ಗಣರಾಜ್ಯೋತ್ಸವ ಭಾಷಣದಲ್ಲಿ ರಾಜ್ಯಪಾಲರು ಸರ್ಕಾರ ಬರೆದುಕೊಟ್ಟ ಭಾಷಣವನ್ನೇ ಓದಬೇಕು ಎಂಬ ನಿಯಮ ಇಲ್ಲ ಎಂದು ಮೈಸೂರಿನಲ್ಲಿ CM Siddaramaiah ಹೇಳಿದ್ದಾರೆ.

CM Siddaramaiah : ಸದನದಲ್ಲಿ ಕಾಂಗ್ರೆಸ್ ಸದಸ್ಯರು ರಾಜ್ಯಪಾಲರನ್ನು ಅಡ್ಡಗಟ್ಟಿದ ಆರೋಪದ ಕುರಿತು ರಾಜ್ಯಪಾಲರು ರಾಷ್ಟ್ರಪತಿಗಳಿಗೆ ವಿವರಣೆ ನೀಡಿರುವ ವಿಚಾರಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಏನು ನಡೆದಿತ್ತು ಎಂಬುದನ್ನು ರಾಜ್ಯಪಾಲರು ರಾಷ್ಟ್ರಪತಿಗಳಿಗೆ ವಿವರಿಸಬಹುದು. ಆದರೆ ಈ ಬಗ್ಗೆ ನಾವು ಯಾವುದೇ ವಿವರಣೆ ನೀಡುವುದಿಲ್ಲ ಎಂದು ಅವರು ಹೇಳಿದರು.
ಗಣರಾಜ್ಯೋತ್ಸವ ಭಾಷಣದಲ್ಲಿ ಬದಲಾವಣೆ ಮಾಡಲು ಅವಕಾಶ
ನಾಳೆ ನಡೆಯುವ ಗಣರಾಜ್ಯೋತ್ಸವ ಸಮಾರಂಭದಲ್ಲಿ ರಾಜ್ಯಪಾಲರು ಭಾಷಣ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ಸರ್ಕಾರ ಬರೆದುಕೊಟ್ಟ ಭಾಷಣವನ್ನೇ ಓದಬೇಕು ಎಂಬ ನಿಯಮ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಅಗತ್ಯವಿದ್ದರೆ ಭಾಷಣದಲ್ಲಿ ಕೆಲವು ಬದಲಾವಣೆಗಳನ್ನು ಮಾಡುವ ಸ್ವಾತಂತ್ರ್ಯ ರಾಜ್ಯಪಾಲರಿಗೆ ಇದೆ ಎಂದು ತಿಳಿಸಿದರು.
ಇದನ್ನು ಓದಿ : ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ Police ಅರೆಸ್ಟ್

ಆದರೆ ವಿಧಾನಮಂಡಲದ ಜಂಟಿ ಅಧಿವೇಶನದಲ್ಲಿ ಮಾತ್ರ ಸರ್ಕಾರ ಬರೆದುಕೊಟ್ಟ ಭಾಷಣವನ್ನು ರಾಜ್ಯಪಾಲರು ಓದಬೇಕು ಎಂಬ ಸ್ಪಷ್ಟ ನಿಯಮ ಇದೆ. ಗಣರಾಜ್ಯೋತ್ಸವ ಭಾಷಣಕ್ಕೆ ಈ ನಿಯಮ ಅನ್ವಯಿಸುವುದಿಲ್ಲ ಎಂದು ಸಿಎಂ ವಿವರಿಸಿದರು.
HD ರೇವಣ್ಣ ಬಂಧನ ಪ್ರಕರಣದ ಕುರಿತು ಪ್ರತಿಕ್ರಿಯೆ
ಮಾಜಿ ಸಚಿವ ಎಚ್.ಡಿ. ರೇವಣ್ಣ ಬಂಧನ ಪ್ರಕರಣದ ಕುರಿತು ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಸರ್ಕಾರ ಯಾವತ್ತೂ ಯಾವುದೇ ಪ್ರಕರಣದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದರು. ಕಾನೂನಿನ ಪ್ರಕಾರ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಸುಮ್ಮನೆ ಕೆಲವರು ಸುಳ್ಳು ಆರೋಪ ಮಾಡುತ್ತಿದ್ದಾರೆ ಅಷ್ಟೇ. ನಾವು ಎಸ್.ಡಿ. ರೇವಣ್ಣ ಅವರ ಮೇಲೆ ದ್ವೇಷ ಸಾಧಿಸುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.
ಇದನ್ನು ನೋಡಿ : ತುಮಕೂರು DCರನ್ನ ಹೊಗಳಿದ SURESH GOWDA




