ್ಣ ಕೃಪೆ ನಮ್ಮಮೇಲೆ ಬೀಳಲಿ ಎಂದು ಕೋಟ್ಯಂತರ ಭಕ್ತವೃಂದ ಜಪತಪವೈರಾಗ್ಯ ಉಪವಾಸದಿಂದ ಸೇವೆಮಾಡುತ್ತಾರೆ, ಭಕ್ತಿಯಿಂದ ಬಂದದ್ದು ಹೀಗೆ ತಿರಸ್ಕರಿಸಿದ ಪ್ರಥಮ ವ್ಯೆಕ್ತಿಯನ್ನು ನಾನು ನನ್ನ ಬದುಕಲ್ಲಿ ಕಂಡದ್ದು ರಾಯರಿದ್ದಾರೆ ಎದ್ದುಬರುತ್ತಾರೆ ಕಾಯಬೇಕು..!! ಎಂದು ಬರೆದುಕೊಂಡಿದ್ದಾರೆ.
ವಿಪಕ್ಷ ನಾಯಕರೂ ಆಕ್ರೋಶ
ಈ ಹಿಂದೆ ಕುಂಕುಮ, ಪೇಟ ತಿರಸ್ಕರಿಸುತ್ತಿದ್ದ ಸಿಎಂ ಇದೀಗ ರಾಘವೇಂದ್ರ ಸ್ವಾಮಿ ಫೋಟೋ ತಿರಸ್ಕಾರ ಮಾಡಿದ ಘಟನೆ ನಡೆದಿದೆ. ಇದಕ್ಕೆ ವಿಪಕ್ಷ ನಾಯಕರೂ ಆಕ್ರೋಶ ವ್ಯಕ್ತಪಡಿಸಿದ್ದರು.

ಇದನ್ನು ನೋಡಿ : ತುಮಕೂರಿನಲ್ಲಿ ಆರಂಭವಾಗಿಲ್ಲ ರಾಗಿ ಖರೀದಿ ರಾಗಿ ಬೆಳೆಗಾರರ ಗೋಳು ಕೇಳೊರು ಯಾರು




