Bengaluru : ಪಿಯುಸಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪೊಲೀಸಪ್ಪ ಅರೆಸ್ಟ್.

ಇತ್ತೀಚೆಗೆ Bengaluru ಪೊಲೀಸರು ಸಾಲು ಸಾಲು ಅಪರಾಧ ಪ್ರಕರಣಗಳಲ್ಲಿ ಸಿಕ್ಕಿಹಾಕಿಕೊಳ್ಳುತ್ತಿದ್ದು, ಅವರ ಮೇಲಿದ್ದ ನಂಬಿಕೆ ಕ್ಷೀಣಿಸುವಂತೆ ಮಾಡಿದೆ.
ಪೊಲೀಸಪ್ಪ ಅರೆಸ್ಟ್ – Bengaluru
ಪೊಲೀಸ್ ಕಾನ್ಸ್ಟೇಬಲ್ ಒಬ್ಬರು ಕಾಲೇಜು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಬೆಳಕಿಗೆ ಬಂದಿದೆ. ಫ್ರೀಡಂ ಪಾರ್ಕ್ನಲ್ಲಿ ಕರ್ತವ್ಯದಲ್ಲಿದ್ದ ಆರ್.ಟಿ.ನಗರ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಯಮುನಾ ನಾಯಕ್ ವಿರುದ್ಧ ಗಂಭೀರ ಆರೋಪ ಕೇಳಿಬಂದಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಉಪ್ಪಾರಪೇಟೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಇದನ್ನು ಓದಿ : ಖಾಸಗಿ ಹೋಟೆಲ್ನಲ್ಲಿ ಮಲ್ಲಿಕಾರ್ಜುನ ಖರ್ಗೆ–ಸಿದ್ದರಾಮಯ್ಯ ಭೇಟಿ

ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು
ಫ್ರೀಡಂ ಪಾರ್ಕ್ನಲ್ಲಿ ಕರ್ತವ್ಯಕ್ಕೆ ನಿಯೋಜನೆಯಾಗಿದ್ದ ಸಂದರ್ಭದಲ್ಲಿ ಯಮುನಾ ನಾಯಕ್, ಪ್ರಥಮ ಪಿಯುಸಿ ಓದುತ್ತಿದ್ದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ವಿದ್ಯಾರ್ಥಿನಿ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ದೂರಿನ ಆಧಾರದಲ್ಲಿ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿ ಕೊಂಡಿದ್ದಾರೆ. ಪ್ರಕರಣದ ಗಂಭೀರತೆಯನ್ನು ಪರಿಗಣಿಸಿದ ಉಪ್ಪಾರಪೇಟೆ ಪೊಲೀಸರು, ತಕ್ಷಣವೇ ಕ್ರಮ ಕೈಗೊಂಡು ಆರೋಪಿ ಕಾನ್ಸ್ಟೇಬಲ್ ಯಮುನಾ ನಾಯಕ್ ಅವರನ್ನು ಬಂಧಿಸಿದ್ದಾರೆ.
ಪೊಲೀಸರೇ ಕೋರ್ಟ್ ಕಟಕಟೆಯಲ್ಲಿ
ಕರ್ನಾಟಕದ ಪೊಲೀಸರು ತಮ್ಮ ದಕ್ಷತೆ ಮತ್ತು ವೃತ್ತಿಪರತೆಗೆ ದೇಶದಲ್ಲೇ ಹೆಸರಾಗಿದ್ದರು. ಕಾನೂನು ಮೀರಿದವರನ್ನು ಕ್ಷಿಪ್ರವಾಗಿ ಬಂಧಿಸಿ ಜೈಲಿಗೆ ಕಳುಹಿಸುತ್ತಿದ್ದರು. ಆದ್ರೆ, ಈಗ ಪರಿಸ್ಥಿತಿ ಬದಲಾಗಿದ್ದು, ಪೊಲೀಸರೇ ಕೋರ್ಟ್ ಕಟಕಟೆಯಲ್ಲಿ ನಿಲ್ಲುತ್ತಿದ್ದಾರೆ. ಕೊಲೆ, ಸುಲಿಗೆ, ಲೈಂಗಿಕ ದೌರ್ಜನ್ಯ, ಅತ್ಯಾಚಾರ, ಭೂ ಮಾಫೀಯಾ, ಲಂಚ, ಹೀಗೆ ಅನೇಕ ಅಪರಾಧ ಚಟುವಟಿಕೆಗಳಲ್ಲಿ ಪೊಲೀಸರು ತೊಡಗಿಸಿಕೊಂಡು ಆರೋಪಿಗಳಾಗುವ ಸ್ಥಾನದಲ್ಲಿ ನಿಲ್ಲುವ ಪರಿಸ್ಥಿತಿ ತಂದುಕೊಳ್ಳುತ್ತಿದ್ದಾರೆ.

ಇದನ್ನು ನೋಡಿ : ಚಿ.ನಾಹಳ್ಳಿಗೆ ಜಿಲ್ಲಾಧಿಕಾರಿ ಭೇಟಿ – ಅಧಿಕಾರಿಗಳಿಗೆ DC ಶುಭಕಲ್ಯಾಣ್ ಕ್ಲಾಸ್




