Karwar : ವೈರಲ್ ವೀಡಿಯೋಗೆ ಬಲಿಯಾದ ವೈದ್ಯ; ರಾಜೀವ್ ಪಿಕಳೆ ಕೇಸ್ನಲ್ಲಿ ಇಬ್ಬರು ಅಂದರ್.

Karwar : ಸಾಮಾಜಿಕ, ವೈದ್ಯಕೀಯ ರಂಗದಲ್ಲಿ ಹೆಸರು ಮಾಡಿದ ಕುಟುಂಬಕ್ಕೆ ಸೇರಿದ ರಾಜೀವ್ ಪಿಕಳೆ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ತನ್ನ ತೇಜೋವಧೆಯಾದ ಕಾರಣ ಪಿಕಳೆ, ಡಬಲ್ ಬ್ಯಾರಲ್ ಗನ್ನಿಂದ ಶೂಟ್ ಮಾಡಿಕೊಂಡು ತಮ್ಮ ನಿವಾಸದಲ್ಲಿಯೇ ಸಾವಿಗೆ ಶರಣಾಗಿದ್ದರು. ಇದೀಗ ಜಾಲತಾಣದಲ್ಲಿ ವಿಡಿಯೋ ವೈರಲ್ ಮಾಡಿದ್ದವರು ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.
ಡಬಲ್ ಬ್ಯಾರಲ್ ಗನ್ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹಟ್ಟಿಕೇರಿಯಲ್ಲಿ ವಾಸವಾಗಿದ್ದ ರಾಜೀವ್ ಪಿಕಳೆ ಅವರು ತಮ್ಮ ನಿವಾಸದಲ್ಲಿಯೇ ಡಬಲ್ ಬ್ಯಾರಲ್ ಗನ್ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಆರ್ಥಿಕವಾಗಿ ಸುಸ್ಥಿತಿಯಲ್ಲಿದ್ದ ಪಿಕಳೆ ಒಂಟಿಯಾಗಿ ವಾಸಿಸುತ್ತಿದ್ದರು. ಪಿಕಳೆ ಕುಟುಂಬವು ಕಾರವಾರದಲ್ಲಿ ಕಳೆದ ಎರಡು ತಲೆಮಾರಿನಿಂದ ವೈದ್ಯಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿದೆ.
ಇದನ್ನು ಓದಿ : ರೈಲ್ವೆ ಸ್ಟೇಷನ್ ಜಪ್ತಿ – ಪೀಠೋಪಕರಣವನ್ನ ಕೊಂಡೊಯ್ದ ಸಂತ್ರಸ್ತರು..!

ಅವಧಿ ಮೀರಿದ ಮಾತ್ರೆ ನೀಡಿದ್ದ ವೈದ್ಯ
ಕೆಲ ದಿನಗಳ ಹಿಂದೆ ರಾಜೀವ್ ಪಿಕಳೆ ಅವರು ರೋಗಿಗೆ ಅವಧಿ ಮೀರಿದ ಔಷಧ ನೀಡಿರುವುದಾಗಿ ಹೇಳಲಾದ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ವಿಡಿಯೋದಿಂದ ಮಾನಸಿಕವಾಗಿ ನೊಂದಿದ್ದ ಪಿಕಳೆ, ಸಾರ್ವಜನಿಕವಾಗಿ ಕ್ಷಮೆಯನ್ನೂ ಕೋರಿದ್ದರು.
ಮನನೊಂದು ಆತ್ಮಹತ್ಯೆ
ಆದರೆ ವಿಡಿಯೋ ಭಾರೀ ವೈರಲ್ ಆದ ಬೆನ್ನಲ್ಲೇ ಮನನೊಂದ ಪಿಕಳೆ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಭಾಷ್, ಹರಿಶ್ಚಂದ್ರ ಎನ್ನುವವರು ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದು, ಜಾಲತಾಣದಲ್ಲಿ ವೀಡಿಯೋ ವೈರಲ್ ಮಾಡಿರುವ ಇವರನ್ನು ಅಂಕೋಲಾ ಪೊಲೀಸರು ಬಂಧಿಸಿದ್ದಾರೆ.

ಇದನ್ನು ನೋಡಿ : ಸರ್ಕಾರಿ ಶಾಲೆಯ ಕೊಠಡಿಯನ್ನೇ ಬಾಡಿಗೆ ಕೊಟ್ರಂತೆ – ಬೇಲೂರು ಶಾಸಕರ ಆಪ್ತರ ವಿರುದ್ಧ ಆರೋಪ




