ರಾಜ್ಯದಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಗೆ ಅಧಿಕಾರ ಸಿಗುವುದಿಲ್ಲ ಎಂದು ಮೈಸೂರಿನಲ್ಲಿ CM Siddaramaiah ಸ್ಪಷ್ಟವಾಗಿ ಹೇಳಿದ್ದಾರೆ. 2028ರಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

CM Siddaramaiah : ರಾಜ್ಯದಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿ ಅಧಿಕಾರಕ್ಕೆ ಬರುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟವಾಗಿ ಹೇಳಿದ್ದಾರೆ. ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ನಾಯಕರು ರಾಜಕೀಯ ಉದ್ದೇಶದಿಂದ ಮಾತ್ರ ಹೇಳಿಕೆ ನೀಡುತ್ತಿದ್ದಾರೆ ಎಂದು ಟೀಕಿಸಿದರು.
ಜೆಡಿಎಸ್ ಹೇಳಿಕೆ ಕೇವಲ ರಾಜಕೀಯ ಭಾಷಣ
ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡರೆ ಅಧಿಕಾರಕ್ಕೆ ಬರಬಹುದು ಎಂದು ಜೆಡಿಎಸ್ ನಾಯಕರು ಅಂದುಕೊಂಡಿದ್ದಾರೆ. ಆದರೆ ಅದು ಸಾಧ್ಯವಿಲ್ಲ. ಸುಮ್ಮನೇ ರಾಜಕೀಯವಾಗಿ ಭಾಷಣ ಮಾಡುತ್ತಿದ್ದಾರೆ ಅಷ್ಟೇ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಇದನ್ನು ಓದಿ : ತನ್ನ ಸಚಿವರ ವಿರುದ್ಧವೇ CM ಅಸಮಾಧಾನ, ಖಡಕ್ ವಾರ್ನಿಂಗ್..!

ಒಂದು ವೇಳೆ ಬಿಜೆಪಿ–ಜೆಡಿಎಸ್ ಮೈತ್ರಿಗೆ ಬಹುಮತ ಬಂದರೂ ಕೂಡ, ಬಿಜೆಪಿಯವರು ಜೆಡಿಎಸ್ಗೆ ಅಧಿಕಾರ ಬಿಟ್ಟು ಕೊಡುವುದಿಲ್ಲ. ವಾಸ್ತವದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಎರಡೂ ಪಕ್ಷಗಳಿಗೆ ಬಹುಮತ ಬರುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.
2028ರಲ್ಲೂ ಕಾಂಗ್ರೆಸ್ ಅಧಿಕಾರ
ಇನ್ನೂ 2028ರಲ್ಲೂ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವೇ ಅಧಿಕಾರಕ್ಕೆ ಬರುತ್ತದೆ ಎಂದು ಸಿಎಂ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು. ಪಕ್ಷದ ನಾಯಕತ್ವ ಯಾರದ್ದು ಎಂಬುದನ್ನು ಹೈಕಮಾಂಡ್ ನಿರ್ಧರಿಸುತ್ತದೆ ಎಂದು ಅವರು ಹೇಳಿದರು.
ಇದನ್ನು ನೋಡಿ : ಕುಮಾರಣ್ಣ, ರೇವಣ್ಣ ಜೊತೆ ನಾನಿದ್ದೇನೆ- ಕಾಂಗ್ರೆಸ್ ನಾಯಕರ ವಿರುದ್ಧ ಹೆಚ್ಡಿಕೆ ಕೆಂಡಾಮಂಡಲ




