Bengaluru : ಕುಡಿದ ನಶೆಯಲ್ಲಿ ಅಡ್ಡಾದಿಡ್ಡಿ ಕಾರು ಚಾಲನೆ: ಮರಕ್ಕೆ ಡಿಕ್ಕಿಯಾಗಿ ಯುವಕ ದುರ್ಮರಣ..ಬೆಂಗಳೂರು ಹೊರವಲಯ ಆನೇಕಲ್ ಬಳಿ ಭೀಕರ ರಸ್ತೆ ಅಪಘಾತ.

Bengaluru ಹೊರವಲಯದ ಆನೇಕಲ್ ತಾಲೂಕಿನ ಕಮ್ಮಸಂದ್ರದಲ್ಲಿ (Kammasandra) ಕುಡಿದ ನಶೆಯಲ್ಲಿ ಅಡ್ಡಾದಿಡ್ಡಿ ಕಾರು ಚಲಾಯಿಸಿದ ಪರಿಣಾಮ ಮರಕ್ಕೆ ಡಿಕ್ಕಿಯಾಗಿ ಓರ್ವ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ಭೀಕರ ರಸ್ತೆ ಅಪಘಾತ ಸಂಭವಿಸಿದೆ.
ಈ ಅಪಘಾತದಲ್ಲಿ ಹೆಬ್ಬಗೋಡಿ ನಿವಾಸಿ ಪ್ರಶಾಂತ್ (28) ಮೃತಪಟ್ಟಿದ್ದಾನೆ. ಕಾರು ಚಾಲನೆ ಮಾಡುತ್ತಿದ್ದ ರೋಷನ್ ಹೆಗ್ಗಡೆ (27) ಗಂಭೀರವಾಗಿ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಎಣ್ಣೆಪಾರ್ಟಿ ಬಳಿಕ ನಡೆದ ಗಲಾಟೆ
ಭಾನುವಾರ ಕ್ರಿಕೆಟ್ ಪಂದ್ಯ ವೀಕ್ಷಣೆ ಬಳಿಕ ಇಬ್ಬರೂ ಎಣ್ಣೆಪಾರ್ಟಿ ನಡೆಸಿದ್ದಾರೆ. ಈ ವೇಳೆ ಪ್ರಶಾಂತ್ ಮತ್ತು ರೋಷನ್ ನಡುವೆ ಕಿರಿಕ್ ಉಂಟಾಗಿದೆ. ಮನೆಗೆ ತೆರಳುವ ವೇಳೆ ಕಾರಿನೊಳಗೆಯೂ ವಾಗ್ವಾದ ಮುಂದುವರಿದಿದೆ.
ಇದನ್ನು ನೋಡಿ : RCBಗೆ ಮೋಸ ಮಾಡಿದ ಎಲೀಸ್ ಪೆರ್ರಿ! ಪೆರ್ರಿ, ಪೆರ್ರಿ ಬೇರೆಡೆಗೆ ಪೇರಿ..!
ಕೋಪದ ಚಾಲನೆಯಿಂದ ಭೀಕರ ಅಪಘಾತ
ಕಾರನ್ನು ಚಲಾಯಿಸುತ್ತಿದ್ದ ರೋಷನ್ ಹೆಗ್ಗಡೆಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದರಿಂದ ಆಕ್ರೋಶಗೊಂಡ ಆತ ಅಡ್ಡಾದಿಡ್ಡಿಯಾಗಿ ಕಾರು ಚಲಾಯಿಸಿದ್ದಾನೆ. ಈ ಸಂದರ್ಭದಲ್ಲಿ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ಇಬ್ಬರೂ ಗಂಭೀರವಾಗಿ ಗಾಯಗೊಂಡರು. ತಕ್ಷಣ ಆಸ್ಪತ್ರೆಗೆ ಸಾಗಿಸಲಾಗಿದ್ದರೂ, ಮಾರ್ಗಮಧ್ಯೆ ಪ್ರಶಾಂತ್ ಸಾವನ್ನಪ್ಪಿದ್ದಾನೆ. ಗಾಯಾಳು ರೋಷನ್ಗೆ ಚಿಕಿತ್ಸೆ ಮುಂದುವರಿದಿದೆ.
ಡ್ಯಾಶ್ಬೋರ್ಡ್ ಕ್ಯಾಮೆರಾದಲ್ಲಿ ಭೀಕರ ದೃಶ್ಯ ಸೆರೆ
ಈ ಭೀಕರ ಅಪಘಾತದ ದೃಶ್ಯ ಕಾರಿನ ಡ್ಯಾಶ್ಬೋರ್ಡ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಘಟನೆ ಸಂಬಂಧ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನು ಓದಿ : ಗಣರಾಜ್ಯೋತ್ಸವದ ದಿನವೇ ತುಮಕೂರಿನಲ್ಲಿ ಭೀಕರ Accident




