Tumakuru : ಗಣರಾಜ್ಯೋತ್ಸವದ ಸಂಭ್ರಮ – ಸಿದ್ದಗಂಗಾ ಮಠದಲ್ಲಿ ಪರಂರಿಂದ ಧ್ವಜಾರೋಹಣ.

Tumakuru : ದೇಶಾದ್ಯಂತ 77ನೇ ಗಣರಾಜ್ಯೋತ್ಸವವನ್ನು ಇಂದು ಸಂಭ್ರಮದಿಂದ ಆಚರಿಸಲಾಗ್ತಿದೆ. ತುಮಕೂರಿನ ಸಿದ್ದಗಂಗಾ ಮಠದಲ್ಲಿ ಗಣರಾಜ್ಯೋತ್ಸವ ಭಕ್ತಿಭಾವದಿಂದ ನೆರವೇರಿತು.

ಧ್ವಜಾರೋಹಣ ನೆರವೇರಿಸಿದ ಸಚಿವ ಪರಮೇಶ್ವರ್ – Tumakuru
ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಅವರು ಸಿದ್ದಗಂಗಾ ಮಠದಲ್ಲಿ ಧ್ವಜಾರೋಹಣ ನೆರವೇರಿಸಿ ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಠದ ಅಧ್ಯಕ್ಷರಾದ ಸಿದ್ದಲಿಂಗ ಸ್ವಾಮೀಜಿ ಅವರು ದಿವ್ಯ ಸಾನಿಧ್ಯ ವಹಿಸಿದ್ದರು.
ಇದನ್ನು ಓದಿ : ಕನ್ನಡದ ಜ್ಞಾನ ದಾಸೋಹಿ ಅಂಕೇಗೌಡರಿಗೆ Padma Shri ಗೌರವ..!

ಸಿದ್ದಗಂಗಾ ಮಠದ ಮಕ್ಕಳಿಂದ ಪಥಸಂಚಲ
ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿ ಸಿದ್ದಗಂಗಾ ಮಠದ ಮಕ್ಕಳು ಪಥಸಂಚಲನ ನಡೆಸಿದರು. ಸ್ಕೌಟ್ ಅಂಡ್ ಗೈಡ್, ಎನ್ಎಸ್ಎಸ್ ವಿದ್ಯಾರ್ಥಿಗಳು ಪಥಸಂಚಲನದಲ್ಲಿ ಭಾಗವಹಿಸಿ ದೇಶಭಕ್ತಿಯ ಘೋಷಣೆಗಳನ್ನು ಮೊಳಗಿಸಿದರು.

ಶಿವಕುಮಾರ ಸ್ವಾಮೀಜಿ ಗದ್ದಿಗೆ ವಿಶೇಷ ಅಲಂಕಾರ
ಗಣರಾಜ್ಯೋತ್ಸವದ ಅಂಗವಾಗಿ ಶಿವಕುಮಾರ ಸ್ವಾಮೀಜಿ ಅವರ ಗದ್ದಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ಇನ್ನು ಈ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಶುಭಕಲ್ಯಾಣ್, ಪೊಲೀಸ್ ಅಧೀಕ್ಷಕ ಅಶೋಕ್ ವೆಂಕಟ್, ಪಾಲಿಕೆ ಆಯುಕ್ತ ಶುಭ, ತಹಶೀಲ್ದಾರ್ ರಾಜೇಶ್ವರಿ, ನಗರ ಶಾಸಕ ಜ್ಯೋತಿ ಗಣೇಶ್, ಗ್ರಾಮಾಂತರ ಶಾಸಕ ಸುರೇಶ್ ಗೌಡ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

ಇದನ್ನು ನೋಡಿ : 77TH REPUBLIC DAY | ಸಿದ್ದಗಂಗಾ ಮಠದಲ್ಲಿ ಅಂಧ ಮಕ್ಕಳಿಂದ ಪಥ ಸಂಚಲನ




