ಮಹಿಳೆಯರಿಗೆ ಅವಮಾನ ಆರೋಪ : ಬಿಜೆಪಿ ಶಾಸಕ Suresh Kumar ವಿರುದ್ಧ ದೂರು ದಾಖಲು.

ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್ ವಿರುದ್ಧ ಶಾಸಕ ಎಸ್. ಸುರೇಶ್ ಕುಮಾರ್ ನೀಡಿದ್ದ ವಿವಾದಾತ್ಮಕ ಹೇಳಿಕೆ ಪ್ರಕರಣದ ಸಂಬಂಧ, ಬೆಂಗಳೂರು ಕೇಂದ್ರ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಮುಖ್ಯಸ್ಥರಾದ ಜಿ. ಪ್ರಕಾಶ್ ಹಾಗೂ ಮನೋಹರ್ ಅವರ ನೇತೃತ್ವದ ಕಾಂಗ್ರೆಸ್ ನಿಯೋಗವು ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದೆ.
ಶಾಸಕರು ಕ್ಷಮೆಯಾಚಿಸಬೇಕು
ಮಹಿಳೆಯರಿಗೆ ಅವಮಾನ ಮಾಡಿದ ಶಾಸಕರು ಕ್ಷಮೆಯಾಚಿಸಬೇಕು ಎಂಬ ಘೋಷಣೆಗಳಿರುವ ಪೋಸ್ಟರ್ಗಳನ್ನು ಅಂಟಿಸಿ, ಶನಿವಾರ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಈ ಸಂಬಂಧ ದೂರು ಸಲ್ಲಿಸಲು ಮೊದಲು ಬಸವೇಶ್ವರ ನಗರ ಪೊಲೀಸ್ ಠಾಣೆಗೆ ತೆರಳಿದ್ದರು. ಆದರೆ ಘಟನೆ ವಿಧಾನಸೌಧ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿರುವುದರಿಂದ, ಅಲ್ಲಿಯೇ ದೂರು ದಾಖಲಿಸಲು ಅಧಿಕಾರಿಗಳು ಸೂಚಿಸಿದ್ದರು.

ಇದನ್ನು ಓದಿ : Bengaluru : ರಾಜ್ಯ ಸರ್ಕಾರವನ್ನು ಹಾಡಿ ಹೊಗಳಿದ ಗವರ್ನರ್
ಮಹಿಳೆಯರ ಗೌರವಕ್ಕೆ ಧಕ್ಕೆ
ಈ ಹಿನ್ನೆಲೆಯಲ್ಲಿ ನೆನ್ನೆ ಕಾಂಗ್ರೆಸ್ ನಿಯೋಗವು ವಿಧಾನಸೌಧ ಪೊಲೀಸ್ ಠಾಣೆಗೆ ತೆರಳಿ ದೂರು ಸಲ್ಲಿಸಿದೆ. ಮಹಿಳೆಯರ ಗೌರವಕ್ಕೆ ಧಕ್ಕೆ ತರುವ ರೀತಿಯಲ್ಲಿ ನಿಂದನಾತ್ಮಕ ಹೇಳಿಕೆ ನೀಡಿರುವ ಶಾಸಕ Suresh Kumar ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರುದಲ್ಲಿ ಮನವಿ ಮಾಡಲಾಗಿದೆ.
ಈ ಪ್ರಕರಣವು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದ್ದು, ಮುಂದಿನ ಕ್ರಮಗಳತ್ತ ಎಲ್ಲರ ಗಮನ ಕೇಂದ್ರೀಕೃತವಾಗಿದೆ.

ಇದನ್ನು ನೋಡಿ : GUBBI | ಗುಬ್ಬಿಯಲ್ಲಿ ಹಿಂದೂ ಸಮಾಜ್ಯೋತ್ಸವಕ್ಕೆ ಕ್ಷಣಗಣನೆ




