‘ಗ್ಯಾರಂಟಿಯಿಂದ’ ಕುಟುಂಬಗಳು ಆರ್ಥಿಕವಾಗಿ ಸಬಲವಾಗುತ್ತಿವೆ : ರಾಜ್ಯ ಸರ್ಕಾರವನ್ನು ಹಾಡಿ ಹೊಗಳಿದ Thawarchand Gehlot.

ಜನ ಕಲ್ಯಾಣಗಳಿಗಾಗಿ ರಾಜ್ಯವು ವರ್ಷಕ್ಕೆ 1.12 ಲಕ್ಷ ಕೋಟಿ ರೂ.ಗಳನ್ನು ಖರ್ಚು ಮಾಡುತ್ತಿದೆ. ಗ್ಯಾರಂಟಿ ಯೋಜನೆಗಳಿಗಾಗಿ ಈವರೆಗೆ 1.13 ಲಕ್ಷ ಕೋಟಿ ರೂ.ಗಳಿಗೂ ಹೆಚ್ಚಿನ ಅನುದಾನವನ್ನು ವಿನಿಯೋಗಿಸಲಾಗಿದೆ. ಇದರ ಪರಿಣಾಮವಾಗಿ ಜನರ ಕೊಳ್ಳುವ ಶಕ್ತಿ ಹೆಚ್ಚಿದೆ, ಕುಟುಂಬಗಳು ಆರ್ಥಿಕವಾಗಿ ಸಬಲವಾಗುತ್ತಿವೆ ಎಂದು Thawarchand Gehlot ಹೇಳಿದ್ದಾರೆ.
ಸಾಮಾಜಿಕ ಹಾಗೂ ರಾಜಕೀಯ ಚೈತನ್ಯ ಹೆಚ್ಚುತ್ತಿದೆ
77ನೇ ಗಣರಾಜ್ಯೋತ್ಸವದ ಅಂಗವಾಗಿ ಬೆಂಗಳೂರಿನ ಮಾಣೆಕ್ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ರಾಜ್ಯಪಾಲರು, ರಾಜ್ಯ ಸರ್ಕಾರ ಪ್ರಾದೇಶಿಕ ಅಸಮಾನತೆಗಳನ್ನು ಹೋಗಲಾಡಿಸಲು ನಿರಂತರವಾಗಿ ಶ್ರಮಿಸುತ್ತಿದೆ ಎಂದು ಹೇಳಿದರು. ಇದರ ಮೂಲಕ ಕರ್ನಾಟಕದಲ್ಲಿ ಸಾಮಾಜಿಕ ಹಾಗೂ ರಾಜಕೀಯ ಚೈತನ್ಯ ಹೆಚ್ಚುತ್ತಿದೆ ಎಂದರು.
ಪರಿಹಾರ ನೀಡುವ ಕೆಲಸವನ್ನು ಸರ್ಕಾರ ಮಾಡುತ್ತಿದೆ
ಕರ್ನಾಟಕ ಸರ್ಕಾರವು ಸಂವಿಧಾನದಲ್ಲಿ ಪ್ರಸ್ತಾಪಿಸಿರುವ ಭಾತೃತ್ವ, ಸ್ವಾತಂತ್ರ್ಯ ಮತ್ತು ಸಮಾನತೆ ತತ್ವಗಳನ್ನು ಆದ್ಯತೆಯ ವಿಷಯಗಳಾಗಿ ಪರಿಗಣಿಸಿ ಕಾರ್ಯನಿರ್ವಹಿಸುತ್ತಿದೆ. ರಾಜ್ಯದ ಪ್ರತಿ ಪ್ರದೇಶ ಹಾಗೂ ಪ್ರತಿಯೊಂದು ಸಮುದಾಯದ ಜನರ ಧ್ವನಿಯನ್ನು ಆಲಿಸಿ, ಅವರಿಗೆ ನ್ಯಾಯೋಚಿತ ಪರಿಹಾರ ನೀಡುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದು ಹೇಳಿದರು.
ಇದನ್ನು ಓದಿ : ಅಮಾಯಕ ಜೀವ ಬಲಿ ಪಡೆದ ಮುಳ್ಳು ತಂತಿ..!

ಹಿಂದುಳಿದ ವರ್ಗಗಳಿಗೆ ಪ್ರಾಧಾನ್ಯತೆ
ಸರ್ಕಾರದ ವಿವಿಧ ನೇಮಕಾತಿ ಪ್ರಕ್ರಿಯೆಗಳಲ್ಲಿ ಅಲಕ್ಷಿತ ಮತ್ತು ಹಿಂದುಳಿದ ವರ್ಗಗಳಿಗೆ ಪ್ರಾಧಾನ್ಯತೆ ನೀಡಲಾಗುತ್ತಿದೆ. ವಿವಿಧ ಸಮುದಾಯಗಳ ಸಾಮಾಜಿಕ ಹಾಗೂ ಆರ್ಥಿಕ ಸ್ಥಿತಿಯನ್ನು ಅರ್ಥಮಾಡಿಕೊಳ್ಳಲು ಆಯೋಗಗಳನ್ನು ರಚಿಸಿ, ಅವುಗಳ ಶಿಫಾರಸುಗಳನ್ನು ಜಾರಿಗೊಳಿಸಲಾಗುತ್ತಿದೆ ಎಂದು ರಾಜ್ಯಪಾಲರು ವಿವರಿಸಿದರು.
ರಾಜ್ಯ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ
ಸಂವಿಧಾನದ ಆಶಯದಂತೆ ಅತ್ಯಂತ ಹಿಂದುಳಿದವರ ಬಲವರ್ಧನೆಗಾಗಿ ಹಾಗೂ ಜನರಿಗೆ ಆರ್ಥಿಕ ಚೈತನ್ಯ ಒದಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ವಿಶೇಷವಾಗಿ ಮಹಿಳಾ ಸಮುದಾಯದಲ್ಲಿ ಹೊಸ ಆರ್ಥಿಕ ಹಾಗೂ ಸಾಮಾಜಿಕ ಉತ್ಸಾಹ ಕಂಡುಬರುತ್ತಿದೆ ಎಂದರು.
ದೇಶದಲ್ಲಿ ಗ್ರಾಹಕ ಬೆಲೆ ಸೂಚ್ಯಂಕಗಳು ಆರೋಗ್ಯಕರವಾಗಿರುವ ಕೆಲವೇ ರಾಜ್ಯಗಳಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ ಎಂದು ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಬಣ್ಣಿಸಿದ್ದಾರೆ.

ಇದನ್ನು ನೋಡಿ : BREAKING : ಮಹಿಳೆಯರಿಗೆ ಅವಮಾನ ಆರೋಪ : ಬಿಜೆಪಿ ಶಾಸಕ ಸುರೇಶ್ ಕುಮಾರ್ ವಿರುದ್ಧ ದೂರು ದಾಖಲು




