ತುಮಕೂರು ಬಳಿ Accident – ಮೂವರು ಸ್ಥಳದಲ್ಲೇ ಸಾವು.

ವೀಕೆಂಡ್ ಹಾಗೂ ಗಣರಾಜ್ಯೋತ್ಸವ ಹಿನ್ನೆಲೆ ಸಾಲು ಸಾಲು ರಜೆ ಇದ್ದ ಕಾರಣ ಪ್ರವಾಸಕ್ಕೆ ತೆರಳಿದ್ದವರ ಕಾರು ಭೀಕರ ಅಪಘಾತಕ್ಕೀಡಾಗಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿರೋ ಘಟನೆ ತುಮಕೂರು ನಗರದ ಹೊರವಲಯದಲ್ಲಿ ಹಾದು ಹೋಗಿರೋ ನೆಲಹಾಳ್ ಬಳಿ ಸಂಭವಿಸಿದೆ.
ಲಾರಿಗೆ ಹಿಂಬದಿಯಿಂದ ಡಿಕ್ಕಿಯಾದ ಕಾರು
ಕಾರು ಹಾಗೂ ಲಾರಿಯ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಡಿಕ್ಕಿಯಾದ ರಭಸಕ್ಕೆ ಕಾರಿನಲ್ಲಿದ್ದ ಓರ್ವ ಮಹಿಳೆ ಸೇರಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ರೆ, ಓರ್ವನಿಗೆ ಗಂಭೀರ ಗಾಯ ಹಾಗೂ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ.

ಇದನ್ನು ಓದಿ : Tumakuru ಸಿದ್ದಗಂಗಾ ಮಠದಲ್ಲಿ ಗಣರಾಜ್ಯೋತ್ಸವದ ಸಂಭ್ರಮ
ಮೂವರು ಪ್ರವಾಸಿಗರು ಸಾವು
ಮಾರುತಿ ಎರಿಟಿಗಾ ಕಾರಿನಲ್ಲಿ ಏಳು ಮಂದಿ ಗೋಕರ್ಣ, ಮುರುಡೇಶ್ವರ, ಉಡುಪಿ ಕಡೆಗೆ ಪ್ರವಾಸಕ್ಕೆ ತೆರಳಿದ್ದರು. ಪ್ರವಾಸ ಮುಗಿಸಿ ವಾಪಸ್ ಬರುವ ವೇಳೆ ಇಂದು ಮುಂಜಾನೆ ತುಮಕೂರು ಹೊರವಲಯದ ನೆಲಹಾಳ್ ಬಳಿಯ ಹೆದ್ದಾರಿಯಲ್ಲಿ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿದೆ. ಡಿಕ್ಕಿಯ ಪರಿಣಾಮ ಮೂವರು ಪ್ರವಾಸಿಗರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಪ್ರವಾಸ ಮುಗಿಸಿ ವಾಪಸ್ ಬರುವಾಗ Accident
ಉತ್ತರ ಪ್ರದೇಶ ಮೂಲದ ಅನಿಕೇತ್, ಅಭೀರ್, ಹಾಗೂ ಆಂಧ್ರ ಮೂಲದ ಸನ್ಮೋಕ್ತಿ ಮೃತ ದುರ್ದೈವಿಗಳಾಗಿದ್ದಾರೆ. ಇನ್ನು ಮೃತರೆಲ್ಲರೂ ಬೆಂಗಳೂರು ಮೂಲದವರಾಗಿದ್ದು, ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಸಾಲು ಸಾಲು ರಜೆ ಹಿನ್ನೆಲೆ ಸ್ನೇಹಿತರೆಲ್ಲರೂ ಸೇರಿ ಪ್ರವಾಸಕ್ಕೆ ತೆರಳಿದ್ದರು. ಪ್ರವಾಸ ಮುಗಿಸಿ ಬೆಂಗಳೂರಿಗೆ ವಾಪಸ್ ಬರುವ ವೇಳೆ ಭೀಕರ Accident ಸಂಭವಿಸಿದ್ದು, ಚಾಲಕ ಸೇರಿ ಮೂವರಿಗೆ ಗಾಯಗಳಾಗಿದ್ದು ಕೂಡಲೇ ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ.

ಪ್ರಕರಣ ದಾಖಲು – Accident
ಅಪಘಾತದ ಸ್ಥಳಕ್ಕೆ ಎಸ್ಪಿ ಅಶೋಕ್ ಕೆ.ವಿ ಹಾಗೂ ಕೋರಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ರು. ಸದ್ಯ ಮೃತದೇಹಗಳನ್ನು ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ. ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನು ನೋಡಿ : ಚಿನ್ನದ ನಿಧಿ ಒಪ್ಪಿಸಿದ ಲಕ್ಕುಂಡಿಯ ಕುಟುಂಬಕ್ಕೆ ಭರ್ಜರಿ ಉಡುಗೊರೆ!




