
KALBURGI NEWS : ಕಳೆದ ಒಂದು ವಾರದಿಂದ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರಿ ಮಳೆ ಹಾಗೂ ಮುಲ್ಲಾಮಾರಿ ಜಲಾಶಯದಿಂದ ನೀರಿನ ಹೆಚ್ಚುವರಿ ಬಿಡುಗಡೆ ಹಿನ್ನೆಲೆಯಲ್ಲಿ, ಶಹಾಬಾದ್ ಉಪವಿಭಾಗದ ಚಿಂಚೋಳಿಯಿಂದ ಕಲಬುರಗಿ ಕೇಂದ್ರದ ಸಂಪರ್ಕ ಕಲ್ಪಿಸುವ ಪ್ರಮುಖ ಸೇತುವೆಗಳು ಜಲಾವೃತಗೊಂಡಿ ದ್ದು, ವಾಹನ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದೆ.
ಚಿತ್ತಾಪುರ ಹಾಗೂ ಕಾಳಗಿ ತಾಲ್ಲೂಕುಗಳಿಂದ ಕಲಬುರಗಿಗೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿಯ ಲ್ಲಿರುವ ಕಣಸೂರು ಸೇತುವೆ ಹಾಗೂ ಚಿತ್ತಾಪುರ ಮಾರ್ಗದ ದಂಡೋತಿ ಹತ್ತಿರದ ಕಾಗಿಣಾ ಸೇತುವೆಗಳು ನೀರಿನಲ್ಲಿ ಮುಳುಗಡೆಯಾಗಿವೆ.
“ನೀರಿನ ಪ್ರಮಾಣ ಕಡಿಮೆಯಾಗುವವರೆಗೆ ವಾಹನ ಸಂಚಾರಕ್ಕೆ ಅವಕಾಶವಿಲ್ಲ,”ಎಂದು ಶಹಾಬಾದ್ ಉಪವಿಭಾಗದ ಡಿವೈಎಸ್ಪಿ ಶಂಕರಗೌಡ ಪಾಟೀಲ ತಿಳಿಸಿದ್ದಾರೆ. ಇನ್ನು ಸ್ಥಳೀಯ ನಾಗರಿಕರಿಗೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲು ಪೊಲೀಸರು ಹಾಗೂ ಸ್ಥಳೀಯ ಆಡಳಿತ ಸೂಚನೆ ನೀಡಿದ್ದಾರೆ.




