Tumakuru : ಗೌರಿಶಂಕರ್ ಜೆಡಿಎಸ್ ತೊರೆದ ಬಳಿಕ ಮೊದಲ ಬಾರಿಗೆ ಕ್ಷೇತ್ರಕ್ಕೆ ದಳಪತಿ , ದಳಪತಿಯನ್ನ ಸ್ವಾಗತಿಸಲು ಸಜ್ಜಾಗುತ್ತಿದ್ದಾರೆ ಕಾರ್ಯಕರ್ತರು

Tumakuru : ಮಾಜಿ ಶಾಸಕ ಗೌರಿಶಂಕರ್ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ ಬಳಿಕ ಹಾಗೂ ಬಿಜೆಪಿ–ಜೆಡಿಎಸ್ ಮೈತ್ರಿಯ ನಂತರ, ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಅವರು ಮೊದಲ ಬಾರಿಗೆ ತುಮಕೂರು ಗ್ರಾಮಾಂತರ ಕ್ಷೇತ್ರಕ್ಕೆ ಆಗಮಿಸುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿ ಕ್ಷೇತ್ರದಾದ್ಯಂತ ಸಂಭ್ರಮದ ವಾತಾವರಣ ನಿರ್ಮಾಣವಾಗಿದ್ದು, ಕಾರ್ಯಕರ್ತರು ದಳಪತಿ ಸ್ವಾಗತಕ್ಕೆ ಸಜ್ಜಾಗಿದ್ದಾರೆ.

ಜನವರಿ 23ರ ಶುಕ್ರವಾರ, ತುಮಕೂರು ಗ್ರಾಮಾಂತರ ಕ್ಷೇತ್ರದ ಹೆಬ್ಬೂರು ಹೋಬಳಿಯ
ಸಿರಿವಾರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಾಗಿಮುದ್ದೆನಹಳ್ಳಿ ಗ್ರಾಮದಲ್ಲಿ ನೂತನ ಶ್ರೀ ಆದಿಶಕ್ತಿ ಮಾರಮ್ಮ ದೇವಾಲಯದ ಉದ್ಘಾಟನೆ ಕಾರ್ಯಕ್ರಮಕ್ಕೆ ಹೆಚ್ಡಿಕೆ ಆಗಮಿಸಲಿದ್ದಾರೆ.
ಬೆಳಗ್ಗೆ 11 ಗಂಟೆಗೆ ತುಮಕೂರು ವಿಶ್ವವಿದ್ಯಾನಿಲಯದ ಹೆಲಿಪ್ಯಾಡ್ಗೆ ಆಗಮಿಸುವ ಅವರು,
ಬಳಿಕ ಪಕ್ಷದ ಮುಖಂಡರ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಿ, ಮಧ್ಯಾಹ್ನ 12 ಗಂಟೆಗೆ ಗುಳೂರು–ನಾಗವಲ್ಲಿ ಮಾರ್ಗವಾಗಿ ರಾಗಿಮುದ್ದೆನಹಳ್ಳಿಗೆ ತೆರಳಲಿದ್ದಾರೆ.
ಈ ವೇಳೆ ನಾಗವಲ್ಲಿಯಲ್ಲಿ ಹೆಚ್ಡಿಕೆಗೆ ಬೃಹತ್ ಹಾರ ಹಾಕಿ ಸ್ವಾಗತಿಸಲು ಕಾರ್ಯಕರ್ತರು ಸಿದ್ಧತೆ ನಡೆಸಿದ್ದಾರೆ.
ಇದನ್ನು ಓದಿ : ರೈಲ್ವೆಯಲ್ಲಿ 22,000 ಖಾಲಿ ಹುದ್ದೆಗಳಿಗೆ ನೇಮಕಾತಿ; 10th ಪಾಸಾಗಿದ್ರೆ ಸಾಕು!

ಕೇಂದ್ರ ಸಚಿವರ ಆಗಮನ ಹಿನ್ನೆಲೆಯಲ್ಲಿ ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ಹಬ್ಬದ ವಾತಾವರಣವೇ ನಿರ್ಮಾಣವಾಗಿದ್ದು, ಬೃಹತ್ ಫ್ಲೆಕ್ಸ್, ಬ್ಯಾನರ್ಗಳು ಕಾರ್ಯಕರ್ತರ ಉತ್ಸಾಹವನ್ನು ತೋರಿಸುತ್ತಿವೆ.
ಕಾರ್ಯಕ್ರಮಕ್ಕೆ ಸುಮಾರು 10 ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸುವ ನಿರೀಕ್ಷೆ ಇದ್ದು, ಜೆಡಿಎಸ್ ಕಾರ್ಯಕರ್ತರು ಪೂರ್ವಭಾವಿ ಸಭೆ ನಡೆಸಿದ್ದಾರೆ.
ಸಭೆಯ ಬಳಿಕ ಮಾತನಾಡಿದ ತಾಲೂಕು ಅಧ್ಯಕ್ಷ ನಾಗವಲ್ಲಿ ರಾಮಣ್ಣ ಅವರು, ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದ್ದಾರೆ.

ಇದೇ ವೇಳೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಜ್ಯೋತಿ ಗೋಪಾಲರವರು ಮಾತನಾಡಿ,
ಹಿಂದೆ ಜೆಡಿಎಸ್ ಮತ್ತು ಬಿಜೆಪಿ ನಡುವೆ ನೇರ ಸ್ಪರ್ಧೆ ಇತ್ತಾದರೂ, ಈಗ ಮೈತ್ರಿಯಾಗಿರುವುದರಿಂದ ಎಲ್ಲಾ ಕಾರ್ಯಕರ್ತರು ಒಂದಾಗಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ತಾಲೂಕಿನ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಸ್ವಾಮಿ ಹಾಗೂ ಜೆಡಿಎಸ್ ಕಮಿಟಿ ಸದಸ್ಯ ಶ್ರೀನಿವಾಸ್ ಉಪಸ್ಥಿತರಿದ್ದು, ಕಾರ್ಯಕ್ರಮದ ಯಶಸ್ಸಿಗೆ ಸಹಕಾರ ನೀಡುವಂತೆ ಮನವಿ ಮಾಡಿದರು.
ಇದನ್ನು ನೋಡಿ : ನಾಳೆ ನಡೆದಾಡುವ ದೇವರ ಪುಣ್ಯಸ್ಮರಣೆ – ಸಿದ್ಧಗಂಗಾ ಮಠದಲ್ಲಿ ಹೇಗಿದೆ ಗೊತ್ತಾ ಸಿದ್ಧತೆ..!?




