Udupi ಯ ಕಾರ್ಕಳ ತಾಲ್ಲೂಕಿನ ಮಿಯಾರು ಬಳಿ ಬಸ್ ಮತ್ತು ಕ್ರೂಸರ್ ಮುಖಾಮುಖಿ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದೆ.

Udupi : ಬೆಚ್ಚಿಬೀಳಿಸುವಂತಹ ಭೀಕರ ರಸ್ತೆ ಅಪಘಾತ ಉಡುಪಿ ಜಿಲ್ಲೆಯಲ್ಲಿ ಸಂಭವಿಸಿದೆ. ಬಸ್ ಹಾಗೂ ಕ್ರೂಸರ್ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಉಡುಪಿ ಜಿಲ್ಲೆಯ ಕಾರ್ಕಳ ತಾಲ್ಲೂಕಿನ ಮಿಯಾರು ಗ್ರಾಮದ ಸಮೀಪ ಈ ಅಪಘಾತ ಸಂಭವಿಸಿದೆ. ವೇಗವಾಗಿ ಬಂದ ಬಸ್ ಮತ್ತು ಕ್ರೂಸರ್ ಮುಖಾಮುಖಿಯಾಗಿ ಡಿಕ್ಕಿ ಹೊಡೆದ ಪರಿಣಾಮ ಅಪಘಾತದ ತೀವ್ರತೆ ಹೆಚ್ಚಾಗಿದೆ.
ಇದನ್ನು ಓದಿ : Yadagiri : ಶಿಕ್ಷಕರು ಬೈದಿದ್ದಕ್ಕೆ ಬೇಸತ್ತು ವಿದ್ಯಾರ್ಥಿ ದುರಂತ ಅಂತ್ಯ?

ಮೂವರು ದುರ್ಮರಣ, ಹಲವರಿಗೆ ಗಂಭೀರ ಗಾಯ
ಈ ಭೀಕರ ಅಪಘಾತದಲ್ಲಿ ಮೂರು ಮಂದಿ ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಜೊತೆಗೆ, 8 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಹೆಚ್ಚಿನ ಮಾಹಿತಿ ನಿರೀಕ್ಷೆ
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಪಘಾತದ ನಿಖರ ಕಾರಣ ಕುರಿತು ತನಿಖೆ ಮುಂದುವರಿದಿದೆ. ಮೃತರು ಹಾಗೂ ಗಾಯಾಳುಗಳ ವಿವರಗಳು ಇನ್ನಷ್ಟೇ ಲಭ್ಯವಾಗಬೇಕಿದೆ.
ಇದನ್ನು ನೋಡಿ : ಮನರೇಗಾ ಯೋಜನೆ ಬದಲಾವಣೆ ವಿರೋಧಿಸಿ ತಮಿಳುನಾಡು ಅಸೆಂಬ್ಲಿಯಲ್ಲಿ ನಿರ್ಣಯ ಅಂಗೀಕಾರ




