KKRTC ಬಸ್ ಹರಿದು ನಾಲ್ಕು ವರ್ಷದ ಕಂದಮ್ಮ ಸಾವನ್ನಪ್ಪಿದ ಘಟನೆ ರಾಯಚೂರಿನಲ್ಲಿ ನಡೆದಿದೆ.

ರಾಯಚೂರು ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಮದರಕಲ್ ಗ್ರಾಮದಲ್ಲಿ ಭೀಕರ ಅಪಘಾತ ಸಂಭವಿಸಿದೆ. KKRTC ಬಸ್ ಹರಿದು ನಾಲ್ಕು ವರ್ಷದ ಕಂದಮ್ಮ ಸಾವನ್ನಪ್ಪಿದ ಘಟನೆ ನಡೆದಿದೆ.
ಬಸ್ ಹರಿದು 4 ವರ್ಷದ ಕಂದಮ್ಮ ಸಾವು
ಗಬ್ಬೂರು ಗ್ರಾಮದ 4 ವರ್ಷದ ವಿದ್ಯಾಶ್ರೀ ಮೃತ ಕಂದಮ್ಮ. ಸಾರಿಗೆ ಬಸ್ ಗೂಗಲ್ನಿಂದ ದೇವದುರ್ಗ ಕಡೆಗೆ ಹೊರಟಿತ್ತು. ಈ ವೇಳೆ ಅಚಾನಕ್ಕಾಗಿ ಅಡ್ಡ ಬಂದ ಕಾರಣ ಮಗುವಿನ ಮೇಲೆ ಬಸ್ ಹರಿದು ಈ ದುರ್ಘಟನೆ ಸಂಭವಿಸಿದೆ.
ಇದನ್ನು ಓದಿ : ಅತ್ತೆ ಮಗನನ್ನೇ ಪ್ರೀತಿಸಿ ಮದುವೆಯಾದ ನವವಿವಾಹಿತೆ ಎರಡೇ ತಿಂಗಳಲ್ಲಿ ನೇಣಿಗೆ ಶರಣು!
ಬಸ್ಸಿನ ಚಕ್ರದಡಿಗೆ ಸಿಲುಕಿದ ಕಂದಮ್ಮ
ಬಸ್ ಬುರವುದನ್ನು ನೋಡದೇ ಮಗು ರಸ್ತೆ ದಾಟಲು ಹೋದಾಗ ಅಪಘಾತ ಸಂಭವಿಸಿದೆ. ಧಿಡೀರ್ ಆಗಿ ಅಡ್ಡ ಬಂದ ಕಾರಣ ಬಸ್ಸಿನ ಚಕ್ರದಡಿಗೆ ಮಗು ಸಿಲುಕಿ ದಾರುಣವಾಗಿ ಸ್ಥಳದಲ್ಲೇ ಸಾವನ್ನಪ್ಪಿದೆ.
ತನಿಖೆ ಪ್ರಾರಂಭ
ಇನ್ನು ಈ ಘಟನೆ ಬಗ್ಗೆ ಗಬ್ಬೂರು ಪೊಲೀಸ್ ಠಾಣೆಯಲ್ಲಿಪ್ರಕರಣ ದಾಖಲಾಗಿದೆ ಮತ್ತು ತನಿಖೆ ನಡೆಯುತ್ತಿದೆ.
ಇದನ್ನು ನೋಡಿ : ಚಿಕ್ಕ ಮಕ್ಕಳೆಂದೂ ಲೆಕ್ಕಿಸದೆ ಬಾಸುಂಡೆ ಬರುವಂತೆ ಥಳಿಸಿದ ದುರುಳರು!




