ಕೇರಳದ ಪ್ರಸಿದ್ಧ ಶಬರಿಮಲೆ ಯಾತ್ರೆಗೆ ತೆರಳಿದ್ದ Kolara ಜಿಲ್ಲೆಯ ವ್ಯಕ್ತಿಯೊಬ್ಬರು ತಮಿಳುನಾಡಿನಲ್ಲಿ ನಾಪತ್ತೆಯಾಗಿರುವ ಘಟನೆ ಆತಂಕ ಮೂಡಿಸಿದೆ.

Kolara ಜಿಲ್ಲೆಯ ಬಂಗಾರಪೇಟೆ ತಾಲೂಕಿನ ದೇವಗಾನಹಳ್ಳಿ ಗ್ರಾಮದ ರವಿ (40) ನಾಪತ್ತೆಯಾಗಿರುವ ವ್ಯಕ್ತಿ. ಮಂಗಳವಾರ ಶಬರಿಮಲೆ ಯಾತ್ರೆಯ ಭಾಗವಾಗಿ ತಮಿಳುನಾಡಿನ ತಿರುಚಂದೂರಿಗೆ ತೆರಳಿದ್ದ ವೇಳೆ ಅವರು ಕಾಣೆಯಾಗಿದ್ದಾರೆ.
ರವಿಯ ನಾಪತ್ತೆಯಾಗಿ ನಾಲ್ಕು ದಿನಗಳಾದರೂ ಯಾವುದೇ ಸುಳಿವು ಲಭ್ಯವಾಗಿಲ್ಲ. ಇದರಿಂದ ಕುಟುಂಬಸ್ಥರು ತೀವ್ರ ಆತಂಕದಲ್ಲಿದ್ದಾರೆ. ಸಂಬಂಧಿಕರು ಹಾಗೂ ಸ್ನೇಹಿತರು ಸ್ವಯಂಪ್ರೇರಿತವಾಗಿ ಹುಡುಕಾಟ ನಡೆಸುತ್ತಿದ್ದಾರೆ.
ಇದನ್ನು ಓದಿ : ಲಾರಿ-ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಸವಾರ ಸ್ಥಳದಲ್ಲಿ ಮೃತ್ಯು
ಪೊಲೀಸ್ ಠಾಣೆಯಲ್ಲಿ ದೂರು ದಾಖಲು
ಈ ಕುರಿತು ತಿರುಚಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಹುಡುಕಾಟ ಕಾರ್ಯಾಚರಣೆ ಆರಂಭಿಸಿದ್ದಾರೆ. ಸಿಸಿಟಿವಿ ದೃಶ್ಯಗಳು ಹಾಗೂ ಸ್ಥಳೀಯ ಮಾಹಿತಿಗಳ ಆಧಾರದ ಮೇಲೆ ತನಿಖೆ ಮುಂದುವರಿದಿದೆ.
ಕುಟುಂಬಸ್ಥರಲ್ಲಿ ಆತಂಕ
ಶಬರಿಮಲೆ ಯಾತ್ರೆಗೆ ತೆರಳಿದ್ದ ವ್ಯಕ್ತಿ ಹೀಗೆ ನಾಪತ್ತೆಯಾಗಿರುವುದು ಕುಟುಂಬವನ್ನು ಕಂಗೆಡಿಸಿದೆ. ರವಿಯ ಪತ್ತೆಗೆ ತ್ವರಿತ ಕ್ರಮ ಕೈಗೊಳ್ಳುವಂತೆ ಕುಟುಂಬಸ್ಥರು ಮನವಿ ಮಾಡಿದ್ದಾರೆ.
ಇದನ್ನು ನೋಡಿ : ಪ್ರಜ್ವಲ್ ರೇವಣ್ಣ ವಿರುದ್ಧ ಅಪರಾಧ ಸಾಬೀತು; ತನಿಖಾ ತಂಡಕ್ಕೆ 25 ಲಕ್ಷ ರೂ. ಬಹುಮಾನ ಘೋಷಣೆ




