ತುಮಕೂರು ಜಿಲ್ಲೆಯ ಕುಣಿಗಲ್ನಲ್ಲಿ ಚಲಿಸುತ್ತಿದ್ದ KSRTC ಬಸ್ಸಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕೌಟುಂಬಿಕ ಕಲಹವೇ ಆತ್ಮಹತ್ಯೆಗೆ ಕಾರಣವೆಂದು ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.

ಚಲಿಸುತ್ತಿದ್ದ KSRTC ಬಸ್ಸಿಗೆ ತಲೆಕೊಟ್ಟು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ. ಈ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ಪಟ್ಟಣದ ಅಗ್ರಹಾರ ಪ್ರದೇಶದ ಬಳಿ ನಡೆದಿದೆ.
ಮಧ್ಯರಾತ್ರಿ ನಡೆದ ಆತ್ಮಹತ್ಯೆ ಘಟನೆ
ಪೊಲೀಸರ ಮಾಹಿತಿಯ ಪ್ರಕಾರ, ನಿನ್ನೆ ಶುಕ್ರವಾರ ರಾತ್ರಿ ಸುಮಾರು 12.40ರ ವೇಳೆಗೆ ಈ ದುರ್ಘಟನೆ ನಡೆದಿದೆ. ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಎದುರಿಗೆ ಯುವಕ ಏಕಾಏಕಿ ನುಗ್ಗಿದ್ದು, ಬಸ್ ಚಕ್ರಕ್ಕೆ ತಲೆಕೊಟ್ಟಿದ್ದಾನೆ.
ಫಲವಾಗಿ, ಬಸ್ ಚಕ್ರ ತಲೆಯ ಮೇಲೆ ಹರಿದ ಪರಿಣಾಮ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಇದನ್ನು ಓದಿ : Honnavar ಸೂಳೆಮುರ್ಕಿಯಲ್ಲಿ ನೆಡೆದಿದೆ ಡಬಲ್ ಮರ್ಡರ್..!!
ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಕುಣಿಗಲ್ ಪಟ್ಟಣದ ನಿವಾಸಿ ತಿಮ್ಮೇಗೌಡ ಎಂದು ಗುರುತಿಸಲಾಗಿದೆ.
ಪ್ರಾಥಮಿಕ ತನಿಖೆಯ ಪ್ರಕಾರ, ಕೌಟುಂಬಿಕ ಕಲಹಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.

ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ
ಈ ಭಯಾನಕ ಘಟನೆ ಸಮೀಪದ ಅಂಗಡಿಯೊಂದರಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳು ಇದೀಗ ಪೊಲೀಸರ ವಶದಲ್ಲಿವೆ.
ಈ ಸಂಬಂಧ ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪೊಲೀಸರು ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಇದನ್ನು ನೋಡಿ : KUNIGAL | ರೈಲ್ವೆ ಸ್ಟೇಷನ್ ಜಫ್ತಿ ಮಾಡಿದ್ದಾರೂ ಯಾಕೆ..? – ಕಚೇರಿಯಲ್ಲಿದ್ದ ವಸ್ತುಗಳನ್ನು ಕೂಡ ಕೊಂಡೊಯ್ದರು




