Belagavi ಯಲ್ಲಿ ಮದುವೆ ಆಗಿ 3 ವರ್ಷಗಳಾದ್ರೂ ಮಕ್ಕಳಾಗಿಲ್ಲವೆಂದು ಹೆಂಡ್ತಿ ಕಾಟ – ಕಿರಿಕಿರಿಗೆ ಬೇಸತ್ತು ಉಸಿರುಗಟ್ಟಿಸಿ ಹತ್ಯೆಗೈದ ಪಾಪಿ ಪತಿ.

ಮದುವೆ ಆಗಿ 3 ವರ್ಷಗಳಾದ್ರೂ ಮಕ್ಕಳಾಗಿಲ್ಲವೆಂದು ಕಾಟ ಕೊಡುತ್ತಿದ್ದ ಹೆಂಡತಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿರುವ ಘಟನೆ Belagavi ಜಿಲ್ಲೆಯ ಬೈಲಹೊಂಗಲ ತಾಲೂಕಿನ ನೇಗಿನಹಾಳ ಗ್ರಾಮದಲ್ಲಿ ಘಟನೆ ನಡೆದಿದೆ.
ಉಸಿರುಗಟ್ಟಿಸಿ ಹತ್ಯೆಗೈದ ಪಾಪಿ
ಮೃತಳನ್ನು ರಾಜೇಶ್ವರಿ (21) ಯನ್ನು ಪತಿ ಫಕೀರಪ್ಪ ಗಿಲಕ್ಕನವರ ಪತ್ನಿಯನ್ನು ಕೊಲೆ ಮಾಡದ್ದಾನೆ. ಹೃದಯಾಘಾತದಿಂದ ಮೃತಳಾಗಿದ್ದಾಳೆಂದು ಕಥೆ ಕಟ್ಟಿದ್ದ ಎನ್ನಲಾಗಿ ದೆ. ಮದುವೆಯಾಗಿ 3 ವರ್ಷಗಳಾದ್ರೂ ಮಕ್ಕಳಾಗಿಲ್ಲವೆಂದು ಹೆಂಡತಿ ಕಾಟ ಕೊಡುತ್ತಿದ್ದಳು. ಕಿರಿಕಿರಿಗೆ ಬೇಸತ್ತಿದ್ದ ಪತಿ ಆ ದಿನ ಸಿಟ್ಟಿಗೆದ್ದು ಉಸಿರುಗಟ್ಟಿಸಿ ಪತ್ನಿಯನ್ನೇ ಕೊಲೆ ಮಾಡಿದ್ದಾನೆ.
ಇದನ್ನು ಓದಿ : ವಿಶ್ವದಲ್ಲೇ ಹೆಚ್ಚು Traffic ಇರುವ ನಗರ – ಬೆಂಗಳೂರಿಗೆ 2ನೇ ಸ್ಥಾನ!

ಬೆಚ್ಚಿ ಬೀಳಿಸುವ ಕೃತ್ಯ
ಬಳಿಕ ಸಂಬಂಧಿಕರೆಲ್ಲರಿಗೂ ಪತ್ನಿ ಹೃದಯಾಘಾತದಿಂದ ಮೃತಳಾಗಿದ್ದಾಳೆಂದು ಫೋನ್ ಮಾಡಿದ್ದ. ಅಂತ್ಯಕ್ರಿಯೆಗೆ ಬಂದ ಪೋಷಕರು ಮೃತ ರಾಜೇಶ್ವರಿ ಕೊರಳಲ್ಲಿ ಕಾಣಿಸಿದ್ದ ಗುರುತೊಂದನ್ನು ನೋಡಿ ಅನುಮಾನ ಎಂದು ವ್ಯಕ್ತವಾಗಿದೆ.
ವಿಚಾರಣೆ ಸತ್ಯ ಬಯಲು
ತಕ್ಷಣವೇ ಪೋಷಕರು ಬೈಲಹೊಂಗಲ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದಾಗ ಪ್ರಕರಣ ಕೊಲೆ ಎಂಬುದು ದೃಢಪಟ್ಟಿದೆ. ಕೂಡಲೇ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಫಕೀರಪ್ಪ ಗಿಲಕ್ಕನವರ ಕೊಲೆ ಮಾಡಿರುವುದನ್ನು ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಹಿಂಡಲಗಾ ಜೈಲಿಗೆ ರವಾನೆ
ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಹಿಂಡಲಗಾ ಜೈಲಿಗೆ ರವಾನಿಸಲಾಗಿದೆ. ಇತ್ತ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬೆಳಗಾವಿಯ ಬ್ರಿಮ್ಸ್ ಆಸ್ಪತ್ರೆಗೆ ಕಳುಹಿಸಲಾಗಿದ್ದು, ಪ್ರಾಥಮಿಕ ವರದಿಯಲ್ಲಿ ಉಸಿರುಗಟ್ಟಿಸಿ ಕೊಲೆ ಮಾಡಿರುವುದು ದೃಢವಾಗಿದೆ. ಬಳಿಕ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ.
ಇದನ್ನು ನೋಡಿ : ಚಾಮರಾಜನಗರ| ಮಾದಪ್ಪನ ಭಕ್ತನನ್ನು ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ!




