Udupi ಜಿಲ್ಲೆಯ ಮಲ್ಪೆ ಬೀಚ್ ಸಮೀಪ ಕೋಡಿಬೆಂಗ್ರೆಯಲ್ಲಿ ಪ್ರವಾಸಿ ದೋಣಿ ಮಗುಚಿ ಬಿದ್ದ ಪರಿಣಾಮ ಮೈಸೂರಿನ ಬಿಪಿಒ ಉದ್ಯೋಗಿಗಳ ಪೈಕಿ ಇಬ್ಬರು ಸಾವನ್ನಪ್ಪಿದ್ದು, ನಾಲ್ವರು ಸ್ಥಿತಿ ಗಂಭೀರವಾಗಿದೆ.

Udupi ಜಿಲ್ಲೆಯ ಕೋಡಿಬೆಂಗ್ರೆ ಸಮೀಪದ ಅರಬ್ಬಿ ಸಮುದ್ರದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಪ್ರವಾಸಿ ದೋಣಿ (Tourist Boat Overturn) ಮಗುಚಿ ಬಿದ್ದು ಇಬ್ಬರು ಸಾವನ್ನಪ್ಪಿದ್ದಾರೆ. ಮೈಸೂರಿನಿಂದ ಬಂದಿದ್ದ ಬಿಪಿಒ ಉದ್ಯೋಗಿಗಳ ತಂಡ ಈ ದುರ್ಘಟನೆಯಲ್ಲಿಗೆ ಸಿಲುಕಿದೆ.
ಮೈಸೂರಿನ ಸರಸ್ವತಿಪುರಂನಿಂದ ಪ್ರವಾಸಕ್ಕೆ ಆಗಮಿಸಿದ್ದ 28 ಬಿಪಿಒ ಕಾಲ್ ಸೆಂಟರ್ ಉದ್ಯೋಗಿಗಳು ಎರಡು ಟೂರಿಸ್ಟ್ ಬೋಟ್ಗಳಲ್ಲಿ ಮಲ್ಪೆ ಬೀಚ್ ಬಳಿ ಸಮುದ್ರ ವಿಹಾರಕ್ಕೆ ತೆರಳಿದ್ದರು.
ಪ್ರತಿ ಬೋಟ್ನಲ್ಲಿ 14 ಮಂದಿ ಇದ್ದು, ಕೋಡಿಬೆಂಗ್ರೆ ಅಳಿವೆ ಬಾಗಿಲಿನ ಬಳಿ ಸಮುದ್ರದ ಭಾರೀ ಅಲೆಗಳಿಗೆ ಸಿಲುಕಿದ ಒಂದು ಬೋಟ್ ಅಚಾನಕ್ ಮಗುಚಿ ಬಿದ್ದಿದೆ.
ಸ್ಥಳೀಯರ ಸಮಯಪ್ರಜ್ಞೆಯಿಂದ ಹಲವರ ರಕ್ಷಣೆ
ಅಪಘಾತದ ವೇಳೆ ಪ್ರವಾಸಿಗರು ಸಮುದ್ರದಲ್ಲಿ ಮುಳುಗುತ್ತಿರುವುದನ್ನು ಗಮನಿಸಿದ ಸ್ಥಳೀಯರು ತಕ್ಷಣ ರಕ್ಷಣೆಗೆ ಧಾವಿಸಿ,
ಹಲವರ ಪ್ರಾಣ ಉಳಿಸಿದ್ದಾರೆ. ಈ ಘಟನೆಯಲ್ಲಿ ಶಂಕರಪ್ಪ (22), ಸಿಂಧು (23), ಧರ್ಮರಾಜ್ (26), ದಿಶಾ (26) ಗಂಭೀರವಾಗಿ ಅಸ್ವಸ್ಥಗೊಂಡಿದ್ದರು.
ಆದರೆ, ಚಿಕಿತ್ಸೆ ಫಲಕಾರಿಯಾಗದೆ ಶಂಕರಪ್ಪ ಮತ್ತು ಸಿಂಧು ಸಾವನ್ನಪ್ಪಿದ್ದಾರೆ. ಉಳಿದ ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಸಮೀಪದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇದನ್ನು ಓದಿ : ಮಹಿಳೆಗೆ ಲೈಂಗಿಕ ಕಿರಕುಳ – Dhurandhar ಕಲಾವಿದನ ಬಂಧನ
ಲೈಫ್ ಜಾಕೆಟ್ ಕೊರತೆ? ಸುರಕ್ಷತಾ ನಿಯಮ ಉಲ್ಲಂಘನೆ ಶಂಕೆ
ಪ್ರಾಥಮಿಕ ಮಾಹಿತಿಯ ಪ್ರಕಾರ, ಕೆಲವರು ಲೈಫ್ ಜಾಕೆಟ್ ಧರಿಸದೇ ಬೋಟ್ ರೈಡ್ ನಡೆಸಿದ್ದರು ಎಂಬ ಶಂಕೆ ವ್ಯಕ್ತವಾಗಿದೆ. ಇದರಿಂದಲೇ ಹೆಚ್ಚಿನ ಅನಾಹುತ ಸಂಭವಿಸಿದೆ ಎನ್ನಲಾಗಿದೆ.
ಅಪಘಾತಕ್ಕೆ ಸುರಕ್ಷತಾ ನಿಯಮಗಳ ಉಲ್ಲಂಘನೆ ಕಾರಣವಾಗಿದೆಯೇ ಎಂಬ ಬಗ್ಗೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
ಈ ಘಟನೆ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಸುಹಾನ್ ಹಾಗೂ ಸೂಫಿಯಾನ ಮಾಲೀಕತ್ವದ ಟೂರಿಸ್ಟ್ ಬೋಟ್ಗಳನ್ನು ಈ ಪ್ರವಾಸಕ್ಕೆ ಬಳಸಲಾಗಿತ್ತು. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಹೆಚ್ಚಿನ ಮಾಹಿತಿ ಸಂಗ್ರಹಿಸಿ ತನಿಖೆ ಮುಂದುವರಿಸಿದ್ದಾರೆ.
ಇದನ್ನು ನೋಡಿ : ತುಮಕೂರು ಗ್ರಾಮಾಂತರದಲ್ಲಿ ದಳಪತಿಗೆ ಭರ್ಜರಿ ರೆಸ್ಪಾನ್ಸ್




