Janardhan Reddy ಮಾಡೆಲ್ ಹೌಸ್ಗೆ ಬೆಂಕಿ ಪ್ರಕರಣಕ್ಕೆ ಸ್ಫೋಟಕ ತಿರುವು: ರೀಲ್ಸ್ ಮಾಡಲು ಹೋಗಿ ಬೆಂಕಿ ಹಚ್ಚಿದ್ರಾ ಅಪ್ರಾಪ್ತರು?

ಶಾಸಕ ಜನಾರ್ದನ ರೆಡ್ಡಿ ಅವರಿಗೆ ಸೇರಿದ ಜಿ ಸ್ಕೈರ್ ಲೇಔಟ್ನಲ್ಲಿರುವ ಮಾಡೆಲ್ ಹೌಸ್ನಲ್ಲಿ ಸಂಭವಿಸಿದ ಅಗ್ನಿ ಅವಘಡ ಸಂಬಂಧ ಪೊಲೀಸರು ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕರೂ ಸೇರಿದಂತೆ ಒಟ್ಟು 8 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.

ಇದನ್ನು ಓದಿ : ಸ್ನೇಹಿತನಿಗೆ ಬೈದಿದ್ದನ್ನು ಪ್ರಶ್ನಿಸಿದ್ದಕ್ಕೆ ಯುವಕನ ಬರ್ಬರ Murder
ಅವಘಡದ ಪ್ರಕರಣವನ್ನು ನಾವು ಬೇಧಿಸಿದ್ದೇವೆ
ಈ ಕುರಿತು ಶನಿವಾರ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಬಳ್ಳಾರಿ ವಲಯ ಐಜಿಪಿ ಡಾ. ಪಿ.ಎಸ್ ಹರ್ಷ ”ಅಗ್ನಿ ಅವಘಡದ ಪ್ರಕರಣವನ್ನು ನಾವು ಬೇಧಿಸಿದ್ದೇವೆ. ಒಟ್ಟು 8 ಮಂದಿಯನ್ನು ವಶಕ್ಕೆ ಪಡೆದಿದ್ದೇವೆ. ಇದರಲ್ಲಿ ಕೆಲವರು ಅಪ್ರಾಪ್ತರಿದ್ದಾರೆ. ಅವರ ವಯಸ್ಸಿಗೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸುತ್ತಿದ್ದೇವೆ. ವಿಚಾರಣೆ ಪೂರ್ಣಗೊಂಡ ಬಳಿಕ ಇತರ ಮಾಹಿತಿಯನ್ನು ತಿಳಿಸಲಾಗುವುದು” ಎಂದಿದ್ದಾರೆ.

ಪ್ರಕರಣ ದಾಖಲು
ಗಂಗಾವತಿ ಶಾಸಕ Janardhan Reddy ಸೈಟ್ ಎಂಜಿನಿಯರ್ ರಿಜ್ವಾನ್ ನೀಡಿದ ದೂರಿನ ಮೇರೆಗೆ ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 8 ರಿಂದ 10 ಜನ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ಮನೆಯಲ್ಲಿದ್ದ 1 ಕೋಟಿ 25 ಲಕ್ಷ ಮೌಲ್ಯದ ಪರಿಕರಗಳು ನಷ್ಟವಾಗಿವೆ ಎನ್ನಲಾಗಿದೆ.
ಇದನ್ನು ನೋಡಿ : PAVAGADA | ಅಜ್ಜಿಯ ಚಿನ್ನದ ಸರವನ್ನ ಕದಿಯಲು ಹೋದ ಮೊಮ್ಮಗ




