CM ಸಿದ್ಧರಾಮಯ್ಯ, ಪತ್ನಿ ವಿರುದ್ಧದ ಮುಡಾ ಸೈಟ್ ವಂಚನೆ ಕೇಸ್: ಜ.28ಕ್ಕೆ ಬಿ ರಿಪೋರ್ಟ್ ಪ್ರಶ್ನಿಸಿದ್ದ ಆದೇಶ ಮುಂದೂಡಿಕೆ.

ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಅವರ ಪತ್ನಿ ಪಾರ್ವತಿ ವಿರುದ್ಧ ದಾಖಲಾಗಿರುವ ಮುಡಾ (MUDA) ಸೈಟ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಬಿ ರಿಪೋರ್ಟ್ ಪ್ರಶ್ನಿಸಿರುವ ಅರ್ಜಿಯ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಜನವರಿ 28ಕ್ಕೆ ಮುಂದೂಡಿದೆ.

ಸಮಗ್ರ ತನಿಖೆ ನಡೆಸಬೇಕೆಂದು ಮನವಿ
ಇಂದು ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ, ಮುಡಾ ಸೈಟ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಸ್ನೇಹಮಹಿ ಕೃಷ್ಣ ಅವರು ಸಲ್ಲಿಸಿದ ಬಿ ರಿಪೋರ್ಟ್ ಪ್ರಶ್ನಿಸಿರುವ ಅರ್ಜಿಯ ವಿಚಾರಣೆ ನಡೆಯಿತು. ಈ ಅರ್ಜಿಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಅವರ ಪತ್ನಿ ಪಾರ್ವತಿ ವಿರುದ್ಧ ಸಮಗ್ರ ತನಿಖೆ ನಡೆಸಬೇಕೆಂದು ಮನವಿ ಮಾಡಲಾಗಿದೆ.
ಇದನ್ನು ಓದಿ : Haveri|ಮನೆ ದರೋಡೆ ಮಾಡಿ ಚಿನ್ನಾಭರಣ ದೋಚಿದ್ದ ಕಳ್ಳರು ಅಂದರ್

ಜನವರಿ.28ಕ್ಕೆ ಮುಂದೂಡಿಕೆ – CM
ಅರ್ಜಿಯ ವಿಚಾರಣೆ ನಡೆಸಿದಂತ ಜನಪ್ರತಿನಿಧಿಗಳ ನ್ಯಾಯಾಲಯವು ಆದೇಶವನ್ನು ಜನವರಿ.28ಕ್ಕೆ ಮುಂದೂಡಿಕೆ ಮಾಡಲಾಗಿದೆ. ಹೀಗಾಗಿ ಮತ್ತೆ ಸಿಎಂ ಸಿದ್ಧರಾಮಯ್ಯ, ಪತ್ನಿ ಪಾರ್ವತಿ ವಿರುದ್ಧದ ಮುಡಾ ಸೈಟ್ ವಂಚನೆ ಕೇಸಲ್ಲಿ ಸಂಕಷ್ಟ ಎದುರಾಗಲಿದ್ಯಾ ಎಂಬುದು ಕುತೂಹಲ ಮೂಡಿಸಿದೆ.

ಇದನ್ನು ನೋಡಿ : KN RAJANNA | ಅಭಿವೃದ್ಧಿಯ ವಿಚಾರದಲ್ಲಿ ರಾಜಿಯಾಗಲ್ಲ ಶಾಸಕ ಕೆ.ಎನ್.ರಾಜಣ್ಣ ಖಡಕ್ ಮಾತು




