Bengaluru : ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ನಿರಾಕರಿಸಿದ ಕರ್ನಾಟಕ ರಾಜ್ಯಪಾಲ ಗೆಹ್ಲೋಟ್..

Bengaluru : ನಾಳೆಯಿಂದ ಕರ್ನಾಟಕ ವಿಧಾನಮಂಡಲದ ವಿಶೇಷ ಅಧಿವೇಶನ ಆರಂಭವಾಗಲಿದ್ದು, ಇದರ ಭಾಗವಾಗಿ ನಡೆಯಲಿರುವ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡಲು ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನಿರಾಕರಿಸಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ.
ರಾಜ್ಯಪಾಲರ ನಿರ್ಧಾರಕ್ಕೆ ಹಿನ್ನೆಲೆ
ಇತ್ತೀಚೆಗೆ ತಮಿಳುನಾಡಿನಲ್ಲಿ ಜಂಟಿ ಅಧಿವೇಶನದ ಭಾಷಣಕ್ಕೆ ಅಲ್ಲಿನ ರಾಜ್ಯಪಾಲರು ವಿರೋಧ ವ್ಯಕ್ತಪಡಿಸಿದ್ದ ಬೆಳವಣಿಗೆಯ ಬೆನ್ನಲ್ಲೇ, ಇದೀಗ ಕರ್ನಾಟಕದಲ್ಲೂ ಇದೇ ರೀತಿಯ ಪರಿಸ್ಥಿತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯಪಾಲ ಗೆಹ್ಲೋಟ್ ಅವರು ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದಿರಲು ತೀರ್ಮಾನಿಸಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.
ಇದನ್ನು ಓದಿ : ವಿಜಯಲಕ್ಷ್ಮೀ ನಿಂದನೆ ಕೇಸ್ : `CCB’ ಸೈಬರ್ ಪೊಲೀಸರಿಂದ ನೋಟಿಸ್ ಜಾರಿ
ಕಾಂಗ್ರೆಸ್ ನಿಯೋಗದಿಂದ ಮನವೊಲಿಕೆ ಯತ್ನ
ರಾಜ್ಯಪಾಲರ ನಿರಾಕರಣೆಯ ಬೆನ್ನಲ್ಲೇ, ಇಂದು ಸಂಜೆ 5.45ಕ್ಕೆ ಕಾಂಗ್ರೆಸ್ ಪಕ್ಷದ ಉನ್ನತ ಮಟ್ಟದ ನಿಯೋಗ ರಾಜಭವನಕ್ಕೆ ತೆರಳಿ ರಾಜ್ಯಪಾಲರನ್ನು ಮನವೊಲಿಸಲು ಮುಂದಾಗಿದೆ ಎಂದು ತಿಳಿದು ಬಂದಿದೆ.
ಈ ನಿಯೋಗಕ್ಕೆ ಕಾನೂನು ಸಚಿವ ಹೆಚ್.ಕೆ. ಪಾಟೀಲ್ ನೇತೃತ್ವ ವಹಿಸಲಿದ್ದಾರೆ ಎನ್ನಲಾಗಿದೆ.
ರಾಜಕೀಯ ವಲಯದಲ್ಲಿ ಕುತೂಹಲ
ಜಂಟಿ ಅಧಿವೇಶನಕ್ಕೆ ರಾಜ್ಯಪಾಲರ ಭಾಷಣ ಸಂಪ್ರದಾಯದ ಭಾಗವಾಗಿರುವುದರಿಂದ, ಈ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ಮಹತ್ವದ ಚರ್ಚೆ ಮತ್ತು ಕುತೂಹಲಕ್ಕೆ ಕಾರಣವಾಗಿದೆ. ಮುಂದಿನ ಬೆಳವಣಿಗೆಗಳತ್ತ ಎಲ್ಲರ ಗಮನ ಸೆಳೆಯಲಾಗಿದೆ.
ಇದನ್ನು ನೋಡಿ : ಶಾಲಾ ಬಾಲಕಿ ಹಿಂಬಾಲಿಸಿದ ಕಿರಾತಕ ಮನೆ ಬಳಿ ಬಂದ ಬಾಲಕಿ ಏನ್ ಮಾಡಿದ್ಲು ಗೊತ್ತಾ




