ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ನೂತನ ಅಧ್ಯಕ್ಷರಾಗಿ ಸಚಿವ Eshwar Khandre ಆಯ್ಕೆಯಾಗಿದ್ದಾರೆ.

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾಯ ನೂತನ ಅಧ್ಯಕ್ಷರಾಗಿ ಅರಣ್ಯ, ಪರಿಸರ ಖಾತೆ ಸಚಿವ ಈಶ್ವರ್ ಖಂಡ್ರೆ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಹಲವು ಪ್ರಮುಖ ನಾಯಕರ ಹೆಸರುಗಳು ಕೇಳಿಬಂದಿದ್ದರೂ, ಅಂತಿಮವಾಗಿ ಈಶ್ವರ್ ಖಂಡ್ರೆ ಅವರನ್ನು 24ನೇ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.
ರಾಷ್ಟ್ರೀಯ ಕಾರ್ಯಕಾರಿ ಸಭೆಯಲ್ಲಿ ಈ ನಿರ್ಣಯ
ಬೆಂಗಳೂರಿನ ಸಂಘದ ಪ್ರಧಾನ ಕಚೇರಿಯಲ್ಲಿ ನಡೆದ ರಾಷ್ಟ್ರೀಯ ಕಾರ್ಯಕಾರಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳ ಲಾಯಿತು. ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ಪ್ರಧಾನ ಕಚೇರಿ ಬೆಂಗಳೂರಿನ ಸದಾಶಿವನಗರದ ಅರಮನೆ ರಸ್ತೆಯಲ್ಲಿದೆ.
ಇದನ್ನು ಓದಿ : ರೈಲ್ವೆಯಲ್ಲಿ 22,000 ಖಾಲಿ ಹುದ್ದೆಗಳಿಗೆ ನೇಮಕಾತಿ; 10th ಪಾಸಾಗಿದ್ರೆ ಸಾಕು!

ಭೀಮಣ್ಣ ಖಂಡ್ರೆ ಕೂಡ ಮಹಾಸಭಾದ ಅಧ್ಯಕ್ಷರಾಗಿದ್ದರು
ಇನ್ನು Eshwar Khandre ಅವರ ತಂದೆ ಭೀಮಣ್ಣ ಖಂಡ್ರೆ ಕೂಡ ಈ ಹಿಂದೆ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷರಾಗಿದ್ದರು. ಇದೀಗ ಪುತ್ರನಾಗಿ ಈಶ್ವರ್ ಖಂಡ್ರೆ ಅವರು ಆ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ.
ಯಡಿಯೂರಪ್ಪ ಅವರ ಹೆಸರೂ ಚರ್ಚೆ
ಅಧ್ಯಕ್ಷ ಸ್ಥಾನಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಹೆಸರೂ ಚರ್ಚೆಯಲ್ಲಿತ್ತು. ಲಿಂಗಾಯತ ಪಂಚಪೀಠದ ಪೀಠಾಧಿಪತಿಗಳೊಬ್ಬರು ಯಡಿಯೂರಪ್ಪ ಅವರು ಅಧ್ಯಕ್ಷರಾದರೆ ಸಂತೋಷವಾಗುತ್ತದೆ ಎಂಬ ಅಭಿಪ್ರಾಯ ವನ್ನೂ ವ್ಯಕ್ತಪಡಿಸಿದ್ದರು. ಆದರೆ ಅಂತಿಮವಾಗಿ ಭಾಲ್ಕಿ ಕ್ಷೇತ್ರದ ಶಾಸಕ ಹಾಗೂ ರಾಜ್ಯ ಸಚಿವರಾಗಿರುವ ಈಶ್ವರ್ ಖಂಡ್ರೆಅವರನ್ನು ಆಯ್ಕೆ ಮಾಡಲಾಗಿದೆ.

ಹಲವು ಪ್ರಮುಖ ನಾಯಕರು ಉಪಸ್ಥಿತರಿದ್ದರು
ಕಾರ್ಯಕಾರಿ ಸಭೆಯಲ್ಲಿ ಸಚಿವ ಶರಣಬಸಪ್ಪ ದರ್ಶನಾಪುರ, ಪ್ರಭಾಕರ್ ಕೋರೆ, ವೀರಣ್ಣ ಚರಂತಿಮಠ, ಮಾಜಿ ಸಚಿವ ರಾಜಶೇಖರ್ ಪಾಟೀಲ್ ಹುಮ್ನಾಬಾದ್ ಸೇರಿದಂತೆ ಹಲವು ಪ್ರಮುಖ ನಾಯಕರು ಉಪಸ್ಥಿತರಿದ್ದರು.
ಇದನ್ನು ನೋಡಿ : ನಾಳೆ ನಡೆದಾಡುವ ದೇವರ ಪುಣ್ಯಸ್ಮರಣೆ – ಸಿದ್ಧಗಂಗಾ ಮಠದಲ್ಲಿ ಹೇಗಿದೆ ಗೊತ್ತಾ ಸಿದ್ಧತೆ..!?




