ಬೈಕ್ ಮತ್ತು ವಾಹನ ನಡುವೆ ಭೀಕರ ರಸ್ತೆ Accident – ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವು .

ಅಪರಿಚಿತ ವಾಹನವೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆತಿಪಟೂರು ನಗರದ ರಾಷ್ಟ್ರೀಯ ಹೆದ್ದಾರಿ – 206 ರ ಮಂಜುನಾಥ ನಗರದ ಬೈಪಾಸ್ ನಲ್ಲಿ ನಡೆದಿದೆ. ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.
ಬೈಪಾಸ್ ರಸ್ತೆಯಲ್ಲಿ ಸಂಚರಿಸುತ್ತಿರುವಾಗ Accident
ಇನ್ನು ಮೃತ ವ್ಯಕ್ತಿಯನ್ನು ವಿರುಪಾಕ್ಷಪುರದ ಗ್ರಾಮಸ್ಥಕೃಷ್ಣಪ್ಪ ಎಂಬುವರ ಮಗ ಮೆಕ್ಯಾನಿಕ್ ಕೆಲಸ ಮಾಡುತ್ತಿದ್ದ 20 ವರ್ಷದ ವಿನಯ್ ಎಂದು ಗುರುತಿಸಲಾಗಿದೆ. ಮೃತ ವ್ಯಕ್ತಿಯು ಬೈಪಾಸ್ ರಸ್ತೆಯಲ್ಲಿ ಸಂಚರಿಸುತ್ತಿರುವಾಗ ಹಿಂಬದಿಯಿಂದ ಬಂದ ವಾಹನ ಒಂದು ಡಿಕ್ಕಿ ಹೊಡೆದ, ಪರಿಣಾಮ ಸ್ಥಳದಲ್ಲೇ ಸಾವನಪ್ಪಿದ್ದಾನೆ.
ಇದನ್ನು ಓದಿ : ಸ್ವಿಮ್ಮಿಂಗ್ ಪೂಲ್ನಲ್ಲಿ ಮಹಿಳೆ ಶವವಾಗಿ ಪತ್ತೆ – Murder ಶಂಕೆ

ಪ್ರಕರಣ ದಾಖಲು
ಇನ್ನು ಹಿಂಬದಿಯಿಂದ ಡಿಕ್ಕಿ ಹೊಡೆದ ವಾಹನವು ಡಿಕ್ಕಿ ಹೊಡೆದು ಕಣ್ಮರೆಯಾಗಿದ್ದು, ಯಾವ ವಾಹನ ಡಿಕ್ಕಿ ಹೊಡೆದಿದೆ ಎಂಬುದು ತನಿಕೆಯಿಂದಷ್ಟೇ ತಿಳಿಯಬೇಕಾಗಿದೆ.
Accident ಸಂಬಂಧ ತಿಪಟೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಚುರುಕುಗೊಂಡಿದೆ.

ಇದನ್ನು ನೋಡಿ : ಕರ್ನಾಟಕದಲ್ಲಿ ಹೂಡಿಕೆಗೆ ಉತ್ತಮ ಅವಕಾಶ: ಸಿಎಂ ಸಿದ್ಧರಾಮಯ್ಯ




