
MANDYA THEFT : ವಿಳಾಸ ಕೇಳುವ ನೆಪದಲ್ಲಿ ವೃದ್ದೆಯೊಬ್ಬರ ಬಳಿ ಬೆಲೆಯ ಸರ ಕದ್ದು, ಖದೀಮರು ಎಸ್ಕೇಪ್ ಆದ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ತರೀಕೆರೆ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಜಯಲಕ್ಷ್ಮಮ್ಮ ಎಂಬ ವೃದ್ದೆ ಸರ ಕಳೆದುಕೊಂಡಿರುವ ಬಗ್ಗೆ ತಿಳಿದುಬಂದಿದೆ. ಬೈಕ್ನಲ್ಲಿ ಬಂದ ಇಬ್ಬರು ಅಪರಿಚಿತ ದುಷ್ಕರ್ಮಿಗಳು ಸರ ಕದ್ದು ಪರಾರಿಯಾಗಿದ್ದಾ ರೆ. ಇನ್ನು ಈ ಘಟನೆ ಇಂದು ಬೆಳಗಿನ ಜಾವ ಸಂಭವಿಸಿದ್ದು, ಇದರಿಂದ ಗ್ರಾಮದಲ್ಲಿ ಭಯ ಹಾಗೂ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಇನ್ನು ಘಟನೆ ಮಾಹಿತಿ ತಿಳಿದ ಕೂಡಲೇ ಮದ್ದೂರು ಸಿಪಿಐ ಮತ್ತು ಕೊಪ್ಪ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




