Yadgir ಜಿಲ್ಲೆಯ ವಡಗೇರ ಪಟ್ಟಣದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ.

Yadgir : ಶಾಲಾ ಸಮಯದಲ್ಲೇ 9ನೇ ತರಗತಿ ವಿದ್ಯಾರ್ಥಿಯೊಬ್ಬ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಡಗೇರ ಸರ್ಕಾರಿ ಪ್ರೌಢಶಾಲೆಯ ಹಿಂಭಾಗದಲ್ಲಿ ಬೆಳಕಿಗೆ ಬಂದಿದೆ.
ವಡಗೇರ ನಿವಾಸಿಯಾಗಿರುವ ಪವನ್ (13) ಎಂಬ 9ನೇ ತರಗತಿ ವಿದ್ಯಾರ್ಥಿ ಶಾಲೆ ನಡೆಯುತ್ತಿದ್ದ ಸಮಯದಲ್ಲೇ ವಡಗೇರ ಸರ್ಕಾರಿ ಪ್ರೌಢಶಾಲೆಯ ಹಿಂಭಾಗದಲ್ಲಿರುವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ದುರ್ಘಟನೆ ಬೆಳಕಿಗೆ ಬರುತ್ತಿದ್ದಂತೆಯೇ ಶಾಲಾ ವಲಯದಲ್ಲಿ ಹಾಗೂ ಸ್ಥಳೀಯ ನಿವಾಸಿಗಳಲ್ಲಿ ತೀವ್ರ ಆಘಾತ ಮತ್ತು ದುಃಖದ ವಾತಾವರಣ ಆವರಿಸಿದೆ.
ಇದನ್ನು ಓದಿ : ವಿಜಯಲಕ್ಷ್ಮೀ ನಿಂದನೆ ಕೇಸ್ : `CCB’ ಸೈಬರ್ ಪೊಲೀಸರಿಂದ ನೋಟಿಸ್ ಜಾರಿ
ವಿದ್ಯಾರ್ಥಿ ಪವನ್ ಆತ್ಮಹತ್ಯೆ ಮಾಡಿಕೊಂಡಿರುವುದಕ್ಕೆ ನಿಖರ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಘಟನಾ ಸ್ಥಳದಲ್ಲಿ ಯಾವುದೇ ಸುಸೈಡ್ ನೋಟ್ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದ್ದು, ಈ ದುರ್ಘಟನೆ ಹಲವು ಅನುಮಾನಗಳಿಗೆ ಕಾರಣವಾಗಿದ್ದು, ಪ್ರಕರಣದ ಕುರಿತು ಹೆಚ್ಚಿನ ಮಾಹಿತಿ ತಿಳಿಯಲು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಘಟನೆಯ ಮಾಹಿತಿ ಪಡೆದ ಪೊಲೀಸರು ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆತ್ಮಹತ್ಯೆಯ ಹಿನ್ನೆಲೆ ಹಾಗೂ ನಿಖರ ಕಾರಣ ಪತ್ತೆ ಹಚ್ಚಲು ತನಿಖೆ ಕೈಗೊಂಡಿದ್ದಾರೆ.
ಇನ್ನು ಶಾಲಾ ಸಮಯದಲ್ಲೇ ಈ ದುರ್ಘಟನೆ ಸಂಭವಿಸಿರುವುದು ಶಾಲಾ ವಲಯದಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದೆ. ಪೋಷಕರಲ್ಲಿ ಗಾಬರಿ ಮೂಡಿದ್ದರೆ, ಶಿಕ್ಷಕರಲ್ಲಿ ನೋವು ಆವರಿಸಿದ್ದು, ಸಹಪಾಠಿಗಳಲ್ಲಿ ಭಯ ಮತ್ತು ದುಃಖದ ವಾತಾವರಣ ನಿರ್ಮಾಣವಾಗಿದೆ.
ಇದನ್ನು ನೋಡಿ : ಶಾಲಾ ಬಾಲಕಿ ಹಿಂಬಾಲಿಸಿದ ಕಿರಾತಕ ಮನೆ ಬಳಿ ಬಂದ ಬಾಲಕಿ ಏನ್ ಮಾಡಿದ್ಲು ಗೊತ್ತಾ




