Belagavi | ದೇಶದ ಅತಿದೊಡ್ಡ ರಾಬರಿ ಪ್ರಕರಣ ಬೆಳಕಿಗೆ – 400 ಕೋಟಿ ದರೋಡೆ.

ಬೆಳಗಾವಿಯ ಗಡಿ ಭಾಗದ ಮೂಲಕ ಗೋವಾದಿಂದ ಮಹಾರಾಷ್ಟ್ರಕ್ಕೆ 400 ಕೋಟಿ ರೂ ಹಣ ಸಾಗಿಸುತ್ತಿದ್ದ 2 ಕಂಟೇನರ್ಗಳನ್ನು ಹೈಜಾಕ್ ಮಾಡಲಾಗಿದೆ ಎನ್ನಲಾಗುತ್ತಿದೆ. 2025 ಅಕ್ಟೋಬರ್ 16ರಂದು ನಡೆದಿರುವ ದೇಶದ ಅತಿ ದೊಡ್ಡ ರಾಬರಿ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರ ಮೂರು ರಾಜ್ಯಗಳ ಪೊಲೀಸ್ಗೆ ಪ್ರಕರಣ ದೊಡ್ಡ ಸವಾಲಾಗಿದೆ. ಸದ್ಯ ನಾಸಿಕ್ ಪೊಲೀಸರು ಪ್ರಕರಣ ಸಂಬಂಧ ನಾಲ್ವರನ್ನು ಬಂಧಿಸಿದ್ದು, ಉಳಿದ ಇಬ್ಬರಿಗಾಗಿ ಶೋಧ ನಡೆಸಿದ್ದಾರೆ.

ಇದನ್ನು ಓದಿ : ತನ್ನ ಸಚಿವರ ವಿರುದ್ಧವೇ CM ಅಸಮಾಧಾನ, ಖಡಕ್ ವಾರ್ನಿಂಗ್..!
ರಾಜ್ಯದ ಪೊಲೀಸರಿಗೆ ಶಾಕ್
400 ಕೋಟಿ ರೂ ಹಣ ಸಾಗಿಸುತ್ತಿದ್ದ 2 ಕಂಟೇನರ್ ಗಳನ್ನು ಬೆಳಗಾವಿ-ಗೋವಾ ಗಡಿ ಚೋರ್ಲಾ ಘಾಟ್ ನಿಂದ ನಾಪತ್ತೆ ಆಗಿರುವುದು ಬಹಿರಂಗವಾಗಿದೆ.
ಘಟನೆ ನಡೆದು ಸುಮಾರು ತಿಂಗಳ ಬಳಿಕ ರಾಬರಿ ಪ್ರಕರಣ ಬೆಳಕಿಗೆ ಬಂದಿರುವುದು ಮೂರು ರಾಜ್ಯದ ಪೊಲೀಸರಿಗೆ ಶಾಕ್ ಉಂಟಾಗಿದೆ. ಜೊತೆಗೆ ಸಾಕಷ್ಟು ಅನುಮಾನಗಳಿಗೂ ಕಾರಣವಾಗಿದೆ. Belagavi ಜಿಲ್ಲೆಯಲ್ಲಿ ನಡೆದ ರಾಬರಿಯಿಂದ ಮಹಾರಾಷ್ಟ್ರದಲ್ಲಿ ಸಂಚಲನ ಸೃಷ್ಟಿಯಾಗಿದೆ.

ತನಿಖೆಗೆ SIT ರಚನೆ
ಹಾಗಾಗಿ ಕರ್ನಾಟಕ, ಮಹಾರಾಷ್ಟ್ರ ಮತ್ತು ಗೋವಾ ಪೊಲೀಸರು ಕಂಟೇನರ್ ಹುಡುಕಾಟ ನಡೆಸಿದ್ದಾರೆ. ಇನ್ನು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್, ಪ್ರಕರಣ ತನಿಖೆಗೆ ಎಸ್ಐಟಿ ರಚನೆ ಮಾಡಿ ಆದೇಶ ಹೊರಡಿಸಿದ್ದಾರೆ.
ಸದ್ಯ ರಾಬರಿ ಆಗಿರುವ ಭಾರಿ ಮೊತ್ತವು ಮಹಾರಾಷ್ಟ್ರ ರಿಯಲ್ ಎಸ್ಟೇಟ್ ಉದ್ಯಮಿ ಕಿಶೋರ್ ಶೇಟ್ಗೆ ಸೇರಿದ್ದು ಎನ್ನಲಾಗುತ್ತಿದೆ. ಈ ಪ್ರಕರಣ ಸಂಬಂಧ ನಾಲ್ವರನ್ನು ಬಧಿಸಲಾಗಿದೆ.

ಇದನ್ನು ನೋಡಿ : ಕುಮಾರಣ್ಣ, ರೇವಣ್ಣ ಜೊತೆ ನಾನಿದ್ದೇನೆ- ಕಾಂಗ್ರೆಸ್ ನಾಯಕರ ವಿರುದ್ಧ ಹೆಚ್ಡಿಕೆ ಕೆಂಡಾಮಂಡಲ




