ಪೋಕ್ಸೋ ಸಂತ್ರಸ್ತೆಯ ಹೆಸರು ಉಲ್ಲೇಖಿಸಿದ್ದಕ್ಕೆ ಕ್ಷಮೆ ಕೇಳಿದ Sreeramulu.

ಬಳ್ಳಾರಿಯಲ್ಲಿ ಜನವರಿ 17 ರಂದು ನಡೆದ ಬೃಹತ್ ಸಮಾವೇಶದಲ್ಲಿ, ಬ್ಯಾನರ್ ಗಲಭೆಯನ್ನು ಖಂಡಿಸುವ ಸಂದರ್ಭದಲ್ಲಿ ಪೋಕ್ಸೋ ಪ್ರಕರಣದ ಸಂತ್ರಸ್ತೆಯ ಹೆಸರು ಸೇರಿದಂತೆ ಸಂಪೂರ್ಣ ವಿವರ ಬಹಿರಂಗಪಡಿಸಿದ್ದ ವಿಚಾರಕ್ಕೆ ಸಂಬಂಧಿಸಿ ಮಾಜಿ ಸಚಿವ ಬಿ. ಶ್ರೀರಾಮುಲು ಕ್ಷಮೆ ಯಾಚಿಸಿದ್ದಾರೆ.
ಜಾಗೃತಿ ಮೂಡಿಸುವ ಉದ್ದೇಶದಿಂದ ಮಾತನಾಡಿದ್ದೇನೆ
ಬಳ್ಳಾರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಶ್ರೀರಾಮುಲು, “ಗಲಭೆ ಖಂಡಿಸಿ ನಡಿದ ಸಮಾವೇಶದಲ್ಲಿ ಸಾಕಷ್ಟು ವಿಚಾರಗಳನ್ನು ನಮ್ಮ ನಾಯಕರು ಮಾತನಾಡಿದ್ದಾರೆ. ನಾನು ಕೂಡ ಜಾಗೃತಿ ಮೂಡಿಸುವ ಉದ್ದೇಶದಿಂದ ಮಾತನಾಡಿದ್ದೇನೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗ ದಾಂಧಲೆ ನಡೆಯುತ್ತಿದೆ ಎಂದು ದೂರಿದರು.
ಇದನ್ನು ಓದಿ : IPL ಆರಂಭಕ್ಕೂ ಮುನ್ನ ಆರ್ಸಿಬಿ ಬಗ್ಗೆ ಧೋನಿ ಮಹತ್ವದ ಹೇಳಿಕೆ

ಅತ್ಯಾಚಾರದ ಬಗ್ಗೆಯೂ ಪ್ರಸ್ತಾಪ ಮಾಡಿದ್ದೇನೆ
ಕೊಲೆಗಳು, ಗಾಂಜಾ, ಡ್ರಗ್ಸ್, ಅತ್ಯಾಚಾರ ನಡೆಯುತ್ತಿದೆ. ಅದನ್ನೇ ಪ್ರಸ್ತಾಪ ಮಾಡುವಾಗ ಅತ್ಯಾಚಾರದ ಬಗ್ಗೆಯೂ ಪ್ರಸ್ತಾಪ ಮಾಡಿದ್ದೇನೆ. ಬಾಲಕಿಯ ಹೆಸರು ಹೇಳಿ ಉಲ್ಲೇಖ ಮಾಡಿದ್ದೆ. ಆ ಬಾಲಕಿಯ ಕುಟುಂಬಕ್ಕೆ ನೋವಾಗಿದ್ದರೆ ನಾನು ಕ್ಷಮೆ ಯಾಚಿಸುತ್ತೇನೆ. ಆ ಸಂತ್ರಸ್ತ ಕುಟುಂಬದ ಜೊತೆ ನಾನು ಇರುತ್ತೇನೆ.
ನಾನು ಕ್ಷಮೆ ಕೇಳುತ್ತೇನೆ
ಆ ಕುಟುಂಬದ ಜೊತೆ ಬಿಜೆಪಿಯೂ ಇರುತ್ತೆ. ಅವರಿಗೆ ನ್ಯಾಯ ಒದಗಿಸುತ್ತೇವೆ. ಆ ಕುಟುಂಬ, ಆ ಮಗಳಿಗೆ ನೋವಾಗಿದರೆ ನಾನು ಕ್ಷಮೆ ಕೇಳುತ್ತೇನೆ. ಜಾಗೃತಿ ಮಾಡಿಸುವ ಸಲುವಾಗಿ ನನ್ನ ಮಗಳು ಅಂದುಕೊಂಡು ಪ್ರಸ್ತಾಪ ಮಾಡಿದ್ದೇನೆ ಎಂದ ರಾಮುಲು, ರಾಮಾಯಣದ ಕಥೆ ಉಲ್ಲೇಖಿಸಿ ತನ್ನ ಹೇಳಿಕೆ ಸಮರ್ಥಿಸಿಕೊಂಡರು.

ಇದನ್ನು ನೋಡಿ : R ASHOK | ನನಗೆ ಕಾಂಗ್ರೆಸ್ಸಿಗರಿಗಿಂತ ಹೆಚ್ಚು ಜವಾಬ್ದಾರಿ ಇದೆ – ಕಾಂಗ್ರೆಸ್ಸಿಗರೇ ಅಪರಾಧಿಗಳೆಂದ ಅಶೋಕ್




