Bengaluru ನ ಕೆ.ಆರ್ ಪುರ (KR Pura) ವ್ಯಾಪ್ತಿಯ ಟಿ.ಸಿ ಪಾಳ್ಯ ಸಿಗ್ನಲ್ ಬಳಿ ಇರುವ ಎಲೆಕ್ಟ್ರಿಕ್ ಬೈಕ್ ಶೋರೂಂನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ.

Bengaluru : ಶಾರ್ಟ್ ಸರ್ಕ್ಯೂಟ್ನಿಂದಾಗಿ ಶೋರೂಂಗೆ ಬೆಂಕಿ ಹೊತ್ತಿಕೊಂಡು, ಅಲ್ಲಿದ್ದ 13 ಎಲೆಕ್ಟ್ರಿಕ್ ಬೈಕ್ಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿವೆ.
ಈ ದುರ್ಘಟನೆ ಬುಧವಾರ ರಾತ್ರಿ 9:30ರ ಸುಮಾರಿಗೆ ನಡೆದಿದೆ. ಅಚಾನಕ್ ಬೆಂಕಿ ಹೊತ್ತಿಕೊಂಡಂತೆ ಶೋರೂಂನೊಳಗೆ ಕೆನ್ನಾಲಿಗೆ ವ್ಯಾಪಿಸಿದ್ದು, ಪರಿಸ್ಥಿತಿ ಕೆಲಕಾಲ ಆತಂಕಕ್ಕೆ ಕಾರಣವಾಯಿತು.
ಬೆಂಕಿ ಕಾಣಿಸಿಕೊಂಡ ತಕ್ಷಣವೇ ಶೋರೂಂ ಸಿಬ್ಬಂದಿ ಹೊರಗೆ ಓಡಿ ಬಂದಿದ್ದಾರೆ. ಇದರಿಂದಾಗಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆದರೆ ಬೆಂಕಿಯ ತೀವ್ರತೆಗೆ ಶೋರೂಂನಲ್ಲಿದ್ದ ಎಲ್ಲಾ 13 ಎಲೆಕ್ಟ್ರಿಕ್ ಬೈಕ್ಗಳು ಕರಕಲಾಗಿವೆ.
ಇದನ್ನು ಓದಿ : Dina Bhavishya : ದಿನ ಭವಿಷ್ಯ 22 ಜನವರಿ 2026
ಅಗ್ನಿಶಾಮಕ ದಳದ ತ್ವರಿತ ಕಾರ್ಯಾಚರಣೆ
ಘಟನೆಯ ಮಾಹಿತಿ ಪಡೆದ ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಿದ್ದಾರೆ. ಬೆಂಕಿ ಇನ್ನಷ್ಟು ವ್ಯಾಪಿಸುವುದನ್ನು ತಡೆದು ದೊಡ್ಡ ಅವಘಡ ತಪ್ಪಿಸಲಾಗಿದೆ.
ಪೊಲೀಸ್ ಪರಿಶೀಲನೆ
ಪ್ರಾಥಮಿಕ ಮಾಹಿತಿ ಪ್ರಕಾರ ಶಾರ್ಟ್ ಸರ್ಕ್ಯೂಟ್ನಿಂದಲೇ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಸ್ಥಳೀಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.
ಇದನ್ನು ನೋಡಿ : CHIKKABALLAPURA |ಶಿಡ್ಲಘಟ್ಟದಲ್ಲಿ ಚಿಮುಲ್ ಎಲೆಕ್ಷನ್ ಕಾವು




