Nelamangala ಮುದ್ದಲಿಂಗನಹಳ್ಳಿ ಗೇಟ್ ಬಳಿ ನಾಯಿ ಹುಡುಕಲು ತೆರಳಿದ್ದ ಪಿಯುಸಿ ವಿದ್ಯಾರ್ಥಿ ಯೋಗೇಂದ್ರಗೆ ರೈಲು ಡಿಕ್ಕಿಯಾಗಿ ಸ್ಥಳದಲ್ಲೇ ಸಾವು.

ಮನೆಯಲ್ಲಿ ಸಾಕಿದ್ದ ಪ್ರೀತಿಯ ಶ್ವಾನ ಎರಡು ದಿನಗಳಿಂದ ಕಾಣೆಯಾಗಿದ್ದ ಹಿನ್ನೆಲೆ, ಅದನ್ನು ಹುಡುಕಲು ಹೊರಟ ಬಾಲಕನಿಗೆ ರೈಲು ಡಿಕ್ಕಿಯಾಗಿ ಸಾವನ್ನಪ್ಪಿರುವ ದುರ್ಘಟನೆ ಬೆಂಗಳೂರು ಹೊರವಲಯದ Nelamangala ತಾಲೂಕಿನ ಮುದ್ದಲಿಂಗನಹಳ್ಳಿ ಗೇಟ್ ಬಳಿ ನಡೆದಿದೆ.
ಮೃತ ಬಾಲಕನನ್ನು ಯೋಗೇಂದ್ರ (16) ಎಂದು ಗುರುತಿಸಲಾಗಿದೆ. ಅವರು ಶ್ರೀನಿವಾಸ್ ಮತ್ತು ಚನ್ನಮ್ಮ ದಂಪತಿಯ ಪುತ್ರರಾಗಿದ್ದು, ಪಿಯುಸಿ ವ್ಯಾಸಂಗ ಮಾಡುತ್ತಿದ್ದರು. ಎರಡು ದಿನಗಳಿಂದ ಸಾಕು ನಾಯಿ ಕಾಣೆಯಾಗಿದ್ದರಿಂದ ಮನನೊಂದಿದ್ದ ಯೋಗೇಂದ್ರ, ಇಂದು ಬೆಳಗ್ಗೆ ಪೋಷಕರಿಗೆ ತಿಳಿಸದೇ ನಾಯಿ ಹುಡುಕಲು ತೆರಳಿದ್ದ ವೇಳೆ ಈ ಅವಘಡ ಸಂಭವಿಸಿದೆ.
ರೈಲು ಡಿಕ್ಕಿ; ಸ್ಥಳದಲ್ಲೇ ಸಾವು
ಮುದ್ದಲಿಂಗನಹಳ್ಳಿ ರೈಲ್ವೆ ಗೇಟ್ ಸಮೀಪ ಹಳಿ ದಾಟುವ ವೇಳೆ ಏಕಾಏಕಿ ಬಂದ ರೈಲು ಬಾಲಕನಿಗೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಯೋಗೇಂದ್ರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.
ಇದನ್ನು ಓದಿ : ಖಾಸಗಿ ಹೋಟೆಲ್ನಲ್ಲಿ ಮಲ್ಲಿಕಾರ್ಜುನ ಖರ್ಗೆ–ಸಿದ್ದರಾಮಯ್ಯ ಭೇಟಿ
ಯೋಗೇಂದ್ರ ಲಾಂಗ್ ಜಂಪ್ ಕ್ರೀಡೆಯಲ್ಲಿ ಉತ್ತಮ ಸಾಧನೆ ಮಾಡಿದ್ದ ಪ್ರತಿಭಾವಂತನಾಗಿದ್ದ. ಶಾಲಾ ಹಂತದಲ್ಲೇ ಹಲವಾರು ಪ್ರಶಸ್ತಿಗಳನ್ನು ಗೆದ್ದಿದ್ದ ಉತ್ತಮ ವಿದ್ಯಾಭ್ಯಾಸದ ಜೊತೆಗೆ ಎಲ್ಲರ ಮೆಚ್ಚುಗೆಗೂ ಪಾತ್ರನಾಗಿದ್ದನು. ಬಾಲಕನ ಅಕಾಲಿಕ ಸಾವು ಕುಟುಂಬ ಮತ್ತು ಗ್ರಾಮಸ್ಥರನ್ನು ಆಘಾತಕ್ಕೊಳಪಡಿಸಿದೆ.
ಪೊಲೀಸ್ ತನಿಖೆ ಮತ್ತು ಮರಣೋತ್ತರ ಪರೀಕ್ಷೆ
ಘಟನಾ ಸ್ಥಳಕ್ಕೆ ಯಶವಂತಪುರ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನೆಲಮಂಗಲ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ, ನಂತರ ಮೃತದೇಹವನ್ನು ಪೋಷಕರಿಗೆ ಹಸ್ತಾಂತರಿಸಲಾಗಿದೆ. ಶವಗಾರದ ಬಳಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು.
ಈ ಸಂಬಂಧ ಯಶವಂತಪುರ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಇದನ್ನು ನೋಡಿ : ಚಿ.ನಾಹಳ್ಳಿಗೆ ಜಿಲ್ಲಾಧಿಕಾರಿ ಭೇಟಿ – ಅಧಿಕಾರಿಗಳಿಗೆ DC ಶುಭಕಲ್ಯಾಣ್ ಕ್ಲಾಸ್




