ಮುಡಾ ಹಗರಣ – CM ಗೆ ಇಂದು ಬಿಗ್ ಡೇ.

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ನೀಡಿರುವ ಕ್ಲೀನ್ಚಿಟ್ ವಿಚಾರದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು (ಜನವರಿ 22) ಮಹತ್ವದ ಆದೇಶ ಪ್ರಕಟಿಸಲಿದೆ.
ಆದೇಶವನ್ನು ಇಂದಿಗೆ ಕಾಯ್ದಿರಿಸಿತ್ತು
ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ ಸೇರಿದಂತೆ ನಾಲ್ವರ ವಿರುದ್ಧ ಬಿ–ರಿಪೋರ್ಟ್ ಸಲ್ಲಿಸಿದ್ದರು. ಈ ಬಿ–ರಿಪೋರ್ಟ್ನ್ನು ಪ್ರಶ್ನಿಸಿ ದೂರುದಾರ ಸ್ನೇಹಮಯಿ ಕೃಷ್ಣ ಅವರು ನ್ಯಾಯಾಲಯದ ಮೆಟ್ಟಿಲೇರಿದ್ದರು. ಪ್ರಕರಣದ ಎರಡೂಪಕ್ಷಗಳ ವಾದ ಆಲಿಸಿದ ನ್ಯಾಯಾಲಯ, ಆದೇಶವನ್ನು ಇಂದಿಗೆ ಕಾಯ್ದಿರಿಸಿತ್ತು.
ಇದನ್ನು ಓದಿ : Dina Bhavishya : ದಿನ ಭವಿಷ್ಯ 22 ಜನವರಿ 2026

CM ಕುಟುಂಬಕ್ಕೆ ದೊಡ್ಡ ರಿಲೀಫ್
ನ್ಯಾಯಾಲಯ ಬಿ-ರಿಪೋರ್ಟ್ ಒಪ್ಪಿದರೆ CM ಕುಟುಂಬಕ್ಕೆ ಬಿಗ್ ರಿಲೀಫ್ ಸಿಗಲಿದೆ. ಒಪ್ಪದೇ ಇದ್ದರೆ ದೊಡ್ಡ ಸಂಕಷ್ಟ ಎದುರಾಗಲಿದೆ. ಇತ್ತ ಲೋಕಾಯುಕ್ತ ಅಂತಿಮ ವರದಿ ನೀಡಿದ್ದು, ಆದೇಶ ಹೊರಬೀಳಲಿದೆ.
ಸೀಲ್ಡ್ ಕವರ್ನಲ್ಲಿ ವರದಿ ನೀಡಲು ಸಿದ್ಧ
ಇದಕ್ಕೂ ಮುನ್ನ ವಿಚಾರಣೆ ನಡೆಸಿದ್ದ ಕೋರ್ಟ್, ಈ ಹಿಂದೆ ಲೋಕಾಯುಕ್ತ ಪೊಲೀಸರು ಸಾಕಷ್ಟು ದೋಷಾರೋಪ ಪಟ್ಟಿ ಹಾಕಿದ್ದಾರೆ. ಆದರೆ ಯಾಕೆ ಅಂತಿಮ ವರದಿ ಸಲ್ಲಿಕೆ ಮಾಡುತ್ತಿಲ್ಲ ಎಂದು ಜಡ್ಜ್ ಪ್ರಶ್ನಿಸಿದ್ದರು. ಇದಕ್ಕೆ ಉತ್ತರಿಸಿದ ಲೋಕಾಯುಕ್ತ ವಿಶೇಷ ಸರ್ಕಾರಿ ಆಭಿಯೋಜಕ, ಈಗಾಗಲೇ ಅಂತಿಮ ವರದಿ ತಯಾರಿ ಆಗಿದೆ. ಅನುಮತಿ ಸಿಗದ ಕಾರಣ ಸಲ್ಲಿಕೆ ಮಾಡುತ್ತಿಲ್ಲ. ಸ್ವಲ್ಪ ಸಮಯ ನೀಡಿದರೆ ಸೀಲ್ಡ್ ಕವರ್ನಲ್ಲಿ ವರದಿ ನೀಡಲು ಸಿದ್ಧ ಎಂದು ತಿಳಿಸಿದ್ದರು.

ಇದನ್ನು ನೋಡಿ : CHIKKABALLAPURA |ಶಿಡ್ಲಘಟ್ಟದಲ್ಲಿ ಚಿಮುಲ್ ಎಲೆಕ್ಷನ್ ಕಾವು




