Shidlaghatta : ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ, ಧಮ್ಕಿ ಹಾಗೂ ಅಸಭ್ಯ ಭಾಷೆಯಲ್ಲಿ ನಿಂದನೆ ಮಾಡಿದ ಆರೋಪದ ಹಿನ್ನೆಲೆ, ಕಾಂಗ್ರೆಸ್ ನಾಯಕ ರಾಜೀವ್ ಗೌಡ ಅವರನ್ನು ಪಕ್ಷದಿಂದ ಅಮಾನತುಗೊಳಿಸಲಾಗಿದೆ.

Shidlaghatta : ಈ ಕುರಿತು ಕೆಪಿಸಿಸಿ (KPCC) ಅಧಿಕೃತ ಆದೇಶ ಹೊರಡಿಸಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರಸಭೆಯಲ್ಲಿ ಬ್ಯಾನರ್ ತೆರವು ವಿಚಾರವಾಗಿ, ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವರು ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಧಮ್ಕಿ, ಬೆದರಿಕೆ ಹಾಗೂ ಅಸಭ್ಯ ಪದಗಳಿಂದ ನಿಂದನೆ ಮಾಡಿದ್ದ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.
ಈ ಆಡಿಯೋ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದು, ಪ್ರಕರಣ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ದಾರಿ ಮಾಡಿಕೊಟ್ಟಿತ್ತು.
ಘಟನೆ ಗಂಭೀರ ಸ್ವರೂಪ ಪಡೆದುಕೊಂಡ ಹಿನ್ನೆಲೆಯಲ್ಲಿ, ಕೆಪಿಸಿಸಿ ರಾಜೀವ್ ಗೌಡ ಅವರಿಗೆ ಶಿಸ್ತು ನೋಟಿಸ್ ಜಾರಿ ಮಾಡಿತ್ತು.
ಆದರೆ, ನೋಟಿಸ್ಗೆ ಯಾವುದೇ ಉತ್ತರ ನೀಡದೆ ರಾಜೀವ್ ಗೌಡ ನಾಪತ್ತೆಯಾಗಿದ್ದರು ಎನ್ನಲಾಗಿದೆ.
ಇದನ್ನು ಓದಿ : Yadagiri : ಶಿಕ್ಷಕರು ಬೈದಿದ್ದಕ್ಕೆ ಬೇಸತ್ತು ವಿದ್ಯಾರ್ಥಿ ದುರಂತ ಅಂತ್ಯ?
ಪಕ್ಷದಿಂದ ಅಮಾನತು: ಕಾಂಗ್ರೆಸ್ ಕಠಿಣ ನಿರ್ಧಾರ
ನೋಟಿಸ್ಗೆ ಸ್ಪಂದಿಸದ ಹಿನ್ನೆಲೆ ಮತ್ತು ಪಕ್ಷದ ಶಿಸ್ತು ಉಲ್ಲಂಘನೆಯ ಕಾರಣದಿಂದ,
ಕೆಪಿಸಿಸಿ ರಾಜೀವ್ ಗೌಡ ಅವರನ್ನು ಕಾಂಗ್ರೆಸ್ ಪಕ್ಷದಿಂದ ಅಮಾನತುಗೊಳಿಸುವ ತೀರ್ಮಾನ ಕೈಗೊಂಡಿದೆ.
ಪಕ್ಷದ ಗೌರವ, ಆಡಳಿತಾಧಿಕಾರಿಗಳ ಸುರಕ್ಷತೆ ಹಾಗೂ ಶಿಸ್ತು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಲಾಗಿದೆ.
ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ
ಈ ಅಮಾನತು ಆದೇಶದಿಂದಾಗಿ ಚಿಕ್ಕಬಳ್ಳಾಪುರ ಜಿಲ್ಲೆ ಹಾಗೂ ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ ನಡೆಯುತ್ತಿದ್ದು,
ಪೌರಾಯುಕ್ತೆ ವಿರುದ್ಧದ ನಿಂದನೆ ಪ್ರಕರಣಕ್ಕೆ ಇದು ಮಹತ್ವದ ತಿರುವು ಎನ್ನಲಾಗುತ್ತಿದೆ.
ಇದನ್ನು ನೋಡಿ : ಮನರೇಗಾ ಯೋಜನೆ ಬದಲಾವಣೆ ವಿರೋಧಿಸಿ ತಮಿಳುನಾಡು ಅಸೆಂಬ್ಲಿಯಲ್ಲಿ ನಿರ್ಣಯ ಅಂಗೀಕಾರ




