ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳಿಗೆ High Court ನಿಂದ ಗ್ರೀನ್ ಸಿಗ್ನಲ್ ಸಿಕ್ಕಿದೆ.

ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಗಳಿಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಬೈಕ್ ಅನ್ನು ಮೋಟಾರು ವಾಹನ ಕಾಯ್ದೆಯಡಿ ಸಾರಿಗೆ ವಾಹನ ಎಂದು ಪರಿಗಣಿಸಲಾಗುವುದಿಲ್ಲ ಎಂಬ ಕಾರಣ ನೀಡಿ, ಬೈಕ್ ಟ್ಯಾಕ್ಸಿಗೆ ಅನುಮತಿ ನೀಡಲು ಸಾಧ್ಯವಿಲ್ಲ ಎಂದು ರಾಜ್ಯ ಸರ್ಕಾರ ವಾದ ಮಂಡಿಸಿತ್ತು. ಆದರೆ ಈ ವಾದವನ್ನು ಪರಿಗಣಿಸಿದ High Court ಇದೀಗ ಬೈಕ್ ಟ್ಯಾಕ್ಸಿ ಸೇವೆಗಳನ್ನು ಮುಂದುವರಿಸಲು ಅವಕಾಶ ನೀಡಿದೆ.
High Court ನಿಂದ ಗ್ರೀನ್ ಸಿಗ್ನಲ್
ಹೈಕೋರ್ಟ್ ಏಕಸದಸ್ಯ ನ್ಯಾಯಪೀಠವು ಕಳೆದ ವರ್ಷ ಏಪ್ರಿಲ್ ತಿಂಗಳಲ್ಲಿ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಗಳನ್ನು ಸ್ಥಗಿತಗೊಳಿಸುವಂತೆ ಆದೇಶ ನೀಡಿತ್ತು. ಈ ಆದೇಶದ ವಿರುದ್ಧ ಒಲಾ, ಊಬರ್ ಸೇರಿದಂತೆ ಹಲವು ಬೈಕ್ ಟ್ಯಾಕ್ಸಿ ಅಗ್ರಿಗೇಟರ್ ಕಂಪನಿಗಳು ಜೂನ್ ತಿಂಗಳಲ್ಲಿ ಮೇಲ್ಮನವಿ ಸಲ್ಲಿಸಿದ್ದವು.
ಇದನ್ನು ಓದಿ : ದಾಂಪತ್ಯ ಜೀವನಕ್ಕೆ ಕಾಲಿಟ್ಟ Ugram Manju

ಬೈಕ್ ಟ್ಯಾಕ್ಸಿ ಸೇವೆಗಳಿಗೆ ಅನುಮತಿ
ಈ ಮೇಲ್ಮನವಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಸಿ.ಎಂ. ಜೋಶಿ ಅವರನ್ನೊಳಗೊಂಡ ವಿಭಾಗೀಯ ನ್ಯಾಯಪೀಠವು ಸುದೀರ್ಘವಾಗಿ ಆಲಿಸಿತು. ವಾದ-ಪ್ರತಿವಾದಗಳ ನಂತರ ಇಂದು ಆದೇಶ ಪ್ರಕಟಿಸಲಾಗಿದ್ದು, ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಗಳಿಗೆ ಅನುಮತಿ ನೀಡಲಾಗಿದೆ.
ಟ್ಯಾಕ್ಸಿ ಸೇವೆ ಆರಂಭ
ಈ ಆದೇಶದೊಂದಿಗೆ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಗಳ ಭವಿಷ್ಯಕ್ಕೆ ಸ್ಪಷ್ಟತೆ ದೊರೆತಿದ್ದು, ಒಲಾ, ಊಬರ್ ಸೇರಿದಂತೆ ಅಗ್ರಿಗೇಟರ್ಗಳು ಮತ್ತೆ ಬೈಕ್ ಟ್ಯಾಕ್ಸಿ ಸೇವೆ ಆರಂಭಿಸುವುದಕ್ಕೆ ಮುಂದಾಗಿವೆ. ಈ ತೀರ್ಪು ನಗರ ಸಂಚಾರ ಸಮಸ್ಯೆ ಹಾಗೂ ಉದ್ಯೋಗಾವಕಾಶಗಳ ದೃಷ್ಟಿಯಿಂದ ಮಹತ್ವ ಪಡೆದುಕೊಂಡಿದೆ.

ಇದನ್ನು ನೋಡಿ : ಸದನದಲ್ಲಿ ರಾಜ್ಯಪಾಲರ ವಿರುದ್ದ ಕೈ ನಾಯಕರ ಗದ್ದಲ- ತುಮಕೂರಿನಲ್ಲಿ ಪರಂ ಫಸ್ಟ್ ರಿಯಾಕ್ಷನ್




