Karnataka Weather: ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಒಣ ಹವೆ (Dry Weather) ಮುಂದುವರಿಯಲಿದ್ದು, ಹಲವೆಡೆ ತೀವ್ರ ಚಳಿ ಅನುಭವಕ್ಕೆ ಬರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Karnataka Weather: ವಿಶೇಷವಾಗಿ ಬೆಂಗಳೂರಿನಲ್ಲಿ ಮಂಜು ಕವಿದ ಶೀತ ವಾತಾವರಣ ಕಂಡುಬರುತ್ತಿದ್ದು, ಜನರು ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ.
ಬೆಂಗಳೂರಿನಲ್ಲಿ ಮಂಜು ಮತ್ತು ಚಳಿ
ಬೆಂಗಳೂರಿನಲ್ಲಿ ಇಂದು ಕನಿಷ್ಠ ತಾಪಮಾನ 15°C ಹಾಗೂ ಗರಿಷ್ಠ 30°C ದಾಖಲಾಗುವ ನಿರೀಕ್ಷೆ ಇದೆ. ಬೆಳಿಗ್ಗೆ ಮತ್ತು ರಾತ್ರಿ ಸಮಯದಲ್ಲಿ ಮಂಜು ಮುಸುಕಿದ ವಾತಾವರಣ ಇರಲಿದ್ದು, ಚಳಿಯಿಂದಾಗಿ ಮಕ್ಕಳಿಂದ ವೃದ್ಧರವರೆಗೆ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.
ವೈದ್ಯರು ಬೆಚ್ಚಗಿನ ಉಡುಪು ಧರಿಸಲು ಮತ್ತು ಸಮತೋಲಿತ, ಬಿಸಿ ಆಹಾರ ಸೇವಿಸಲು ಸಲಹೆ ನೀಡಿದ್ದಾರೆ.
ಕಳೆದ ಕೆಲವು ದಿನಗಳಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಶುಷ್ಕ ವಾತಾವರಣ ಮುಂದುವರಿಯುತ್ತಿದ್ದು, ಇಂದೂ ಅದೇ ಪರಿಸ್ಥಿತಿ ಇರಲಿದೆ.
ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣ ಹವೆ
ಉತ್ತರ ಒಳನಾಡಿನ ಜಿಲ್ಲೆಗಳಾದ:
ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರ
ಈ ಜಿಲ್ಲೆಗಳಲ್ಲಿ ತೀವ್ರ ಚಳಿ ಮತ್ತು ಒಣ ಹವೆ ಮುಂದುವರಿಯಲಿದೆ.
ಇದನ್ನು ಓದಿ : Greater Bengaluru ಚುನಾವಣೆಗೆ ಆಯೋಗ ರೆಡಿ – EVMಗೆ ಕೊಕ್!
ಕರಾವಳಿ ಜಿಲ್ಲೆಗಳ ಹವಾಮಾನ
ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಹ
➡️ ಒಣ ಹವೆಯ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಒಳನಾಡು ಭಾಗದಲ್ಲೂ ಒಣ ವಾತಾವರಣ
ದಕ್ಷಿಣ ಒಳನಾಡಿನ ಜಿಲ್ಲೆಗಳಾದ:
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಶಿವಮೊಗ್ಗ, ಕೊಡಗು ಮತ್ತು ವಿಜಯನಗರ
➡️ ಎಲ್ಲೆಡೆ ಶುಷ್ಕ ಹಾಗೂ ಚಳಿ ವಾತಾವರಣ ಮುಂದುವರಿಯಲಿದೆ.
ಇದನ್ನು ನೋಡಿ : TUMAKUR | ಗೌರಿಶಂಕರ್ ಕೈ ಸೇರಿದ ಬಳಿಕ ಕ್ಷೇತ್ರಕ್ಕೆ ದಳಪತಿ ಎಂಟ್ರಿ




