Channarayapatna : ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

Channarayapatna : ಈ ದುರ್ಘಟನೆ ಮಾಳೇಕೊಪ್ಪಲು ಸಮೀಪದ ಫ್ಲೈಓವರ್ ಮೇಲೆ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ಸಂಜು (16) ಎಂದು ಗುರುತಿಸಲಾಗಿದೆ. ಅವರು ಹೊನ್ನಶೆಟ್ಟಿಹಳ್ಳಿ ಗ್ರಾಮದ ಗಿರೀಶ್ ಅವರ ಪುತ್ರರಾಗಿದ್ದು, ಅಜ್ಜಿ ಮನೆಯಿಂದ ಕಾಲೇಜಿಗೆ ಸೈಕಲ್ನಲ್ಲಿ ತೆರಳುತ್ತಿದ್ದರು. ಈ ವೇಳೆ ರಸ್ತೆ ದಾಟುವಾಗ ವೇಗವಾಗಿ ಬಂದ ಕಾರೊಂದು ಸೈಕಲ್ಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ಸ್ಥಳದಲ್ಲೇ ಸಾವು
ಕಾರಿನ ತೀವ್ರ ಡಿಕ್ಕಿಯಿಂದ ಸಂಜು ರಸ್ತೆ ಮೇಲೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗೂ ಮುನ್ನವೇ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಅಪಘಾತದ ದೃಶ್ಯ ಕಂಡ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.
ಇದನ್ನು ಓದಿ : IPL ಆರಂಭಕ್ಕೂ ಮುನ್ನ ಆರ್ಸಿಬಿ ಬಗ್ಗೆ ಧೋನಿ ಮಹತ್ವದ ಹೇಳಿಕೆ
ಅಪ್ರಾಪ್ತ ವಯಸ್ಸಿನ ಮಗನನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ಕುಟುಂಬಸ್ಥರು ಹಾಗೂ ಗ್ರಾಮಸ್ಥರಲ್ಲಿ ತೀವ್ರ ದುಃಖ ಆವರಿಸಿದೆ. ಈ ದುರ್ಘಟನೆ ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಿಸಿದೆ.
ಸ್ಥಳಕ್ಕೆ ಪೊಲೀಸ್ ಭೇಟಿ, ತನಿಖೆ ಆರಂಭ
ಘಟನೆಯ ಮಾಹಿತಿ ಪಡೆದ ಚನ್ನರಾಯಪಟ್ಟಣ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾರು ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ಅಪಘಾತದ ಕುರಿತು ತನಿಖೆ ಆರಂಭಿಸಲಾಗಿದೆ.
ಇದನ್ನು ನೋಡಿ : R ASHOK | ನನಗೆ ಕಾಂಗ್ರೆಸ್ಸಿಗರಿಗಿಂತ ಹೆಚ್ಚು ಜವಾಬ್ದಾರಿ ಇದೆ – ಕಾಂಗ್ರೆಸ್ಸಿಗರೇ ಅಪರಾಧಿಗಳೆಂದ ಅಶೋಕ್




