Chamarajanagar ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಚಿರತೆ ದಾಳಿ ಪ್ರಕರಣದ ಬಳಿಕ ಸಂಜೆ 6ರಿಂದ ಬೆಳಗ್ಗೆ 6ರವರೆಗೆ ಪಾದಯಾತ್ರೆಗೆ ಜಿಲ್ಲಾಡಳಿತ ನಿಷೇಧ ಹೇರಿದೆ.

Chamarajanagar : ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಹೊರಟಿದ್ದ ಭಕ್ತನ ಮೇಲೆ ಚಿರತೆ ದಾಳಿ ಮಾಡಿ ಕೊಂದಿರುವ ಘಟನೆ ಬಳಿಕ, ಅರಣ್ಯ ಇಲಾಖೆ ಹಾಗೂ ಜಿಲ್ಲಾಡಳಿತ ಕಟ್ಟುನಿಟ್ಟಿನ ಮುಂಜಾಗ್ರತಾ ಕ್ರಮ ಕೈಗೊಂಡಿದೆ. ಈ ಹಿನ್ನೆಲೆ, ಇನ್ಮುಂದೆ ಮಲೆ ಮಹದೇಶ್ವರ ಬೆಟ್ಟಕ್ಕೆ ರಾತ್ರಿ ವೇಳೆ ಪಾದಯಾತ್ರೆಗೆ ಸಂಪೂರ್ಣ ನಿಷೇಧ ಹೇರಲಾಗಿದೆ.
ಸಂಜೆ 6 ರಿಂದ ಬೆಳಗ್ಗೆ 6ರವರೆಗೆ ಪಾದಯಾತ್ರೆಗೆ ನಿರ್ಬಂಧ
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಚಿರತೆಗೆ ಭಕ್ತ ಪ್ರವೀಣ್ ಬಲಿಯಾದ ಪ್ರಕರಣದ ಹಿನ್ನೆಲೆಯಲ್ಲಿ, ಭಕ್ತರ ಸುರಕ್ಷತೆಗಾಗಿ ಹೊಸ ನಿಯಮ ಜಾರಿಗೆ ತರಲಾಗಿದೆ.

ಇದನ್ನು ಓದಿ : Yadagiri : ಶಿಕ್ಷಕರು ಬೈದಿದ್ದಕ್ಕೆ ಬೇಸತ್ತು ವಿದ್ಯಾರ್ಥಿ ದುರಂತ ಅಂತ್ಯ?
ಅದನಂತೆ, ಸಂಜೆ 6 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಪಾದಯಾತ್ರೆ ಸಂಪೂರ್ಣ ನಿಷೇಧ ತಾಳುಬೆಟ್ಟದಿಂದ ಮಹದೇಶ್ವರ ಬೆಟ್ಟಕ್ಕೆ ರಾತ್ರಿ ಪಾದಯಾತ್ರೆಗೆ ನಿರ್ಬಂಧ
ಈ ಮಹತ್ವದ ನಿರ್ಧಾರವನ್ನು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕೈಗೊಳ್ಳಲಾಗಿದೆ. ಚಿರತೆ ದಾಳಿಯಂತಹ ಘಟನೆಗಳು ಮರುಕಳಿಸದಂತೆ, ಅರಣ್ಯ ಇಲಾಖೆ ಹಾಗೂ ಜಿಲ್ಲಾಡಳಿತ ಒಟ್ಟಾಗಿ ಕ್ರಮ ವಹಿಸಿದೆ.

ಭಕ್ತರ ಸುರಕ್ಷತೆ ಮೊದಲ ಆದ್ಯತೆ
ರಾತ್ರಿ ವೇಳೆ ಅರಣ್ಯ ಪ್ರದೇಶದಲ್ಲಿ ಚಿರತೆ ಚಟುವಟಿಕೆ ಹೆಚ್ಚಿರುವ ಹಿನ್ನೆಲೆಯಲ್ಲಿ, ಭಕ್ತರ ಜೀವ ರಕ್ಷಣೆಗಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮುಂದಿನ ಸೂಚನೆ ಹೊರಬರುವವರೆಗೆ ಈ ನಿಯಮ ಜಾರಿಯಲ್ಲಿ ಇರಲಿದೆ.
ಇದನ್ನು ನೋಡಿ : ಮನರೇಗಾ ಯೋಜನೆ ಬದಲಾವಣೆ ವಿರೋಧಿಸಿ ತಮಿಳುನಾಡು ಅಸೆಂಬ್ಲಿಯಲ್ಲಿ ನಿರ್ಣಯ ಅಂಗೀಕಾರ




