Duniya Vijay ನಟನೆಯ ಲ್ಯಾಂಡ್ ಲಾರ್ಡ್ ಸಿನಿಮಾ ರಾಜ್ಯಾದ್ಯಂತ ಬಿಡುಗಡೆಯಾಗಿದೆ.

ನಟ ದುನಿಯಾ ವಿಜಯ್ ನಾಯಕನಾಗಿ ಅಭಿನಯಿಸಿರುವ “ಲ್ಯಾಂಡ್ ಲಾರ್ಡ್” ಸಿನಿಮಾ ರಾಜ್ಯಾದ್ಯಂತ ಬಿಡುಗಡೆಯಾಗಿ ಯಶಸ್ವಿ ಪ್ರದರ್ಶನ ಕಾಣುತ್ತಿದ್ದು, ಚಿತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಭಾಶಯ ಕೋರಿದ್ದಾರೆ.
ಲ್ಯಾಂಡ್ ಲಾರ್ಡ್ ಸಿನಿಮಾಗೆ `CM ಸ್ಪೆಷಲ್ ವಿಶ್
ಲ್ಯಾಂಡ್ ಲಾರ್ಡ್ ಚಿತ್ರತಂಡದವರು ಇಂದು ಮುಖ್ಯಮಂತ್ರಿಗಳನ್ನು ಭೇಟಿಯಾಗಿ, ತಮ್ಮ ಸಿನಿಮಾ ವೀಕ್ಷಣೆಗೆ ಪ್ರೀತಿಯಿಂದ ಆಹ್ವಾನಿಸಿದರು. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ (ಟ್ವಿಟ್ಟರ್)ನಲ್ಲಿ ಪೋಸ್ಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಚಿತ್ರದ ಸಾಮಾಜಿಕ ಆಶಯವನ್ನು ಶ್ಲಾಘಿಸಿದ್ದಾರೆ.
ಇದನ್ನು ಓದಿ : ವೈರಲ್ ವೀಡಿಯೋಗೆ ಬಲಿಯಾದ ವೈದ್ಯ – ಇಬ್ಬರು ಅಂದರ್

ಬೆಳಕು ಚೆಲ್ಲುವ ದಿಟ್ಟ ಪ್ರಯತ್ನ
ಚಿತ್ರದ ಮೂಲಕ ಸಮಾಜದಲ್ಲಿನ ಜಾತಿ ಅಸಮಾನತೆ ಹಾಗೂ ಸಾಂವಿಧಾನಿಕ ಮೌಲ್ಯಗಳ ಕುರಿತು ಬೆಳಕು ಚೆಲ್ಲುವ ದಿಟ್ಟ ಪ್ರಯತ್ನ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ. ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಕಳಕಳಿಯ ಕಥಾಹಂದರ ಹೊಂದಿರುವ ಸಿನಿಮಾಗಳು ಅಪರೂಪವಾಗುತ್ತಿರುವ ಸಂದರ್ಭದಲ್ಲಿ, ಲ್ಯಾಂಡ್ ಲಾರ್ಡ್ ಚಿತ್ರ ಒಂದು ಮಹತ್ವದ ಪ್ರಯತ್ನವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಸಿನಿಮಾ ಶತದಿನೋತ್ಸವವನ್ನು ಪೂರೈಸಲಿ
ಇಡೀ ಚಿತ್ರತಂಡಕ್ಕೆ ಅಭಿನಂದನೆ ಸಲ್ಲಿಸಿದ ಸಿಎಂ, Duniya Vijay ಅಭಿನಯದ ಲ್ಯಾಂಡ್ ಲಾರ್ಡ್ ಸಿನಿಮಾ ಶತದಿನೋತ್ಸ ವವನ್ನು ಪೂರೈಸಲಿ, ಇಂತಹ ಇನ್ನಷ್ಟು ಸಾಮಾಜಿಕ ಜವಾಬ್ದಾರಿಯ ಚಿತ್ರಗಳು ಮೂಡಿಬರಲು ಈ ಸಿನಿಮಾ ಸ್ಪೂರ್ತಿಯಾಗಲಿ ಎಂದು ಹಾರೈಸಿದ್ದಾರೆ.

ಇದನ್ನು ನೋಡಿ : India Test Squad: ಭಾರತ ಟೆಸ್ಟ್ ತಂಡ ಪ್ರಕಟ




