ಲಾರಿ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ Accident ನಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಚಾಮರಾಜನಗರ ಜಿಲ್ಲೆಯ ಹನೂರು ಸಮೀಪ ಆರ್.ಎಸ್. ದೊಡ್ಡಿ ಬಳಿಯ ಅಗ್ನಿಶಾಮಕ ಠಾಣೆ ಸಮೀಪ ಲಾರಿ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಇದನ್ನು ಓದಿ : Bengaluru : ರಾಜ್ಯಪಾಲರ ಕಚೇರಿಗೆ ಬಾಂಬ್ ಬೆದರಿಕೆ
ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ವೇಳೆ Accident
ಮೃತರನ್ನು ಬೆಂಗಳೂರಿನ ಲಗ್ಗೆರೆ ನಿವಾಸಿ ಗಣೇಶ (30) ಎಂದು ಗುರುತಿಸಲಾಗಿದೆ. ಗಣೇಶ ಸ್ನೇಹಿತ ನಾಗರಾಜು ಜೊತೆ ಬೈಕ್ನಲ್ಲಿ ರಾತ್ರಿ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ವೇಳೆ ಎದುರು ದಿಕ್ಕಿನಿಂದ ಬಂದ ಲಾರಿ ಬೈಕ್ಗೆ ಡಿಕ್ಕಿ ಹೊಡೆದಿದೆ.
ಇನ್ನು ಡಿಕ್ಕಿಯ ಪರಿಣಾಮವಾಗಿ ಗಣೇಶ ಸ್ಥಳದಲ್ಲೇ ಮೃತಪಟ್ಟಿದ್ದು, ನಾಗರಾಜು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತದೇಹ ಶವಾಗಾರಕ್ಕೆ ರವಾನೆ
ಗಾಯಾಳು ನಾಗರಾಜು ಅವರನ್ನು ಕೊಳ್ಳೇಗಾಲ ಸರ್ಕಾರಿ ಉಪವಿಭಾಗೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತದೇಹವನ್ನು ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ರವಾನಿಸಲಾಗಿದೆ.
ಇದನ್ನು ನೋಡಿ : ಪುನೀತ್ ಕೆರೆಹಳ್ಳಿ ಮತ್ತೆ ಅರೆಸ್ಟ್.. ಆಗಿದ್ದೇನು..?




