Kalaburagi ನಗರದ ಲಾಡ್ಜ್ ಒಂದರ ಹಿಂಭಾಗದ ಪಾಳುಬಿದ್ದ ಪಾರ್ಕ್ನಲ್ಲಿ ಯುವಕನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ.

Kalaburagi : ತಡರಾತ್ರಿ ಅಪರಿಚಿತ ದುಷ್ಕರ್ಮಿಗಳು ಈ ಕೃತ್ಯ ಎಸಗಿ ಸ್ಥಳದಿಂದ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ.
ಹತ್ಯೆಯಾದ ಯುವಕನನ್ನು ಸಯ್ಯದ್ ಮೆಹಬೂಬ್ ಅಲಿಯಾಸ್ ಬಾಡಿ (21) ಎಂದು ಗುರುತಿಸಲಾಗಿದೆ.ಪ್ರಾಥಮಿಕ ಮಾಹಿತಿ ಪ್ರಕಾರ, ಮೆಹಬೂಬ್ ಕೆಲವು ಕಳ್ಳತನ ಪ್ರಕರಣಗಳಲ್ಲಿ ಆರೋಪಿಯಾಗಿದ್ದ ಎನ್ನಲಾಗಿದೆ.
ಪೊಲೀಸರು ಹಳೆಯ ದ್ವೇಷದ ಹಿನ್ನೆಲೆ ಈ ಕೊಲೆ ನಡೆದಿರುವ ಸಾಧ್ಯತೆ ಇದೆ ಎಂದು ಶಂಕಿಸಿದ್ದಾರೆ. ಘಟನೆಯ ಎಲ್ಲಾ ಆಯಾಮಗಳಿಂದ ತನಿಖೆ ಮುಂದುವರಿದಿದೆ.
ಇದನ್ನು ಓದಿ : ವಿಜಯಲಕ್ಷ್ಮೀ ನಿಂದನೆ ಕೇಸ್ : `CCB’ ಸೈಬರ್ ಪೊಲೀಸರಿಂದ ನೋಟಿಸ್ ಜಾರಿ
ಪೊಲೀಸ್ ಮತ್ತು ಫಾರೆನ್ಸಿಕ್ ತನಿಖೆ
ಘಟನೆಯ ಮಾಹಿತಿ ಪಡೆದ ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಫಾರೆನ್ಸಿಕ್ ತಂಡ ಮತ್ತು ಶ್ವಾನ ದಳದಿಂದಲೂ ತನಿಖೆ ಕೈಗೊಳ್ಳಲಾಗಿದೆ.
ಈ ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಮೆಹಬೂಬ್ ತಂದೆ,
“ನನ್ನ ಮಗ ಮನೆಗೆ ಕಡಿಮೆ ಬರುತ್ತಿದ್ದ. ಹೆಚ್ಚಿನ ಸಮಯ ಬಸ್ ನಿಲ್ದಾಣ ಸೇರಿದಂತೆ ಹೊರಗಡೆಯೇ ಮಲಗುತ್ತಿದ್ದ. ಈಗ ಮಗನನ್ನೇ ಕಳೆದುಕೊಂಡಿದ್ದೇನೆ” ಎಂದು ಕಣ್ಣೀರಿಟ್ಟಿದ್ದಾರೆ.
ಕಾನೂನು ಕ್ರಮ
ಈ ಕುರಿತು ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.
ಇದನ್ನು ನೋಡಿ : ಶಾಲಾ ಬಾಲಕಿ ಹಿಂಬಾಲಿಸಿದ ಕಿರಾತಕ ಮನೆ ಬಳಿ ಬಂದ ಬಾಲಕಿ ಏನ್ ಮಾಡಿದ್ಲು ಗೊತ್ತಾ




