Belagavi ಜಿಲ್ಲೆ, ಖಾನಾಪುರ ತಾಲೂಕಿನ ಕಾಪೋಲಿ ಗ್ರಾಮದಲ್ಲಿ ನಾಗರಿಕ ಸಮಾಜವನ್ನು ತಲೆತಗ್ಗಿಸುವಂತೆ ಭೀಕರ ಘಟನೆ ನಡೆದಿದೆ.

Belagavi : 30 ವರ್ಷದ ಕಿರಣಾ ಬಾಳೇಕುಂದ್ರಿ ಅವರನ್ನು ಪತ್ನಿಯ ನಡತೆಯ ಮೇಲೆ ಸಂಶಯ ವ್ಯಕ್ತಪಡಿಸುತ್ತಿದ್ದ ಅವಿನಾಶ್ ಬಾಳೇಕುಂದ್ರಿ ಹತ್ಯೆ ಮಾಡಿದ್ದಾರೆ.
ಪ್ರಾಥಮಿಕವಾಗಿ ಈ ಹತ್ಯೆಯನ್ನು ಹೃದಯಾಘಾತ (Heart Attack) ಎಂದು ಬಿಂಬಿಸಲು ಯತ್ನಿಸಿದ್ದಾನೆ.
ಖಾನಾಪುರ ತಾಲೂಕಿನ ಕಾಪೋಲಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. 30 ವರ್ಷದ ಕಿರಣಾ ಬಾಳೇಕುಂದ್ರಿ ಮೃತ ದುರ್ದೈವಿ.
ಪತ್ನಿಯ ನಡತೆಯ ಮೇಲೆ ಸಂಶಯ ವ್ಯಕ್ತಪಡಿಸುತ್ತಿದ್ದ ಪತಿ ಅವಿನಾಶ್ ಬಾಳೇಕುಂದ್ರಿ, ಇದೇ ವಿಚಾರವಾಗಿ ಕಳೆದ ಎರಡು ದಿನಗಳಿಂದ ಮನೆಯಲ್ಲಿ ಕಿರಿಕಿರಿ ಮಾಡುತ್ತಿದ್ದ ಎನ್ನಲಾಗಿದೆ.
ಜಗಳ ವಿಕೋಪಕ್ಕೆ ಹೋಗಿದೆ..
ಕಳೆದ ಎರಡು ದಿನಗಳಿಂದ ಪತಿ-ಪತ್ನಿಯ ನಡುವೆ ತೀವ್ರ ಜಗಳ ನಡೆಯುತ್ತಿತ್ತು. ಜಗಳ ವಿಕೋಪಕ್ಕೆ ಹೋದ ಸಂದರ್ಭದಲ್ಲಿ ಆಕ್ರೋಶಗೊಂಡ ಅವಿನಾಶ್, ಪತ್ನಿಯ ಮೇಲೆ ತೀವ್ರವಾಗಿ ಹಲ್ಲೆ ನಡೆಸಿದ್ದಾನೆ.
ಪತಿಯ ಬರ್ಬರ ಹಲ್ಲೆಗೆ ತುತ್ತಾದ ಕಿರಣಾ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.
ಇದನ್ನು ಓದಿ : ವಿಜ್ಞಾನ ಲೋಕಕ್ಕೆ 27 ವರ್ಷಗಳ ಅಮೋಘ ಸೇವೆ – Sunita Williams ನಿವೃತ್ತಿ..!
ಹೃದಯಾಘಾತದ ನಾಟಕ
ಪತ್ನಿ ಮೃತಪಡುತ್ತಿದ್ದಂತೆಯೇ ಗಾಬರಿಗೊಂಡ ಆರೋಪಿ ಅವಿನಾಶ್, ಪೊಲೀಸರು ಮತ್ತು ಮನೆಯವರಿಂದ ತಪ್ಪಿಸಿಕೊಳ್ಳಲು ಹೊಸ ಸಂಚು ರೂಪಿಸಿದ್ದ. ಪತ್ನಿ ಹೃದಯಾಘಾತದಿಂದ (Heart Attack) ಸಾವನ್ನಪ್ಪಿದ್ದಾಳೆ ಎಂದು ಎಲ್ಲರಿಗೂ ನಂಬಿಸಲು ಯತ್ನಿಸಿದ್ದಾನೆ.
ಮಹಿಳೆಯ ದೇಹದ ಮೇಲಿದ್ದ ಗಾಯದ ಗುರುತುಗಳು ಮತ್ತು ಪೋಲಿಸರ ತನಿಖೆಯ ವೇಳೆ ಸತ್ಯಾಂಶ ಹೊರಬಿದ್ದಿದೆ.
ಪೊಲೀಸ್ ಕಾರ್ಯಾಚರಣೆ
ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ನಂದಗಡ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಪತ್ನಿಯ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಪೊಲೀಸರು ಪತಿ ಅವಿನಾಶ್ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೊಲೆ ರಹಸ್ಯ ಬಯಲಾಗಿದೆ.
ಸದ್ಯ ನಂದಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಿ ಮುಂದಿನ ಕ್ರಮ ಕೈಗೊಳ್ಳಲಾಗಿದೆ. ಶೀಲದ ಮೇಲಿನ ಸಂಶಯವೊಂದು ಒಂದು ಜೀವವನ್ನು ಬಲಿಪಡೆದಿದ್ದು, ಕಾಪೋಲಿ ಗ್ರಾಮದಲ್ಲಿ ಸ್ಮಶಾನ ಮೌನ ಆವರಿಸಿದೆ.
ಇದನ್ನು ನೋಡಿ : BREAKING : ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಯಾತ್ರಿಕ ಚಿರತೆ ದಾಳಿಗೆ ಬಲಿ : ತಾಳಬೆಟ್ಟದ ಕಂದಕದಲ್ಲಿ ಶವ ಪತ್ತೆ.!




