Bengaluru : ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಧ್ವಜಾರೋಹಣ ನೆರವೇರಿಸಿದರು. ಸಿಎಂ ಸಿದ್ದರಾಮಯ್ಯ ಸೇರಿ ಗಣ್ಯರು ಭಾಗವಹಿಸಿದರು, ಬಿಗಿ ಭದ್ರತೆ ಮತ್ತು 2,000 ಇ-ಪಾಸ್ ವ್ಯವಸ್ಥೆ ಮಾಡಲಾಯಿತು.

Bengaluru : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 77ನೇ ಗಣರಾಜ್ಯೋತ್ಸವವನ್ನು (Republic Day 2026) ಸಂಭ್ರಮ ಹಾಗೂ ಗೌರವದೊಂದಿಗೆ ಆಚರಿಸಲಾಯಿತು. ಮಾಣೆಕ್ ಷಾ ಪರೇಡ್ ಮೈದಾನದಲ್ಲಿ (Manekshaw Parade Ground) ಬೆಳಿಗ್ಗೆ ಸರಿಯಾಗಿ 9 ಗಂಟೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ (Thawar Chand Gehlot) ರಾಷ್ಟ್ರಧ್ವಜಾರೋಹಣ ನೆರವೇರಿಸಿದರು.
ಧ್ವಜಾರೋಹಣದ ಬಳಿಕ ರಾಷ್ಟ್ರಗೀತೆಯೊಂದಿಗೆ ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸಲಾಯಿತು. ನಂತರ ರಾಜ್ಯಪಾಲರು ಪೊಲೀಸರಿಂದ ವಂದನಾ ಗೌರವ ಸ್ವೀಕರಿಸಿ, ಗಣರಾಜ್ಯೋತ್ಸವ ಪರೇಡ್ ವೀಕ್ಷಿಸಿದರು. ಈ ವೇಳೆ ಅವರು ರಾಜ್ಯದ ಜನತೆಯನ್ನು ಉದ್ದೇಶಿಸಿ ಸಂದೇಶ ನೀಡಿದರು.
ಇದನ್ನು ನೋಡಿ : RCBಗೆ ಮೋಸ ಮಾಡಿದ ಎಲೀಸ್ ಪೆರ್ರಿ! ಪೆರ್ರಿ, ಪೆರ್ರಿ ಬೇರೆಡೆಗೆ ಪೇರಿ..!

ಸಿಎಂ ಸಿದ್ದರಾಮಯ್ಯ ಸೇರಿ ಗಣ್ಯರ ಭಾಗಿ
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಸೇರಿದಂತೆ ಅನೇಕ ಗಣ್ಯರು, ಹಿರಿಯ ಅಧಿಕಾರಿಗಳು ಮತ್ತು ಆಹ್ವಾನಿತ ಅತಿಥಿಗಳು ಉಪಸ್ಥಿತರಿದ್ದರು. ಭವ್ಯವಾದ ಪರೇಡ್ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಎಲ್ಲರ ಗಮನ ಸೆಳೆದವು.
ಗಣರಾಜ್ಯೋತ್ಸವ ಹಿನ್ನೆಲೆ ಮಾಣೆಕ್ ಷಾ ಪರೇಡ್ ಮೈದಾನ ಸುತ್ತಮುತ್ತ ಹಾಗೂ ನಗರಾದ್ಯಂತ ಬಿಗಿ ಭದ್ರತೆ ಕೈಗೊಳ್ಳಲಾಗಿತ್ತು. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಮುಂಜಾಗ್ರತೆ ವಹಿಸಿದ್ದರು. ಸಾರ್ವಜನಿಕರ ಭಾಗವಹಿಸುವಿಕೆಗೆ ಆನ್ಲೈನ್ ಮೂಲಕ 2,000 ಇ-ಪಾಸ್ ವ್ಯವಸ್ಥೆ ಮಾಡಲಾಗಿತ್ತು.
ವಿದ್ಯಾರ್ಥಿಗಳ ಭಾಗಿ, ಸಾವಿರಾರು ಪೊಲೀಸರ ನಿಯೋಜನೆ
ಪರೇಡ್ನಲ್ಲಿ ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳು ಸೇರಿ ಒಟ್ಟು 516 ಮಂದಿ ಭಾಗವಹಿಸಿದ್ದರು. ಭದ್ರತೆ ಸೇರಿದಂತೆ ವಿವಿಧ ಕರ್ತವ್ಯಗಳಲ್ಲಿ ಸುಮಾರು 2,000 ಪೊಲೀಸರು ನಿಯೋಜಿತರಾಗಿದ್ದರು.
ಇದನ್ನು ಓದಿ : ಗಣರಾಜ್ಯೋತ್ಸವದ ದಿನವೇ ತುಮಕೂರಿನಲ್ಲಿ ಭೀಕರ Accident




