Bidar : ದಾರಿ ಬಿಡದಿದ್ದಕ್ಕೆ ಬಸ್ ಚಾಲಕನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಘಟನೆ ನಡೆದಿದೆ..!!

Bidar : ಈ ಘಟನೆಗೆ ಸಂಬಂಧಿಸಿ ಬಸ್ ಚಾಲಕ ನೀಡಿದ ದೂರಿನ ಮೇರೆಗೆ ಬೈಕ್ ಸವಾರನ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಬಸ್ ಚಾಲಕ ಅಶೋಕ್ ಮಾಣೀಕಪ್ಪ ಮೇಲೆ ಹಲ್ಲೆ
ಹಲ್ಲೆಗೆ ಒಳಗಾದವರು ಬಸ್ ಚಾಲಕ ಅಶೋಕ್ ಮಾಣೀಕಪ್ಪ. ಮನ್ನಾಏಕೇಳಿಯಿಂದ ಬೀದರ್ ಕಡೆಗೆ ಬಸ್ ಚಲಾಯಿಸಿಕೊಂಡು ಬರುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಘಟನೆ ಬಳಿಕ ಚಾಲಕ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ದೂರಿನ ಪ್ರಕಾರ, ಬದಗಲ್ ಬಳಿ ಮೆರವಣಿಗೆ ನಡೆಯುತ್ತಿದ್ದ ಕಾರಣ ಬಸ್ ನಿಲ್ಲಿಸಲಾಗಿತ್ತು. ಈ ವೇಳೆ ಹಿಂಬದಿಯಿಂದ ಬಂದ ಬೈಕ್ ಸವಾರನೊಬ್ಬ ದಾರಿ ಬಿಡುವಂತೆ ಒತ್ತಾಯಿಸಿ ಚಾಲಕನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ.
ಇದನ್ನು ಓದಿ : ರೈಲ್ವೆಯಲ್ಲಿ 22,000 ಖಾಲಿ ಹುದ್ದೆಗಳಿಗೆ ನೇಮಕಾತಿ; 10th ಪಾಸಾಗಿದ್ರೆ ಸಾಕು!
ಕಮಠಾಣ ಬಳಿ ಬಸ್ ತಡೆದು ಹಲ್ಲೆ
ಮುಂದೆ ಕಮಠಾಣ ಗ್ರಾಮಕ್ಕೆ ಬರುವಷ್ಟರಲ್ಲಿ ಬೈಕ್ ಸವಾರ ಮತ್ತು ಆತನ ಕಡೆಯವರು ಬಸ್ ತಡೆದು, “ನಮ್ಮವನಿಗೆ ಯಾಕೆ ದಾರಿ ಬಿಡಲಿಲ್ಲ” ಎಂದು ಜೋರಾಗಿ ಕೂಗಿದ್ದಾರೆ. ಇದೇ ವೇಳೆ ಬೈಕ್ ಸವಾರ ಚಾಲಕನ ಕೊರಳಪಟ್ಟಿ ಹಿಡಿದು, ಎದೆಗೆ ಗುದ್ದಿ ಹಲ್ಲೆ ನಡೆಸಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಹಲ್ಲೆ ದೃಶ್ಯ ಮೊಬೈಲ್ನಲ್ಲಿ ಸೆರೆ
ಘಟನೆಯ ವೇಳೆ ನಡೆದ ಹಲ್ಲೆಯ ದೃಶ್ಯಗಳನ್ನು ಬಸ್ ಚಾಲಕ ತನ್ನ ಮೊಬೈಲ್ ಫೋನ್ನಲ್ಲಿ ಸೆರೆಹಿಡಿದಿದ್ದಾರೆ. ಈ ವಿಡಿಯೋ ಈಗ ತನಿಖೆಗೆ ಪ್ರಮುಖ ಸಾಕ್ಷಿಯಾಗಿ ಬಳಸಲಾಗುತ್ತಿದೆ.
ಈ ಸಂಬಂಧ ಬೀದರ್ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಇದನ್ನು ನೋಡಿ : ನಾಳೆ ನಡೆದಾಡುವ ದೇವರ ಪುಣ್ಯಸ್ಮರಣೆ – ಸಿದ್ಧಗಂಗಾ ಮಠದಲ್ಲಿ ಹೇಗಿದೆ ಗೊತ್ತಾ ಸಿದ್ಧತೆ..!?




